Just In
Don't Miss!
- News
ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: ಹೊಸ ದಾಖಲೆ ಸೃಷ್ಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆಗೆ ಸಜ್ಜಾದ ಸಿಂಪಲ್ ಎನರ್ಜಿ
ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿರುವುದರ ಪರಿಣಾಮ ವಿವಿಧ ಆಟೋ ಕಂಪನಿಗಳು ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಬೆಂಗಳೂರು ಮೂಲದ ಸಿಂಪಲ್ ಎನರ್ಜಿ ಕಂಪನಿಯು ಕೂಡಾ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದಿಗೆ ಬಿಡುಗಡೆಗೆ ಸಜ್ಜಾಗುತ್ತಿದೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳೇ ಹೆಚ್ಚಿನ ಮಟ್ಟದಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಬೆಂಗಳೂರು ಮೂಲದ 'ಸಿಂಪಲ್ ಎನರ್ಜಿ' ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದನ್ನು ಸಿದ್ದಪಡಿಸುವ ಮೂಲಕ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಸಿಂಪಲ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮಾರ್ಕ್ 1 ಮತ್ತು ಮಾರ್ಕ್ 2 ಎನ್ನುವ ಹೆಸರಿನೊಂದಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಇದರಲ್ಲಿ ಮೊದಲ ಹಂತವಾಗಿ ಮಾರ್ಕ್ 2 ಸ್ಕೂಟರ್ ಮಾದರಿಯನ್ನು ಮುಂಬರುವ ಮೇ ಆರಂಭದಲ್ಲಿ ಬಿಡುಗಡೆ ಮಾಡುವುದಾಗಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಸಿಂಪಲ್ ಎನರ್ಜಿ ಕಂಪನಿಯ ಮಾಹಿತಿಯ ಪ್ರಕಾರ ಹೊಸ ಮಾರ್ಕ್ 2 ಸ್ಕೂಟರ್ ಮಾದರಿಯು ತೆಗೆದುಹಾಕಬಹುದಾದ 4 ಕಿಲೋವ್ಯಾಟ್ ಸಾಮಾರ್ಥ್ಯದ ಲೀ-ಅಯಾನ್ ಬ್ಯಾಟರಿ ಪ್ರೇರಣೆಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 280 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ ಎಂದು ಹೇಳಿಕೊಂಡಿತ್ತು.

ಆದರೆ ಎಆರ್‌ಎಐ(ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ) ಸಂಸ್ಥೆಯು ನಡೆಸಿದ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ಹೊಸ ಮಾರ್ಕ್ 2 ಸ್ಕೂಟರ್ ಮಾದರಿಯು ಸರಾಸರಿಯಾಗಿ 230 ಕಿ.ಮೀ ಮತ್ತು ಇಕೋ ಮೋಡ್‍ನಲ್ಲಿ 240 ಕಿ.ಮೀ ಮೈಲೇಜ್ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದೆ. ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ ಹೊಸ ಮಾರ್ಕ್ 2 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಟಾಪ್ ಸ್ಪೀಡ್ ಹೊಂದಿದ್ದು, ಪ್ರತಿ ಗಂಟೆಗೆ ಗರಿಷ್ಠ 100ಕಿ.ಮೀ ಟಾಪ್ ಸ್ಪೀಡ್ ಪಡೆದುಕೊಂಡಿದೆ.

ಈ ಮೂಲಕ ಕೇವಲ 3.6 ಸೆಕೆಂಡುಗಳಲ್ಲಿ ಸೊನ್ನೆಯಿಂದ 50 ಕಿ.ಮೀ ವೇಗ ಪಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದು, ಇದು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲೇ ಅತಿ ವೇಗದ ಮತ್ತು ಹೆಚ್ಚು ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

ಇನ್ನು ಮಾರ್ಕ್ 2 ಸ್ಕೂಟರ್‌ನಲ್ಲಿ ಅಳವಡಿಸಲಾಗಿರುವ ಲೀ-ಅಯಾನ್ ಬ್ಯಾಟರಿಯು ಗೃಹ ಬಳಕೆಯ ಚಾರ್ಜರ್ ಮೂಲಕ 40 ನಿಮೀಷಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಬಹುದಾದರೇ ಫಾಸ್ಟ್ ಚಾರ್ಜಿಂಗ್ ಸೆಂಟರ್‌ಗಳಲ್ಲಿ ಕೇವಲ 17 ನೀಮಿಷಗಳಲ್ಲೇ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

ಹಾಗೆಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ ಐಪಿ67 ಪ್ರಮಾಣಿಕೃತ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಮತ್ತು ಕನೆಕ್ಟೆಡ್ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಗುಣಮಟ್ಟದ ಬಿಡಿಭಾಗಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 1.20 ಲಕ್ಷದಿಂದ ರೂ. 1.50 ಲಕ್ಷದೊಳಗೆ ಬಿಡುಗಡೆಯಾಗುವ ನೀರಿಕ್ಷೆಗಳಿವೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಸಿಂಪಲ್ ಎನರ್ಜಿ ಕಂಪನಿಯು ಶೇ.90 ರಷ್ಟು ಸ್ಥಳೀಯ ಸಂಪನ್ಮೂಲದೊಂದಿಗೆ ಹೊಸ ಸ್ಕೂಟರ್ ಉತ್ಪನ್ನಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಬೆಂಗಳೂರಿನ ಯಲಹಂಕದಲ್ಲಿ ಆರಂಭಿಕ ಸ್ಕೂಟರ್ ಉತ್ಪಾದನಾ ಘಟಕವನ್ನು ಹೊಂದಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲಿರುವ ಸಿಂಪಲ್ ಎನರ್ಜಿ ಕಂಪನಿಯ ಹೊಸ ಯೋಜನೆ ಮೇಲೆ ಈಗಾಗಲೇ ಹಲವಾರು ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದು, ಹೊಸ ಬಂಡವಾಳ ಹೂಡಿಕೆಯಿಂದಾಗಿ ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡಲು ಸಹಕಾರಿಯಾಗಲಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಆರಂಭಿಕ ಹಂತವಾಗಿ ಬೆಂಗಳೂರು ಮತ್ತು ದೆಹಲಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ಆರಂಭಿಸಲಿರುವ ಸಿಂಪಲ್ ಎನರ್ಜಿ ಕಂಪನಿಯು ಎರಡನೇ ಹಂತದಲ್ಲಿ ಮುಂಬೈ, ಚೆನ್ನೈ ಮತ್ತು ಹೈದ್ರಾಬಾದ್‌ನಲ್ಲಿ ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಲಿದೆ.