ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿಯಾದ ಓಲಾ ಎಲೆಕ್ಟ್ರಿಕ್, ತನ್ನ ಎಲೆಕ್ಟ್ರಿಕ್ ಸ್ಕೂಟರಿನ ಬುಕ್ಕಿಂಗ್'ಗಳನ್ನು ಆರಂಭಿಸಿದೆ. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೇವಲ ರೂ.499 ಮುಂಗಡ ಹಣ ಪಾವತಿಸಿ ಬುಕ್ಕಿಂಗ್ ಮಾಡಬಹುದು. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕಂಪನಿಯ ವೆಬ್‌ಸೈಟ್‌ ಮೂಲಕ ಬುಕ್ಕಿಂಗ್ ಮಾಡಬಹುದು.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

ಓಲಾ ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆಯನ್ನು ಬಹಿರಂಗಪಡಿಸಿಲ್ಲ. ಆದರೆ ಈ ಸ್ಕೂಟರಿನ ಬೆಲೆ ಬೇರೆ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಪೈಪೋಟಿ ನೀಡುವುದು ಖಚಿತ ಎಂದು ಹೇಳಲಾಗಿದೆ. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಹೇಗೆ ಬುಕ್ಕಿಂಗ್ ಮಾಡಬಹುದು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

1. ಓಲಾ ಎಲೆಕ್ಟ್ರಿಕ್ ಕಂಪನಿಯ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬುಕ್ ಮಾಡಬಹುದು. ಬುಕ್ಕಿಂಗ್ ಮಾಡಲು, ಗ್ರಾಹಕರು ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಸಬೇಕು. ಮೊಬೈಲ್ ಸಂಖ್ಯೆಗೆ ಒಟಿಪಿ ಬಂದ ನಂತರ ಲಾಗ್ ಇನ್ ಮಾಡಬೇಕು.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

ಲಾಗ್ ಇನ್ ಮಾಡಿದ ನಂತರ, ಗ್ರಾಹಕರು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್, ಯುಪಿಐ, ಇ-ವ್ಯಾಲೆಟ್ ಅಥವಾ ಓಲಾ ಮನಿ ಮೂಲಕ ರೂ.499 ಗಳನ್ನು ಪಾವತಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬುಕ್ಕಿಂಗ್ ಮಾಡಬಹುದು. ಗ್ರಾಹಕರು ಹಲವು ಓಲಾ ಸ್ಕೂಟರ್‌ಗಳನ್ನು ಬುಕ್ಕಿಂಗ್ ಮಾಡಬಹುದು.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

2. ಗ್ರಾಹಕರು ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬೇರೆ ಯಾವುದೇ ವ್ಯಕ್ತಿಗೆ ವರ್ಗಾಯಿಸಬಹುದು. ಆದರೆ ಇದಕ್ಕಾಗಿ ಗ್ರಾಹಕನು ಕಂಪನಿಗೆ ಮನವಿ ಮಾಡಿಕೊಳ್ಳಬೇಕಾಗುತ್ತದೆ. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡಲು, ಯಾವುದೇ ದಾಖಲೆಗಳ ಅಗತ್ಯವಿಲ್ಲ. ಪರಿಶೀಲಿಸಲಾದ ಮೊಬೈಲ್ ಮಾತ್ರ ಅಗತ್ಯವಿದೆ.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

3. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬುಕ್ಕಿಂಗ್ ಮಾಡುವ ಗ್ರಾಹಕರು ಬುಕ್ಕಿಂಗ್ ಅನ್ನು ರದ್ದುಗೊಳಿಸಲು ಬಯಸಿದರೆ, ಯಾವುದೇ ಸಮಯದಲ್ಲಿ ಬುಕ್ಕಿಂಗ್ ರದ್ದುಗೊಳಿಸಬಹುದು ಅಥವಾ ಬುಕ್ಕಿಂಗ್ ಅನ್ನು ಮಾರ್ಪಡಿಸಬಹುದು.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

