ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಒನ್ ಇವಿ ಸ್ಕೂಟರ್!

ದುಬಾರಿ ಇಂಧನ ಪರಿಣಾಮ ಹೊಸ ವಾಹನ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಆದ್ಯತೆ ನೀಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಹೊಸ ನೀರಿಕ್ಷೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿರುವ ಸಿಂಪಲ್ ಎನರ್ಜಿ ಕಂಪನಿಯು ಕೂಡಾ ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಇದೇ ತಿಂಗಳು 15ರಂದು ಕಂಪನಿಯುು ಒನ್ ಇವ ಸ್ಕೂಟರ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಕಂಪನಿಯಾಗಿರುವ ಸಿಂಪಲ್ ಎನರ್ಜಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು 'ಸಿಂಪಲ್ ಒನ್' ಹೆಸರಿನಲ್ಲಿ ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಸ್ಕೂಟರ್ ಅಧಿಕೃತ ಹೆಸರಿನಲ್ಲಿಯೇ ಕಂಪನಿಯು ಈಗಾಗಲೇ ಮೊದಲ ಟೀಸರ್ ಚಿತ್ರವನ್ನು ಸಹ ಪ್ರಕಟಿಸಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಸಿಂಪಲ್ ಎನರ್ಜಿ ಕಂಪನಿಯು ಹೊಸ ಸ್ಕೂಟರ್ ಮಾದರಿಯನ್ನು ಸದ್ಯ ಮಾರ್ಕ್ 2 ಹೆಸರಿನಲ್ಲಿ ಪರೀಕ್ಷೆ ಕೈಗೊಂಡಿದ್ದು, ಅಗಸ್ಟ್ 15ರ ಭಾರತದ ಸ್ವಾತಂತ್ರ್ಯ ದಿನಾಚರಣೆ ವಿಶೇಷತೆಯೊಂದಿಗೆ ಮಾರುಕಟ್ಟೆಗೆ ಪ್ರವೇಶಿಸಲಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಯೆಂತೆ ಹೊಸ ಇವಿ ಸ್ಕೂಟರ್ ಮಾದರಿಯನ್ನು ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಮಾದರಿಯಾಗಿ ಅಭಿವೃದ್ದಿಗೊಳಿಸಿರುವ ಸಿಂಪಲ್ ಎನರ್ಜಿ ಕಂಪನಿಯು ಹೊಸ ಸ್ಕೂಟರ್‌ನಲ್ಲಿ 4.8 ಕಿಲೋವ್ಯಾಟ್ ಸಾಮಾರ್ಥ್ಯದ ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಈ ಮೂಲಕ ಹೊಸ ಸಿಂಪಲ್ ಒನ್ ಇವಿ ಸ್ಕೂಟರ್ ಆವೃತ್ತಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸುವ ಭರವಸೆ ನೀಡಿದ್ದು, ಹೊಸ ಎಲೆಕ್ಟ್ರಿಕ್ ಅಧಿಕೃತ ಮೈಲೇಜ್ ಪ್ರಮಾಣವನ್ನು ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯೇ ಪ್ರಮಾಣೀಕರಿಸಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಈ ಮೂಲಕ ಅತ್ಯುತ್ತಮ ಮೈಲೇಜ್ ಜೊತೆಗೆ ಕೇವಲ 3.6 ಸೆಕೆಂಡುಗಳಲ್ಲಿ ಸೊನ್ನೆಯಿಂದ 50 ಕಿ.ಮೀ ವೇಗ ಪಡೆದುಕೊಳ್ಳುವ ಸಾಮರ್ಥ್ಯ ಹೊಂದಿರುವ ಹೊಸ ಸ್ಕೂಟರ್ ಮಾದರಿಯು ಪ್ರತಿ ಗಂಟೆಗೆ ಗರಿಷ್ಠ 100 ಕಿ.ಮೀ ಟಾಪ್ ಸ್ಪೀಡ್‌ನಲ್ಲಿ ಚಲಿಸಬಲ್ಲದು.