Just In
Don't Miss!
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Finance
ಮಹಾರಾಷ್ಟ್ರದಲ್ಲಿ ಲಾಕ್ಡೌನ್: ಕಾರುಗಳ ಉತ್ಪಾದನೆ ಮೇಲೆ ಭಾರೀ ಪರಿಣಾಮ
- News
ಬಿಟ್ ಕಾಯಿನ್ ಮೌಲ್ಯ $60,000 ನಂತೆ ಸ್ಥಿರ, ಟ್ರೇಡರ್ಸ್ಗೆ ನೆಮ್ಮದಿ
- Movies
ಸುಶಾಂತ್ ಸಿಂಗ್ ಸಾವಿನ ಬಗ್ಗೆ ಕಂಗನಾ ರಣಾವತ್ ಯೂ-ಟರ್ನ್?
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುತ್ತೆ ಬೆಂಗಳೂರಿನಲ್ಲೇ ನಿರ್ಮಾಣವಾದ ಈ ಸಿಂಪಲ್ ಇವಿ ಸ್ಕೂಟರ್
ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಪರಿಣಾಮ ವಿವಿಧ ಆಟೋ ಕಂಪನಿಗಳು ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಬೆಂಗಳೂರು ಮೂಲದ ಸಿಂಪಲ್ ಎನರ್ಜಿ ಕಂಪನಿಯು ಕೂಡಾ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದಿಗೆ ಬಿಡುಗಡೆಗೆ ಸಜ್ಜಾಗುತ್ತಿದೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳೇ ಹೆಚ್ಚಿನ ಮಟ್ಟದಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಬೆಂಗಳೂರು ಮೂಲದ 'ಸಿಂಪಲ್ ಎನರ್ಜಿ' ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದನ್ನು ಸಿದ್ದಪಡಿಸುವ ಮೂಲಕ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಸಿಂಪಲ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮಾರ್ಕ್ 2 ಎನ್ನುವ ಹೆಸರಿನೊಂದಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಉತ್ಪಾದನಾ ಮಾದರಿಯೊಂದಿಗೆ ಅಂತಿಮ ಹಂತದ ಟ್ರ್ಯಾಕ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಸಿಂಪಲ್ ಎನರ್ಜಿ ಕಂಪನಿಯ ಮಾಹಿತಿಯ ಪ್ರಕಾರ ಹೊಸ ಮಾರ್ಕ್ 2 ಸ್ಕೂಟರ್ ಮಾದರಿಯು ತೆಗೆದುಹಾಕಬಹುದಾದ 4.8 ಕಿಲೋವ್ಯಾಟ್ ಸಾಮಾರ್ಥ್ಯದ ಲೀಥಿಯಂ ಅಯಾನ್ ಬ್ಯಾಟರಿ ಪ್ರೇರಣೆಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸುವ ಭರವಸೆ ನೀಡಿದೆ.

ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯು ನಡೆಸಿದ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ಹೊಸ ಮಾರ್ಕ್ 2 ಸ್ಕೂಟರ್ ಮಾದರಿಯು ವಿವಿಧ ರೈಡಿಂಗ್ ಮೋಡ್‌ನಲ್ಲಿ ಪ್ರತಿ ಚಾರ್ಚ್‌ಗೆ ಸರಾಸರಿಯಾಗಿ 230 ಕಿ.ಮೀ ಮತ್ತು ಇಕೋ ಮೋಡ್‍ನಲ್ಲಿ 240 ಕಿ.ಮೀ ಮೈಲೇಜ್ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದೆ. ಅತ್ಯುತ್ತಮ ಮೈಲೇಜ್ ಜೊತೆಗೆ ಕೇವಲ 3.6 ಸೆಕೆಂಡುಗಳಲ್ಲಿ ಸೊನ್ನೆಯಿಂದ 50 ಕಿ.ಮೀ ವೇಗ ಪಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದು, ಹೊಸ ಸ್ಕೂಟರ್ ಪ್ರತಿ ಗಂಟೆಗೆ ಗರಿಷ್ಠ 100 ಕಿ.ಮೀ ವೇಗ ಹೊಂದಿದೆ.

