ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಬೆಂಗಳೂರು ಮೂಲದ Simple Energy ಕಂಪನಿಯು ತನ್ನ ಬಹುನೀರಿಕ್ಷಿತ Simple One ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ವಿಶ್ವದಲ್ಲೇ ಅತಿ ಹೆಚ್ಚು ಮೈಲೇಜ್ ಹೊಂದಿರುವ ಇವಿ ಸ್ಕೂಟರ್ ಎಂಬ ಹೆಗ್ಗೆಳಿಕೆಗೆ ಪಾತ್ರವಾಗಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಹೊಸ ಇವಿ ಸ್ಕೂಟರ್ ಮಾದರಿಯು ತಾಂತ್ರಿಕ ಅಂಶಗಳಲ್ಲಿ, ಬ್ಯಾಟರಿ ರೇಂಜ್ ಮತ್ತು ಬೆಲೆ ವಿಚಾರವಾಗಿ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಇವಿ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಇತರೆ ಎಲ್ಲಾ ಇವಿ ಸ್ಕೂಟರ್‌ಗಳಿಗೂ ಉತ್ತಮ ಪೈಪೋಟಿ ನೀಡಲಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

Simple Energy ಕಂಪನಿಯು Simple One ಇವಿ ಸ್ಕೂಟರ್ ಬೆಲೆಯನ್ನು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 1,09,999ಕ್ಕೆ ನಿಗದಿಪಡಿಸಿದ್ದು, ಹೊಸ ಸ್ಕೂಟರ್ ಬಿಡುಗಡೆಯ ನಂತರ ಒಂದೇ ವಾರದಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

Simple One ಇವಿ ಸ್ಕೂಟರ್ ಮಾದರಿಯು ನಮ್ಮ ಬೆಂಗಳೂರಿನಲ್ಲಿಯೇ ನಿರ್ಮಾಣವಾಗುತ್ತಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಶೇ.90ರಷ್ಟು ಸ್ವದೇಶಿ ನಿರ್ಮಿತ ಬಿಡಿಭಾಗಗಳೊಂದಿಗೆ ಅಭಿವೃದ್ದಿ ಹೊಂದಿರುವುದು ಬಜೆಟ್ ಬೆಲೆಯಲ್ಲಿ ಸ್ಕೂಟರ್ ಬಿಡುಗಡೆಗೆ ಪ್ರಮುಖ ಕಾರಣವಾಗಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಸ್ಟಾರ್ಟ್ಅಪ್ ಕಂಪನಿಯಾಗಿರುವ ಸಿಂಪಲ್ ಎನರ್ಜಿ ಕಂಪನಿಯು ಹಲವು ವರ್ಷಗಳ ಪ್ರಯತ್ನದ ನಂತರ Simple One ಮಾದರಿಯನ್ನು ಹೊರತಂದಿದ್ದು, ಹೊಸ ಸ್ಕೂಟರ್ ಮಾದರಿಯನ್ನು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಅತ್ಯುತ್ತಮ ಮೈಲೇಜ್ ಪ್ರೇರಿತ ಬ್ಯಾಟರಿ ರೇಂಜ್ ಮತ್ತು ಕೈಗೆಟುವ ಬೆಲೆಯಲ್ಲಿ ಹೊಸ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಇನ್ನೊಂದು ವಿಶೇಷ ಅಂದರೆ ಸಿಂಪಲ್ ಎನರ್ಜಿ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ನಮ್ಮ ಬೆಂಗಳೂರಿನಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿಗೊಳಿಸಿ ಬಿಡುಗಡೆ ಮಾಡಿದ ಸಂಭ್ರಮಕ್ಕಾಗಿ ಹೊಸ ಸ್ಕೂಟರ್‌ನಲ್ಲಿ 'ನಮ್ಮ ರೆಡ್' ಎನ್ನುವ ವಿಶೇಷ ಬಣ್ಣದ ಆಯ್ಕೆ ನೀಡಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

