Just In
Don't Miss!
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Finance
ಮಹಾರಾಷ್ಟ್ರದಲ್ಲಿ ಲಾಕ್ಡೌನ್: ಕಾರುಗಳ ಉತ್ಪಾದನೆ ಮೇಲೆ ಭಾರೀ ಪರಿಣಾಮ
- News
ಬಿಟ್ ಕಾಯಿನ್ ಮೌಲ್ಯ $60,000 ನಂತೆ ಸ್ಥಿರ, ಟ್ರೇಡರ್ಸ್ಗೆ ನೆಮ್ಮದಿ
- Movies
ಸುಶಾಂತ್ ಸಿಂಗ್ ಸಾವಿನ ಬಗ್ಗೆ ಕಂಗನಾ ರಣಾವತ್ ಯೂ-ಟರ್ನ್?
- Lifestyle
ಪಾತ್ರೆ ಉಜ್ಜುವ ಸೋಪ್ನಿಂದ ಈ ವಸ್ತುಗಳು ಹಾಗೂ ಸ್ಥಳಗಳನ್ನು ಸ್ವಚ್ಛ ಮಾಡಿ ನೋಡಿದ್ದೀರಾ?
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿನೂತನ ವಿನ್ಯಾಸದ ಸ್ಟಡ್ಸ್ ನಿಂಜಾ ಎಲೈಟ್ ಸೂಪರ್ ಡಿ5 ಡಿಕೋರ್ ಹೆಲ್ಮೆಟ್ ಬಿಡುಗಡೆ
ಸ್ಟಡ್ಸ್ ಕಂಪನಿಯು ತನ್ನ ಜನಪ್ರಿಯ ಥಂಡರ್ ಡಿ ಸರಣಿಯಲ್ಲಿ ಹೊಸದಾಗಿ ನಿಂಜಾ ಎಲೈಟ್ ಸೂಪರ್ ಡಿ5 ಡಿಕೋರ್ ಫುಲ್-ಫೇಸ್ ಹೆಲ್ಮೆಟ್ ಬಿಡುಗಡೆ ಮಾಡಿದ್ದು, ಹೊಸ ವಿನ್ಯಾಸ ಹೊಂದಿರುವ ನಿಂಜಾ ಎಲೈಟ್ ಸೂಪರ್ ಡಿ5 ಡಿಕೋರ್ ಹೆಲ್ಮೆಟ್ ಮಾದರಿಯು ಬಿಎಸ್ಐ ಸ್ಟ್ಯಾಂಡರ್ಡ್ ನಿಯಮಾನುಸಾರವಾಗಿ ಅಭಿವೃದ್ದಿ ಹೊಂದಿದೆ.

ಸ್ಟಡ್ಸ್ ಕಂಪನಿಯ ಥಂಡರ್ ಡಿ ಸರಣಿಯಲ್ಲಿರುವ ಪ್ರಮುಖ ಹೆಲ್ಮೆಟ್ ಮಾದರಿಗಳಲ್ಲೇ ತುಸು ವಿಭಿನ್ನ ವಿನ್ಯಾಸ ಹೊಂದಿರುವ ನಿಂಜಾ ಎಲೈಟ್ ಸೂಪರ್ ಡಿ5 ಡಿಕೋರ್ ಹೆಲ್ಮೆಟ್ ಮಾದರಿಯು ಉತ್ತಮ ಬೆಲೆಯೊಂದಿಗೆ ಬೈಕ್ ಸವಾರರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಿದ್ದು, ಹೆಲ್ಮೆಟ್ ಬಳಕೆಯು ಸುಲಭವಾಗಿಸಲು ಒಳಭಾಗದ ವಿನ್ಯಾಸದಲ್ಲಿ ಸಾಕಷ್ಟು ಹೊಸತನ ಪರಿಚಯಿಸುವ ಮೂಲಕ ಬೈಕ್ ಸವಾರರನ್ನು ಸೆಳೆಯುತ್ತಿದೆ.

ಮತ್ತೊಂದು ಪ್ರಮುಖ ವಿಚಾರವೆಂದರೆ ಥಂಡರ್ ಡಿ ಸರಣಿಯಲ್ಲಿ ನಿಂಜಾ ಎಲೈಟ್ ಸೂಪರ್ ಡಿ5 ಡಿಕೋರ್ ಹೆಲ್ಮೆಟ್ ಮಾದರಿಯು ಥಂಡರ್ ಡಿ6 ಡಿಕೋರ್ ಮಾದರಿಗಿಂತಲೂ ಕೆಲವು ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದೆ.

ಫುಲ್ ಫೇಸ್ ವೈಶಿಷ್ಟ್ಯತೆಯ ನಿಂಜಾ ಎಲೈಟ್ ಸೂಪರ್ ಡಿ4 ಡಿಕೋರ್ ಹೆಲ್ಮೆಟ್ ಮಾದರಿಯು ಪ್ರತಿಸ್ಪರ್ಧಿ ಕಂಪನಿಗಳ ಹೆಲ್ಮೆಟ್ ಮಾದರಿಗಿಂತಲೂ ಉತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಹೆಲ್ಮೆಟ್ ಬೆಲೆಯನ್ನು ಆರಂಭಿಕವಾಗಿ ರೂ. 1,595 ನಿಗದಿಪಡಿಸಿದೆ.