ಈ ಮೂಲಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲೇ ಅತಿ ವೇಗದ ಮತ್ತು ಹೆಚ್ಚು ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, ಅತಿ ಕಡಿಮೆ ಸಮಯದಲ್ಲಿ ಪೂರ್ಣ ಪ್ರಮಾಣದ ಚಾರ್ಜಿಂಗ್ ಪಡೆದುಕೊಳ್ಳಬಹುದು.

ಮಾರ್ಕ್ 2 ಸ್ಕೂಟರ್‌ನಲ್ಲಿ ಅಳವಡಿಸಲಾಗಿರುವ 4.8 ಕಿಲೋವ್ಯಾಟ್ ಸಾಮಾರ್ಥ್ಯದ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಗೃಹ ಬಳಕೆಯ ಚಾರ್ಜರ್ ಮೂಲಕ 40 ನಿಮೀಷಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಬಹು ಫಾಸ್ಟ್ ಚಾರ್ಜಿಂಗ್ ಸೆಂಟರ್‌ಗಳಲ್ಲಿ ಕೇವಲ 17 ನೀಮಿಷಗಳಲ್ಲೇ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

ಹಾಗೆಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ ಐಪಿ67 ಪ್ರಮಾಣಿಕೃತ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕನೆಕ್ಟೆಡ್ ಫೀಚರ್ಸ್‌ಗಳು, ಆನ್ ಬೋರ್ಡ್ ನ್ಯಾವಿಗೇಷನ್, ಬ್ಲೂಟೂಥ್ ಕನೆಕ್ಟಿವಿಟಿ ಒಳಗೊಂಡಿದ್ದು, ಗುಣಮಟ್ಟದ ಬಿಡಿಭಾಗಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 1.20 ಲಕ್ಷದಿಂದ ರೂ. 1.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿವೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಬೆಂಗಳೂರಿನಲ್ಲೇ ನಿರ್ಮಾಣವಾಗಲಿವೆ ಸಿಂಪಲ್ ಇವಿ ಸ್ಕೂಟರ್
ಸಿಂಪಲ್ ಎನರ್ಜಿ ಕಂಪನಿಯು ಶೇ.90 ರಷ್ಟು ಸ್ಥಳೀಯ ಸಂಪನ್ಮೂಲದೊಂದಿಗೆ ಹೊಸ ಸ್ಕೂಟರ್ ಉತ್ಪನ್ನಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆರಂಭಿಕ ಸ್ಕೂಟರ್ ಉತ್ಪಾದನಾ ಘಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಿದೆ.

ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ವೈಟ್‌ಫೀಲ್ಡ್ ವಾಹನ ಘಟಕದಲ್ಲಿ ವಾರ್ಷಿಕವಾಗಿ 50 ಸಾವಿರ ಸ್ಕೂಟರ್ ನಿರ್ಮಾಣ ಮಾಡುವ ಗುರಿಹೊಂದಿರುವ ಸಿಂಪಲ್ ಎನರ್ಜಿ ಕಂಪನಿಯು ಹಂತ ಹತವಾಗಿ ವಿವಿಧ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನಿರ್ಮಾಣ ಮಾಡಲಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಸದ್ಯ ಬಿಡುಗಡೆಗಾಗಿ ಸಿದ್ದಗೊಳಿಸಲಾಗುತ್ತಿರುವ ಮಾರ್ಕ್ 2 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಉತ್ಪಾದನಾ ಮಾದರಿಯೊಂದಿಗೆ ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದ್ದು, ಸಿಂಪಲ್ ಎನರ್ಜಿ ಕಂಪನಿಯ ಹೊಸ ಯೋಜನೆ ಮೇಲೆ ಈಗಾಗಲೇ ಹಲವಾರು ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆಗೆ ಒಪ್ಪಿಗೆ ಸೂಚಿಸಿರುವುದು ಬೃಹತ್ ಪ್ರಮಾಣದಲ್ಲಿ ಸಿಂಪಲ್ ಸ್ಕೂಟರ್‌ಗಳು ಉತ್ಪಾದನೆಗೊಳ್ಳಲಿವೆ.