'ಸಿಂಪಲ್ ಒನ್' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಬೆಂಗಳೂರು ಮೂಲದ 'ಸಿಂಪಲ್ ಎನರ್ಜಿ' ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದನ್ನು ಸಿದ್ದಪಡಿಸುವ ಮೂಲಕ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳೇ ಹೆಚ್ಚಿನ ಮಟ್ಟದಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಸಿಂಪಲ್ ಎನರ್ಜಿ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಎರಡು ಹೊಸ ಸ್ಕೂಟರ್ ಮಾದರಿಗಳನ್ನು ಸಿದ್ದಪಡಿಸಿದೆ.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಸಿಂಪಲ್ ಎನರ್ಜಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾಗಿ ಸಿಂಪಲ್ ಒನ್ ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಸ್ಕೂಟರ್ ಅಧಿಕೃತ ಹೆಸರನ್ನು ಕೇಂದ್ರ ಸಾರಿಗೆ ಇಲಾಖೆಯಲ್ಲಿ ಟ್ರೇಡ್ ಮಾರ್ಕ್ ಸಲ್ಲಿಸಲಾಗಿದೆ.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಹೊಸ ಸ್ಕೂಟರ್ ಮಾದರಿಯನ್ನು ಮಾರ್ಕ್ 2 ಹೆಸರಿನಲ್ಲಿ ಪರೀಕ್ಷೆ ಕೈಗೊಂಡಿದ್ದ ಸಿಂಪಲ್ ಎನರ್ಜಿ ಕಂಪನಿಯು ಇದೀಗ ಅಧಿಕೃತ ಹೆಸರಿನ ಮಾಹಿತಿ ಬಹಿರಂಗಪಡಿಸಿದ್ದು, ಹೊಸ ಸ್ಕೂಟರ್ ಅಗಸ್ಟ್ 15ರಂದೇ ಮಾರುಕಟ್ಟೆಗೆ ಪ್ರವೇಶಿಸಿಸುವುದಾಗಿದೆ ಘೋಷಣೆ ಮಾಡಿದೆ.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಸಿಂಪಲ್ ಎನರ್ಜಿ ಕಂಪನಿಯ ಮಾಹಿತಿಯ ಪ್ರಕಾರ ಹೊಸ ಸಿಂಪಲ್ ಒನ್ ಸ್ಕೂಟರ್ ಮಾದರಿಯು ತೆಗೆದುಹಾಕಬಹುದಾದ 4.8 ಕಿಲೋವ್ಯಾಟ್ ಸಾಮಾರ್ಥ್ಯದ ಲೀಥಿಯಂ ಅಯಾನ್ ಬ್ಯಾಟರಿ ಪ್ರೇರಣೆಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸುವ ಭರವಸೆ ನೀಡಿದೆ.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯು ನಡೆಸಿದ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ಹೊಸ ಸ್ಕೂಟರ್ ವಿವಿಧ ರೈಡಿಂಗ್ ಮೋಡ್‌ನಲ್ಲಿ ಪ್ರತಿ ಚಾರ್ಚ್‌ಗೆ 230 ಕಿ.ಮೀ ಮತ್ತು 240 ಕಿ.ಮೀ ತನಕ ಮೈಲೇಜ್ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದೆ.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಈ ಮೂಲಕ ಅತ್ಯುತ್ತಮ ಮೈಲೇಜ್ ಜೊತೆಗೆ ಕೇವಲ 3.6 ಸೆಕೆಂಡುಗಳಲ್ಲಿ ಸೊನ್ನೆಯಿಂದ 50 ಕಿ.ಮೀ ವೇಗ ಪಡೆದುಕೊಳ್ಳುವ ಸಾಮರ್ಥ್ಯ ಹೊಂದಿರುವ ಹೊಸ ಸ್ಕೂಟರ್ ಪ್ರತಿ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದಲ್ಲಿ ಚಲಿಸಬಲ್ಲದು.