ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಬಹುನೀರಿಕ್ಷಿತ ಸಿಂಪಲ್ ಎನರ್ಜಿ ನಿರ್ಮಾಣದ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿದ್ದು, ಹೊಸ ಸ್ಕೂಟರ್ ಅಚ್ಚರಿಯ ಬೆಲೆಯೊಂದಿಗೆ ಅಧಿಕ ಮೈಲೇಜ್ ರೇಂಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಭಾರತೀಯ ಆಟೋ ಉದ್ಯಮದಲ್ಲಿ ಎಲೆಕ್ಟ್ರಿಕ್ ವಾಹನಗಳ ಹೊಸ ಕ್ರಾಂತಿ ಆರಂಭವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ. ಭಾರತ ಸ್ವಾತಂತ್ರ್ಯ ದಿನಾಚರಣೆಯೆಂದೆ ಎರಡು ಬಹುನೀರಿಕ್ಷಿತ ಎಲೆಕ್ಟ್ರಿಕ್ ಸ್ಕೂಟರ್‌ಗಳು ಮಾರುಕಟ್ಟೆ ಪ್ರವೇಶಿಸಿದ್ದು, ಓಲಾ ಎಲೆಕ್ಟ್ರಿಕ್ ಕಂಪನಿಯ ಎಸ್ ಸರಣಿ ಸ್ಕೂಟರ್‌ಗಳಿಗೆ ಪೈಪೋಟಿಯಾಗಿ ಸಿಂಪಲ್ ಎನರ್ಜಿ ಕೂಡಾ ಸಿಂಪಲ್ ಒನ್ ಸ್ಕೂಟರ್ ಬಿಡುಗಡೆ ಮಾಡಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಹೊಸ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸಿಂಗಲ್ ವೆರಿಯೆಂಟ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಸ್ಕೂಟರ್ ಬೆಲೆಯನ್ನು ರೂ. 1,09,999ಕ್ಕೆ ನಿಗದಿಪಡಿಸಲಾಗಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸ್ಪೋರ್ಟಿ ವಿನ್ಯಾಸದೊಂದಿಗೆ ಅತ್ಯುತ್ತಮ ತಂತ್ರಜ್ಞಾನ ಸೌಲಭ್ಯಗಳನ್ನು ಹೊಂದಿದ್ದು, ಹೊಸ ಸ್ಕೂಟರ್‌ನಲ್ಲಿ ತ್ರಿಕೊನಾಕಾರದ ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಹೆಡ್‌‌ಲ್ಯಾಂಪ್, ಸೈಡ್ ಬೈ ಟರ್ನ್ ಸಿಗ್ನಲ್ ಇಂಡಿಕೇಟರ್, ಫ್ಲ್ಯಾಟ್ ಫುಟ್‌ಬೋರ್ಡ್, ಅಯಾಲ್ ವ್ಹೀಲ್, ಸ್ಪೋರ್ಟಿ ರಿಯರ್ ವ್ಯೂ ಮಿರರ್, 30-ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಹೊಂದಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಬ್ಯಾಟರಿ ರೇಂಜ್ ಮತ್ತು ಪರ್ಫಾಮೆನ್ಸ್

ಹೊಸ ಸಿಂಪಲ್ ಒನ್ ಇವಿ ಸ್ಕೂಟರ್‌ನಲ್ಲಿ 4.5KW ಎಲೆಕ್ಟ್ರಿಕ್ ಮೋಟಾರ್ ಜೊತೆಗೆ 4.8kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಡ್ಯುಯಲ್ ಬ್ಯಾಟರಿ ಪ್ಯಾಕ್ ಜೊಕೆ ಚೈನ್ ಡ್ರೈವ್ ಸಿಸ್ಟಂ ಹೊಂದಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