ಬುಕ್ಕಿಂಗ್ ರದ್ದುಪಡಿಸಿದ ನಂತರ ಬುಕ್ಕಿಂಗ್ ಮೊತ್ತವನ್ನು ಸಂಪೂರ್ಣವಾಗಿ ಹಿಂದಿರುಗಿಸಲಾಗುತ್ತದೆ. ಬುಕ್ಕಿಂಗ್ ರದ್ದು ಪಡಿಸಿದ ನಂತರ ಗ್ರಾಹಕರು ತಮ್ಮ ಹಣವನ್ನು 7 ರಿಂದ 10 ಕೆಲಸದ ದಿನಗಳಲ್ಲಿ ಮರಳಿ ಪಡೆಯುತ್ತಾರೆ.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

4. ಗ್ರಾಹಕರು ತಮಗೆ ಇಷ್ಟವಾಗುವ ಬಣ್ಣ ಹಾಗೂ ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು. ಓಲಾ ಎಲೆಕ್ಟ್ರಿಕ್ ಸ್ಕೂಟರಿನ ಬುಕ್ಕಿಂಗ್ ಪೂರ್ತಿಯಾದ ನಂತರ, ಆರ್ಡರ್ ಐಡಿ ಹಾಗೂ ಇತರ ವಿವರಗಳನ್ನು ಕಂಪನಿಯು ಗ್ರಾಹಕರಿಗೆ ಎಸ್ಎಂಎಸ್ ಮೂಲಕ ಅಥವಾ ಇ-ಮೇಲ್ ಮೂಲಕ ಕಳುಹಿಸುತ್ತದೆ.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

ಓಲಾ ಎಲೆಕ್ಟ್ರಿಕ್ ಸ್ಕೂಟರ್‌ನ ಆರಂಭಿಕ ಬುಕ್ಕಿಂಗ್ ಸಮಯದಲ್ಲಿ, ಕಂಪನಿಯ ವೆಬ್‌ಸೈಟ್‌ನಲ್ಲಿ ಕೆಲವು ಸಮಸ್ಯೆಗಳು ಕಂಡು ಬಂದಿರುವುದರಿಂದ ಗ್ರಾಹಕರಿಗೆ ಈ ಸ್ಕೂಟರ್ ಅನ್ನು ಬುಕ್ಕಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ನಿರೀಕ್ಷೆಗಿಂತ ಹೆಚ್ಚು ಜನರು ಏಕಕಾಲದಲ್ಲಿ ಬುಕ್ಕಿಂಗ್ ಮಾಡಲು ಮುಂದಾಗಿರುವುದೇ ಇದಕ್ಕೆ ಕಾರಣ.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಮಾಡುವ ವಿಧಾನಗಳಿವು

ಈ ಕುರಿತು ಪ್ರತಿಕ್ರಿಯೆ ನೀಡಿರುವ ಓಲಾ ಗ್ರೂಪ್ ಅಧ್ಯಕ್ಷ ಹಾಗೂ ಸಿಇಒ ಭಾವೀಶ್ ಅಗರ್‌ವಾಲ್, ಆರಂಭದಲ್ಲಿ ಬುಕ್ಕಿಂಗ್ ಮಾಡಲು ಸಮಸ್ಯೆ ಎದುರಿಸಿದವರಿಂದ ಕ್ಷಮೆ ಯಾಚಿಸುತ್ತೇವೆ. ನಾವು ಈ ರೀತಿಯ ಬೇಡಿಕೆಯನ್ನು ನಿರೀಕ್ಷಿಸಿರಲಿಲ್ಲ. ಈಗ ಸಮಸ್ಯೆ ಬಗೆ ಹರಿದಿದೆ ಎಂದು ಹೇಳಿದರು.

Most Read Articles

Kannada
English summary
Step by step process to book Ola electric scooter. Read in Kannada.
Story first published: Friday, July 16, 2021, 14:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X