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಇದರೊಂದಿಗೆ ಆರಂಭಿಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲೇ ಅತಿ ವೇಗದ ಮತ್ತು ಹೆಚ್ಚು ಮೈಲೇಜ್ ನೀಡಬಲ್ಲ ಇವಿ ಸ್ಕೂಟರ್ ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, ಕೆಲವೇ ನಿಮಿಷಗಳಲ್ಲಿ ಪೂರ್ಣ ಪ್ರಮಾಣದ ಚಾರ್ಜಿಂಗ್ ಪಡೆದುಕೊಳ್ಳಬಹುದು.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಸಿಂಪಲ್ ಒನ್ ಸ್ಕೂಟರ್‌ನಲ್ಲಿ ಅಳವಡಿಸಲಾಗಿರುವ 4.8 ಕಿಲೋವ್ಯಾಟ್ ಸಾಮಾರ್ಥ್ಯದ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಗೃಹ ಬಳಕೆಯ ಚಾರ್ಜರ್ ಮೂಲಕ 40 ನಿಮೀಷಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಬಹುದಾದರೆ ಫಾಸ್ಟ್ ಚಾರ್ಜಿಂಗ್ ಸೆಂಟರ್‌ಗಳಲ್ಲಿ ಕೇವಲ 17 ನೀಮಿಷಗಳಲ್ಲೇ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಹಾಗೆಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ ಐಪಿ67 ಪ್ರಮಾಣಿಕೃತ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕನೆಕ್ಟೆಡ್ ಫೀಚರ್ಸ್‌ಗಳು, ಆನ್ ಬೋರ್ಡ್ ನ್ಯಾವಿಗೇಷನ್, ಬ್ಲೂಟೂಥ್ ಕನೆಕ್ಟಿವಿಟಿ ಒಳಗೊಂಡಿದ್ದು, ಗುಣಮಟ್ಟದ ಬಿಡಿಭಾಗಗಳೊಂದಿಗೆ ಹೊಸ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.10 ಲಕ್ಷದಿಂದ ರೂ. 1.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವುದಾಗಿ ಕಂಪನಿಯೇ ಮಾಹಿತಿ ನೀಡಿದೆ.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಸಿಂಪಲ್ ಎನರ್ಜಿ ಕಂಪನಿಯು ಶೇ.90 ರಷ್ಟು ಸ್ಥಳೀಯ ಸಂಪನ್ಮೂಲಗಳೊಂದಿಗೆ ಹೊಸ ಸ್ಕೂಟರ್ ಉತ್ಪನ್ನಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆರಂಭಿಕ ಸ್ಕೂಟರ್ ಉತ್ಪಾದನಾ ಘಟಕಕ್ಕೆ ಈಗಾಗಲೇ ಅಧಿಕೃತ ಚಾಲನೆ ನೀಡಿದೆ.

ಬಿಡುಗಡೆಯಾಗಲಿದೆ ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಇವಿ ಸ್ಕೂಟರ್

ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ವೈಟ್‌ಫೀಲ್ಡ್ ಸಿಂಪಲ್ ಎನರ್ಜಿ ವಾಹನ ಉತ್ಪದನಾ ಘಟಕದಲ್ಲಿ ವಾರ್ಷಿಕವಾಗಿ 50 ಸಾವಿರ ಸ್ಕೂಟರ್ ನಿರ್ಮಾಣ ಮಾಡುವ ಗುರಿಹೊಂದಲಾಗಿದ್ದು, ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾಗಿರುವ ಸಿಂಪಲ್ ಎನರ್ಜಿ ಕಂಪನಿಯ ಮೇಲೆ ಹಲವಾರು ಬೃಹತ್ ಆಟೋ ಆಟೋ ಕಂಪನಿಗಳು ಭಾರೀ ಹೂಡಿಕೆಗೆ ಮುಂದಾಗಿವೆ.

More from DriveSpark

Article Published On: Monday, July 5, 2021, 20:42 [IST]
English summary
'Simple One' name has been trademarked for Simple Energy's upcoming electric scooter. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+