ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಪರಿಣಾಮ ವಿವಿಧ ಆಟೋ ಕಂಪನಿಗಳು ಆಕರ್ಷಕ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಬೆಂಗಳೂರು ಮೂಲದ ಸಿಂಪಲ್ ಎನರ್ಜಿ ಕಂಪನಿಯು ಕೂಡಾ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದಿಗೆ ಬಿಡುಗಡೆಗೆ ಸಜ್ಜಾಗುತ್ತಿದೆ.

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳೇ ಹೆಚ್ಚಿನ ಮಟ್ಟದಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಬೆಂಗಳೂರು ಮೂಲದ 'ಸಿಂಪಲ್ ಎನರ್ಜಿ' ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದನ್ನು ಸಿದ್ದಪಡಿಸುವ ಮೂಲಕ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಸಿಂಪಲ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮಾರ್ಕ್ 2 ಎನ್ನುವ ಕೋಡ್ ನೆಮ್ ಆಧರಿಸಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅಭಿವೃದ್ದಿಗೊಳಿಸಿದ್ದು, ಉತ್ಪಾದನಾ ಮಾದರಿಯೊಂದಿಗೆ ಅಂತಿಮ ಹಂತದ ಟ್ರ್ಯಾಕ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಸ್ಕೂಟರ್ ಅನ್ನು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಅಗಸ್ಟ್ 15ರಂದು ಬಿಡುಗಡೆ ಮಾಡುವುದಾಗಿ ಸಿಂಪಲ್ ಎನರ್ಜಿ ಕಂಪನಿಯೇ ಹೇಳಿಕೊಂಡಿದೆ.

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಸಿಂಪಲ್ ಎನರ್ಜಿ ಕಂಪನಿಯ ಮಾಹಿತಿಯ ಪ್ರಕಾರ ಹೊಸ ಮಾರ್ಕ್ 2 ಸ್ಕೂಟರ್ ಮಾದರಿಯು ತೆಗೆದುಹಾಕಬಹುದಾದ 4.8 ಕಿಲೋವ್ಯಾಟ್ ಸಾಮಾರ್ಥ್ಯದ ಲೀಥಿಯಂ ಅಯಾನ್ ಬ್ಯಾಟರಿ ಪ್ರೇರಣೆಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸುವ ಭರವಸೆ ನೀಡಿದ್ದು, ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯು ನಡೆಸಿದ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ಹೊಸ ಸ್ಕೂಟರ್ ವಿವಿಧ ರೈಡಿಂಗ್ ಮೋಡ್‌ನಲ್ಲಿ ಪ್ರತಿ ಚಾರ್ಚ್‌ಗೆ 230 ಕಿ.ಮೀ ಮತ್ತು 240 ಕಿ.ಮೀ ತನಕ ಮೈಲೇಜ್ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದೆ.

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಈ ಮೂಲಕ ಅತ್ಯುತ್ತಮ ಮೈಲೇಜ್ ಜೊತೆಗೆ ಕೇವಲ 3.6 ಸೆಕೆಂಡುಗಳಲ್ಲಿ ಸೊನ್ನೆಯಿಂದ 50 ಕಿ.ಮೀ ವೇಗ ಪಡೆದುಕೊಳ್ಳುವ ಸಾಮರ್ಥ್ಯ ಹೊಂದಿರುವ ಹೊಸ ಸ್ಕೂಟರ್ ಪ್ರತಿ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದಲ್ಲಿ ಚಲಿಸಬಲ್ಲದು.

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಇದರೊಂದಿಗೆ ಆರಂಭಿಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲೇ ಅತಿ ವೇಗದ ಮತ್ತು ಹೆಚ್ಚು ಮೈಲೇಜ್ ನೀಡಬಲ್ಲ ಇವಿ ಸ್ಕೂಟರ್ ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, ಕೆಲವೇ ನಿಮಿಷಗಳಲ್ಲಿ ಪೂರ್ಣ ಪ್ರಮಾಣದ ಚಾರ್ಜಿಂಗ್ ಪಡೆದುಕೊಳ್ಳಬಹುದು.