72 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಗಂಟೆಗೆ 105 ಕಿ.ಮೀ ಟಾಪ್ ಸ್ಪೀಡ್ ಹೊಂದಿರುವ ಹೊಸ ಸಿಂಪಲ್ ಒನ್ ಸ್ಕೂಟರ್ ಪ್ರತಿ ಚಾರ್ಚ್‌ಗೆ ವಿವಿಧ ರೈಡ್ ಮೋಡ್‌ಗಳಲ್ಲಿ 203 ಕಿ.ಮೀ ನಿಂದ 236 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ಸ್ಕೂಟರ್ ಕೇವಲ 2.95 ಸೆಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ಸ್ಪೀಡ್ ಆಕ್ಸಿಲೇಟರ್ ಮಾಡಬಹುದಾಗಿದ್ದು, 150 ನಿಮಿಷಗಳಲ್ಲಿ ಪೂರ್ತಿ ಬ್ಯಾಟರಿ ಚಾರ್ಜ್ ಮಾಡಲು ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಸಿಂಪಲ್ ಎನರ್ಜಿ ಕಂಪನಿಯ ಸಿಂಪಲ್ ಲೂಪ್ ಚಾರ್ಜಿಂಗ್ ಟೆಕ್ನಾಲಜಿ ಮೂಲಕ ಇವಿ ಸ್ಕೂಟರ್ ಚಾರ್ಜಿಂಗ್ ಸಮಯವನ್ನು ಸಾಕಷ್ಟು ಇಳಿಕೆ ಮಾಡಲಾಗಿದ್ದು, ಸಿಂಪಲ್ ಲೂಪ್ ಮೂಲಕ ಕೇವಲ 1 ನಿಮಿಷ ಚಾರ್ಜ್ ಮಾಡಿದರೂ ಕನಿಷ್ಠ 2.5 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಇನ್ನು ಸಿಂಪಲ್ ಒನ್ ಸ್ಕೂಟರ್ ಮಾದರಿಯಲ್ಲಿ 1024x600 ಫಿಕ್ಸೆಲ್ ಹೊಂದಿರುವ 7 ಇಂಚಿನ ಟಚ್‌ಸ್ಕ್ರೀನ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಜೋಡಣೆ ಮಾಡಲಾಗಿದ್ದು, ಬ್ಲೂಟೂಥ್ ಮತ್ತು 4ಜಿ ಇಂಟರ್‌ನೆಟ್ ಸಂಪರ್ಕ್‌ದೊಂದಿಗೆ ಕನೆಕ್ಟೆಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಹಾಗೆಯೇ ಹೊಸ ಇವಿ ಸ್ಕೂಟರ್‌ನಲ್ಲಿ ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ನೀಡಲಾಗಿದ್ದು, ಕನೆಕ್ಟೆಡ್ ಫೀಚರ್ಸ್‌ನಲ್ಲಿ ಜಿಯೋ ಫೆನ್ಸಿಂಗ್, ಮ್ಯೂಜಿಕ್ ಕಂಟ್ರೋಲ್, ಎಸ್ಒಎಸ್ ಮೆಸೇಜ್, ವೆಹಿಕಲ್ ಟ್ರ್ಯಾಕಿಂಗ್, ಡ್ಯಾಕುಮೆಂಟ್ ಸ್ಟೋರೇಜ್, ಫೈಂಡ್ ಮೈ ಬೈಕ್ ಸೌಲಭ್ಯಗಳನ್ನು ಹೊಂದಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಸಿಂಪಲ್ ಎನರ್ಜಿ ಕಂಪನಿಯು ಹೊಸ ಸಿಂಪಲ್ ಒನ್ ಸ್ಕೂಟರ್ ಉತ್ಪಾದನೆಗಾಗಿ ಟ್ಯೂಬಲರ್ ಫ್ರೆಮ್ ಬಳಕೆ ಮಾಡಿದ್ದು, ಮುಂಭಾಗದಲ್ಲಿ ಟೆಲಿಸ್ಕೋಫಿಕ್ ಸಸ್ಷೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾರ್ಕ್ ಸಸ್ಷೆಷನ್ ನೀಡಲಾಗಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಜೊತೆಗೆ ಹೊಸ ಸ್ಕೂಟರ್‌ನ ಮುಂಭಾಗದಲ್ಲಿ 200ಎಂಎಂ ಡಿಸ್ಕ್ ಮತ್ತು ಹಿಂಬದಿಯಲ್ಲಿ 190 ಎಂಎಂ ಡಿಸ್ಕ್ ಬ್ರೇಕ್ ಜೋಡಣೆ ಮಾಡಲಾಗಿದ್ದು, ಹೊಸ ಸ್ಕೂಟರ್ ಉತ್ಪಾದನೆಗಾಗಿ ಕಂಪನಿಯು ಶೇ.90 ರಷ್ಟು ಸ್ಥಳೀಯ ಸಂಪನ್ಮೂಲಗಳನ್ನು ಬಳಕೆ ಮಾಡಿ ಉತ್ಪಾದನೆ ಮಾಡಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಹೊಸ ಸ್ಕೂಟರ್ ಖರೀದಿಗಾಗಿ ರೂ. 