Simple One ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಗ್ರೆಸ್ ವೈಟ್, ಅಜ್ಯುರ್ ಬ್ಲ್ಯೂ, ಬ್ರೆನೆಜ್ ಬ್ಲ್ಯಾಕ್ ಮತ್ತು ನಮ್ಮ ರೆಡ್ ಬಣ್ಣಗಳ ಆಯ್ಕೆ ನೀಡಿದ್ದು, ಹೊಸ ಸ್ಕೂಟರ್‌ನಲ್ಲಿ ಬೆಲೆಗೆ ತಕ್ಕಂತೆ ಅತ್ಯುತ್ತಮ ಫೀಚರ್ಸ್‌, ಬ್ಯಾಟರಿ ರೇಂಜ್ ನೀಡಲಾಗಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಸ್ವಾತಂತ್ರ್ಯ ಸಂಭ್ರಮದಲ್ಲಿ ಹೊಸ ಸ್ಕೂಟರ್ ಖರೀದಿಗಾಗಿ ರೂ.1947 ಮುಂಗಡ ಹಣದೊಂದಿಗೆ ಬುಕ್ಕಿಂಗ್ ಆರಂಭಿಸಿದ್ದು, ಹೊಸ ಸ್ಕೂಟರ್ ಮಾದರಿಯು ಮುಂಬರುವ ಅಕ್ಟೋಬರ್ ಮಧ್ಯಂತರದಲ್ಲಿ ಇಲ್ಲವೇ ನವೆಂಬರ್ ಆರಂಭದಲ್ಲಿ ವಿತರಣೆ ಆರಂಭವಾಗಲಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