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಮಾರ್ಕ್ 2 ಸ್ಕೂಟರ್‌ನಲ್ಲಿ ಅಳವಡಿಸಲಾಗಿರುವ 4.8 ಕಿಲೋವ್ಯಾಟ್ ಸಾಮಾರ್ಥ್ಯದ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಗೃಹ ಬಳಕೆಯ ಚಾರ್ಜರ್ ಮೂಲಕ 40 ನಿಮೀಷಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಬಹುದಾದರೆ ಫಾಸ್ಟ್ ಚಾರ್ಜಿಂಗ್ ಸೆಂಟರ್‌ಗಳಲ್ಲಿ ಕೇವಲ 17 ನೀಮಿಷಗಳಲ್ಲೇ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ ಐಪಿ67 ಪ್ರಮಾಣಿಕೃತ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕನೆಕ್ಟೆಡ್ ಫೀಚರ್ಸ್‌ಗಳು, ಆನ್ ಬೋರ್ಡ್ ನ್ಯಾವಿಗೇಷನ್, ಬ್ಲೂಟೂಥ್ ಕನೆಕ್ಟಿವಿಟಿ ಒಳಗೊಂಡಿದ್ದು, ಗುಣಮಟ್ಟದ ಬಿಡಿಭಾಗಗಳೊಂದಿಗೆ ಹೊಸ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.10 ಲಕ್ಷದಿಂದ ರೂ. 1.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವುದಾಗಿ ಕಂಪನಿಯೇ ಮಾಹಿತಿ ನೀಡಿದೆ.

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಸಿಂಪಲ್ ಎನರ್ಜಿ ಕಂಪನಿಯು ಶೇ.90 ರಷ್ಟು ಸ್ಥಳೀಯ ಸಂಪನ್ಮೂಲಗಳೊಂದಿಗೆ ಹೊಸ ಸ್ಕೂಟರ್ ಉತ್ಪನ್ನಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆರಂಭಿಕ ಸ್ಕೂಟರ್ ಉತ್ಪಾದನಾ ಘಟಕಕ್ಕೆ ಈಗಾಗಲೇ ಅಧಿಕೃತ ಚಾಲನೆ ನೀಡಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ವೈಟ್‌ಫೀಲ್ಡ್ ವಾಹನ ಘಟಕದಲ್ಲಿ ವಾರ್ಷಿಕವಾಗಿ 50 ಸಾವಿರ ಸ್ಕೂಟರ್ ನಿರ್ಮಾಣ ಮಾಡುವ ಗುರಿಹೊಂದಿರುವ ಸಿಂಪಲ್ ಎನರ್ಜಿ ಕಂಪನಿಯು ಹಂತ ಹತವಾಗಿ ವಿವಿಧ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನಿರ್ಮಾಣ ಮಾಡಲಿದೆ.

ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಸದ್ಯ ಬಿಡುಗಡೆಗಾಗಿ ಸಿದ್ದಗೊಳಿಸಲಾಗುತ್ತಿರುವ ಮಾರ್ಕ್ 2 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಉತ್ಪಾದನಾ ಮಾದರಿಯೊಂದಿಗೆ ಹೊಸ ಹೆಸರಿನೊಂದಿಗೆ ಬಿಡುಗಡೆಯಾಗಲಿದ್ದು, ಸಿಂಪಲ್ ಎನರ್ಜಿ ಕಂಪನಿಯ ಹೊಸ ಯೋಜನೆ ಮೇಲೆ ಈಗಾಗಲೇ ಹಲವಾರು ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆಗೆ ಒಪ್ಪಿಗೆ ಸೂಚಿಸಿರುವುದು ಬೃಹತ್ ಪ್ರಮಾಣದಲ್ಲಿ ಸಿಂಪಲ್ ಸ್ಕೂಟರ್‌ಗಳು ಉತ್ಪಾದನೆಗೊಳ್ಳಲಿವೆ.

Most Read Articles

Kannada
English summary
Simple Energy is set to launch the first flagship e-scooter on 15th August 2021.
Story first published: Saturday, May 15, 2021, 14:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X