1,947 ಬುಕ್ಕಿಂಗ್ ಬೆಲೆ ನಿಗದಿಪಡಿಸಿದ್ದು, ಸ್ಕೂಟರ್ ವಿತರಣೆಯು ಮುಂದಿನ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಆರಂಭವಾಗಲಿದೆ. ಆರಂಭಿಕವಾಗಿ ವಿವಿಧ ರಾಜ್ಯಗಳ ಪ್ರಮುಖ ನಗರಗಳಲ್ಲಿ ಮಾರಾಟ ಆರಂಭಿಸಲಿರುವ ಸಿಂಪಲ್ ಎನರ್ಜಿಯು ಹಂತ-ಹಂತವಾಗಿ ದೇಶಾದ್ಯಂತ ಇವಿ ಸ್ಕೂಟರ್ ಮಾರಾಟ ಮಳಿಗೆಗಳನ್ನು ತೆರೆಯಲಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಸಿಂಪಲ್ ಎನರ್ಜಿ ಕಂಪನಿಯು ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ವಿವಿಧ ನಗರಗಳಲ್ಲಿ 300 ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುವುದಾಗಿ ಹೇಳಿಕೊಂಡಿದ್ದು, ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆರಂಭಿಕ ಸ್ಕೂಟರ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ನಿರ್ಮಾಣವಾಗಿರುವ ಸಿಂಪಲ್ ಎನರ್ಜಿ ಹೊಸ ವಾಹನ ಉತ್ಪದನಾ ಘಟಕದಲ್ಲಿ ವಾರ್ಷಿಕವಾಗಿ 10 ಲಕ್ಷ ಸ್ಕೂಟರ್ ನಿರ್ಮಾಣ ಮಾಡುವ ಗುರಿಹೊಂದಲಾಗಿದ್ದು, ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಸ್ಕೂಟರ್ ನಿರ್ಮಾಣ ಮಾಡಿರುವ ಸಿಂಪಲ್ ಎನರ್ಜಿ ಕಂಪನಿಗೆ ಭಾರೀ ಬೇಡಿಕೆ ಹರಿದುಬರುವ ನೀರಿಕ್ಷೆಯಿದೆ.

ಅತಿ ಹೆಚ್ಚು ಮೈಲೇಜ್ ಮತ್ತು ಆಕರ್ಷಕ ಬೆಲೆಯ ಸಿಂಪಲ್ ಒನ್ ಇವಿ ಸ್ಕೂಟರ್ ಬಿಡುಗಡೆ

ಇವಿ ಸ್ಕೂಟರ್ ಖರೀದಿ ಹೆಚ್ಚಿಸಲು ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಕಂಪನಿಯು ಪ್ರಮುಖ ರೆಸ್ಟೊರೆಂಟ್‌ಗಳು, ಮಾಲ್, ಶಾಂಪಿಂಗ್ ಕಾಪ್ಲೆಕ್ಸ್‌ಗಳೊಂದಿಗೆ ಸಹಭಾಗಿತ್ವದ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುತ್ತಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದ ಆಧಾರದ ಮೇಲೆ ಇವಿ ವಾಹನಗಳ ಭವಿಷ್ಯ ನಿರ್ಧಾರವಾಗಲಿದೆ.

Most Read Articles

Kannada
English summary
Simple one electric scooter launched in india at rs 1 09 lakh details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X