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಮತ್ತೊಂದು ಗಮನಸೆಳೆಯುವ ತಾಂತ್ರಿಕ ಅಂಶ ಎಂದರೆ ಸಿಂಪಲ್ ಒನ್ ಸ್ಕೂಟರ್‌ನಲ್ಲಿ ಅಳವಡಿಸಲಾಗಿರುವ 4.8 ಕಿಲೋವ್ಯಾಟ್ ಸಾಮಾರ್ಥ್ಯದ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಗೃಹ ಬಳಕೆಯ ಎಸಿ ಚಾರ್ಜರ್ ಮೂಲಕ 40 ನಿಮೀಷಗಳಲ್ಲಿ ಪೂರ್ಣ ಪ್ರಮಾಣದ ಚಾರ್ಜ್ ಮಾಡಬಹುದಾದರೆ ಫಾಸ್ಟ್ ಚಾರ್ಜಿಂಗ್ ಸೆಂಟರ್‌ಗಳಲ್ಲಿ ಕೇವಲ 17 ನೀಮಿಷಗಳಲ್ಲೇ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಹಾಗೆಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ ಐಪಿ67 ಪ್ರಮಾಣಿಕೃತ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕನೆಕ್ಟೆಡ್ ಫೀಚರ್ಸ್‌ಗಳು, ಆನ್ ಬೋರ್ಡ್ ನ್ಯಾವಿಗೇಷನ್, ಬ್ಲೂಟೂಥ್ ಕನೆಕ್ಟಿವಿಟಿ ಒಳಗೊಂಡಿದ್ದು, ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಇದರೊಂದಿಗೆ ಹೊಸ ಸಿಂಪಲ್ ಒನ್ ಸ್ಕೂಟರ್ ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್, ಪ್ರೀಮಿಯಂ ಫೀಚರ್ಸ್ ಹೊಂದಿದ್ದು, ಹೊಸ ಸ್ಕೂಟರ್ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ. 1.10 ಲಕ್ಷದಿಂದ ರೂ. 1.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ನೀರಿಕ್ಷಿಸಲಾಗಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಇನ್ನು ಸಿಂಪಲ್ ಎನರ್ಜಿ ಕಂಪನಿಯು ಶೇ.90 ರಷ್ಟು ಸ್ಥಳೀಯ ಸಂಪನ್ಮೂಲಗಳ ಬಳಕೆಯೊಂದಿಗೆ ಹೊಸ ಇವಿ ವಾಹನಗಳನ್ನು ಅಭಿವೃದ್ದಿಗೆ ಗುರಿಹೊಂದಿದ್ದು, ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ತನ್ನ ಆರಂಭಿಕ ಸ್ಕೂಟರ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ಸಿಂಪಲ್ ಎನರ್ಜಿ ಹೊಸ ವಾಹನ ಉತ್ಪದನಾ ಘಟಕದಲ್ಲಿ ವಾರ್ಷಿಕವಾಗಿ 50 ಸಾವಿರ ಸ್ಕೂಟರ್ ನಿರ್ಮಾಣ ಮಾಡುವ ಗುರಿಹೊಂದಲಾಗಿದ್ದು, ಬಿಡುಗಡೆಗೂ ಮುನ್ನವೇ ಹೊಸ ಸ್ಕೂಟರ್ ಈಗಾಗಲೇ ಸಾಕಷ್ಟು ಚರ್ಚೆಯಲ್ಲಿದೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಸ್ಕೂಟರ್ ನಿರ್ಮಾಣ ಮಾಡಿರುವ ಸಿಂಪಲ್ ಎನರ್ಜಿ ಕಂಪನಿಯ ಕಾರ್ಯವೈಖರಿಯನ್ನು ಮೆಚ್ಚಿರುವ ಹಲವು ಬೃಹತ್ ಆಟೋ ಉತ್ಪಾದನಾ ಕಂಪನಿಗಳು ಹೊಸ ಕಂಪನಿಯ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾಗಿವೆ.

ಓಲಾ ಇವಿ ಸ್ಕೂಟರ್‌ಗೆ ಪೈಪೋಟಿ ನೀಡಲು ಸಿದ್ದವಾದ ಸಿಂಪಲ್ ಎನರ್ಜಿ ನಿರ್ಮಾಣದ ಎಲೆಕ್ಟ್ರಿಕ್ ಸ್ಕೂಟರ್!

ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಮಟ್ಟದಲ್ಲಿ ಬಳಕೆಯಾಗುವ ನೀರಿಕ್ಷೆಯಿರುವುದರಿಂದ ಇವಿ ಸ್ಕೂಟರ್ ವಿಭಾಗದಲ್ಲಿ ಸಿಂಪಲ್ ಎನರ್ಜಿ ಕಂಪನಿಯು ಗ್ರಾಹಕರ ಆಯ್ಕೆ ಮುಂಚೂಣಿ ಸಾಧಿಸುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಕಂಪನಿಯು ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆಯೊಂದಿಗೆ ವಾರ್ಷಿಕ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುವ ಯೋಜನೆಯಲ್ಲಿದೆ.

Most Read Articles

Kannada
English summary
Simple energy electric scooter expected price and availability details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X