Simple Energy ಕಂಪನಿಯು ದೇಶದ 13 ರಾಜ್ಯಗಳ ಪ್ರಮುಖ ನಗರಗಳಲ್ಲಿ ಸದ್ಯ ಮಾರಾಟ ಸೌಲಭ್ಯವನ್ನು ಆರಂಭಿಸುತ್ತಿದ್ದು, ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಹೆಚ್ಚಿದಂತೆ ಇವಿ ಸ್ಕೂಟರ್ ಮಾರಾಟ ಸೌಲಭ್ಯವು ಹಂತ-ಹಂತವಾಗಿ ದೇಶದ ಪ್ರಮುಖ ದೇಶಗಳಲ್ಲಿ ವಿಸ್ತರಣೆಯಾಗಲಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಇನ್ನು Simple One ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸ್ಪೋರ್ಟಿ ವಿನ್ಯಾಸದೊಂದಿಗೆ ಅತ್ಯುತ್ತಮ ತಂತ್ರಜ್ಞಾನ ಸೌಲಭ್ಯಗಳನ್ನು ಹೊಂದಿದ್ದು, ಹೊಸ ಸ್ಕೂಟರ್‌ನಲ್ಲಿ ತ್ರಿಕೊನಾಕಾರದ ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಹೆಡ್‌‌ಲ್ಯಾಂಪ್, ಸೈಡ್ ಬೈ ಟರ್ನ್ ಸಿಗ್ನಲ್ ಇಂಡಿಕೇಟರ್, ಫ್ಲ್ಯಾಟ್ ಫುಟ್‌ಬೋರ್ಡ್, ಅಯಾಲ್ ವ್ಹೀಲ್, ಸ್ಪೋರ್ಟಿ ರಿಯರ್ ವ್ಯೂ ಮಿರರ್, 30-ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಹೊಂದಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಹೊಸ Simple One ಇವಿ ಸ್ಕೂಟರ್‌ನಲ್ಲಿ 4.5KW ಎಲೆಕ್ಟ್ರಿಕ್ ಮೋಟಾರ್ ಜೊತೆಗೆ 4.8kWh ಲೀಥಿಯಂ ಅಯಾನ್ ಬ್ಯಾಟರಿ(ಡ್ಯುಯಲ್ ಬ್ಯಾಟರಿ) ಜೋಡಣೆ ಮಾಡಿದ್ದು, ಪ್ರತಿ ಚಾರ್ಚ್‌ಗೆ ವಿವಿಧ ರೈಡ್ ಮೋಡ್‌ಗಳ ಚಾಲನಾ ಶೈಲಿ ಆಧಾರದ ಮೇಲೆ ಕನಿಷ್ಠ 203 ಕಿ.ಮೀ ನಿಂದ ಗರಿಷ್ಠ 236 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಪ್ರತಿ ಗಂಟೆಗೆ 105 ಕಿ.ಮೀ ಟಾಪ್ ಸ್ಪೀಡ್ ಹೊಂದಿರುವ ಹೊಸ Simple One ಸ್ಕೂಟರ್ 72 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 2.95 ಸೆಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ಕ್ವಿಕ್ ಸ್ಪೀಡ್ ಪಡೆದುಕೊಳ್ಳಲಿದ್ದು, ಹೊಸ ಸ್ಕೂಟರ್ ಅನ್ನು ಸಿಂಪಲ್ ಕಂಪನಿಯು ಟ್ಯೂಬಲರ್ ಫ್ರೆಮ್ ಬಳಕೆ ಮಾಡಿದೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಜೊತೆಗೆ Simple One ಸ್ಕೂಟರ್ ಮಾದರಿಯಲ್ಲಿ 1024x600 ಫಿಕ್ಸೆಲ್ ಹೊಂದಿರುವ 7 ಇಂಚಿನ ಟಚ್‌ಸ್ಕ್ರೀನ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂಥ್ ಮತ್ತು 4ಜಿ ಇಂಟರ್‌ನೆಟ್ ಸಂಪರ್ಕಕ್ಕಾಗಿ ಕನೆಕ್ಟೆಡ್ ಟೆಕ್ನಾಲಜಿ ನೀಡಲಾಗಿದೆ. ಕನೆಕ್ಟೆಡ್ ಫೀಚರ್ಸ್‌ನಲ್ಲಿ ಜಿಯೋ ಫೆನ್ಸಿಂಗ್, ಮ್ಯೂಜಿಕ್ ಕಂಟ್ರೋಲ್, ಎಸ್ಒಎಸ್ ಮೆಸೇಜ್, ವೆಹಿಕಲ್ ಟ್ರ್ಯಾಕಿಂಗ್, ಡ್ಯಾಕುಮೆಂಟ್ ಸ್ಟೋರೇಜ್, ಫೈಂಡ್ ಮೈ ಬೈಕ್ ಸೌಲಭ್ಯಗಳಿವೆ.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಇನ್ನು ಹೊಸ ಸ್ಕೂಟರಿನಲ್ಲಿರುವ ಡ್ಯುಯಲ್ ಬ್ಯಾಟರಿ ಸೌಲಭ್ಯವು ಪೂರ್ತಿಯಾಗಿ ಚಾರ್ಜ್ ಆಗಲು ಒಟ್ಟು 225 ನಿಮಿಷಗಳನ್ನು(3 ಗಂಟೆ 45 ನಿಮಿಷ) ತೆಗೆದುಕೊಳ್ಳಲಿದ್ದು, ಸಿಂಪಲ್ ಎನರ್ಜಿ ಕಂಪನಿಯು ಸಿಂಪಲ್ ಲೂಪ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯೊಂದಿಗೆ ಕೇವಲ 1 ನಿಮಿಷ ಚಾರ್ಜ್ ಮಾಡಿದರೂ 2.5 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದು.

ಬಿಡುಗಡೆಯಾದ ಮೊದಲ ವಾರವೇ ಭರ್ಜರಿ ಬೇಡಿಕೆ ಪಡೆದುಕೊಂಡ Simple One ಎಲೆಕ್ಟ್ರಿಕ್ ಸ್ಕೂಟರ್

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ Simple Energy ಕಂಪನಿಯು ದೇಶದ ಪ್ರಮುಖ 300 ನಗರಗಳಲ್ಲಿ ಸಿಂಪಲ್ ಲೂಪ್ ಟೆಕ್ನಾಲಜಿ ಪ್ರೇರಿತ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪನೆ ಮಾಡುತ್ತಿದ್ದು, ರೆಸ್ಟೊರೆಂಟ್‌ಗಳು, ಮಾಲ್, ಶಾಂಪಿಂಗ್ ಕಾಪ್ಲೆಕ್ಸ್‌‌ಗಳ ಪಾರ್ಕಿಂಗ್ ಸ್ಥಳಗಳಲ್ಲಿ ಸಹಭಾಗಿತ್ವದೊಂದಿಗೆ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲಿದೆ.

Most Read Articles

Kannada
English summary
Simple energy receives 30 000 pre bookings for the simple one ev scooter
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X