ಸ್ಟಡ್ಸ್ ಕಂಪನಿಯು ನಿಂಜಾ ಎಲೈಟ್ ಸೂಪರ್ ಡಿ5 ಡಿಕೋರ್ ಹೆಲ್ಮೆಟ್ ಮಾದರಿಯನ್ನು ಮೀಡಿಯಂ, ಲಾರ್ಜ್ ಮತ್ತು ಎಕ್ಸ್ಟಾ ಲಾರ್ಜ್ ವಿನ್ಯಾಸದಲ್ಲಿ ಬಿಡುಗಡೆ ಮಾಡಿದ್ದು, ಬೈಕ್ ಸವಾರರು ತಮ್ಮ ಬೇಡಿಕೆಗೆ ಅನುಗುಣವಾಗಿ ಮೀಡಿಯಂ(570-ಎಂಎಂ), ಲಾರ್ಜ್(580-ಎಂಎಂ) ಮತ್ತು ಎಕ್ಸ್ಟಾ ಲಾರ್ಜ್(600-ಎಂಎಂ) ಮಾದರಿಗಳನ್ನು ಖರೀದಿ ಮಾಡಬಹುದು.

ಜೊತೆಗೆ ನಿಂಜಾ ಎಲೈಟ್ ಸೂಪರ್ ಡಿ4 ಡಿಕೋರ್ ಹೆಲ್ಮೆಟ್ ಒಟ್ಟು ಹತ್ತು ವಿವಿಧ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಬ್ಲ್ಯಾಕ್ ಎನ್2, ಬ್ಲ್ಯಾಕ್ ಎನ್3, ಬ್ಲ್ಯಾಕ್, ಎನ್5, ಬ್ಲ್ಯಾಕ್, ಎನ್5, ಬ್ಲ್ಯಾಕ್ ಎನ್10, ಮ್ಯಾಟ್ ಬ್ಲ್ಯಾಕ್ ಎನ್1, ಮ್ಯಾಟ್ ಬ್ಲ್ಯಾಕ್ ಎನ್2, ಮ್ಯಾಟ್ ಬ್ಲ್ಯಾಕ್ ಎನ್3, , ಮ್ಯಾಟ್ ಬ್ಲ್ಯಾಕ್ ಎನ್5 ಮತ್ತು ಮ್ಯಾಟ್ ಬ್ಲ್ಯಾಕ್ ಎನ್10 ಬಣ್ಣಗಳೊಂದಿಗೆ ಗ್ಲಾಸ್ ಮತ್ತು ಮ್ಯಾಟೆ ಫಿನಿಶ್ ಹೊಂದಿರುತ್ತವೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಹೊಸ ನಿಂಜಾ ಎಲೈಟ್ ಸೂಪರ್ ಡಿ5 ಡಿಕೋರ್ ಹೆಲ್ಮೆಟ್ ಮಾದರಿಯು ಯುವಿ ರೆಸಿಸ್ಟೆಂಟ್ ಪೇಂಟ್, ಚಿನ್ ಸ್ಟ್ಯಾಪ್‌ನೊಂದಿಗೆ ಗಲ್ಲದ ಭಾಗಕ್ಕೆ ಪೂರ್ಣ ಪ್ರಮಾಣದ ಸುರಕ್ಷತೆ ನೀಡಲಿದ್ದು, ಒಳಭಾಗದಲ್ಲಿ ಪ್ರೀಮಿಯಂ ಫ್ರ್ಯಾಬಿಕ್ ಬಟ್ಟೆಯನ್ನು ಬಳಕೆ ಮಾಡಿರುವುದರಿಂದ ಲಾಂಗ್ ರೈಡ್ ಸಂದರ್ಭದಲ್ಲೂ ಹೆಲ್ಮೆಟ್ ಬಳಕೆ ಕಿರಿಕಿರಿ ಉಂಟು ಮಾಡುವುದಿಲ್ಲ.

ಹಾಗೆಯೇ ಹೊಸ ಹೆಲ್ಮೆಟ್ ಸ್ಕ್ರ್ಯಾಚ್ ಫ್ರೀ ವೈಶಿಷ್ಟ್ಯತೆ ಹೊಂದಿರುವುದರಿಂದ ಹೆಲ್ಮೆಟ್ ಯಾವಗಲೂ ಹೊಸರಂತೆ ಕಾಣಲಿದ್ದು, ಬಿಸಿಲು, ಮಳೆಗಾಲ ಸಂದರ್ಭದಲ್ಲೂ ಈ ಹೆಲ್ಮೆಟ್ ಅನ್ನು ಸುಲಭವಾಗಿ ಬಳಕೆ ಮಾಡಬಹುದಾಗಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಈ ಮೂಲಕ ಗುಣಮಟ್ಟ, ವಿಶ್ವಾಸಾರ್ಹತೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಸ್ಟಡ್ಸ್ ಕಂಪನಿಯು ಈಗಾಗಲೇ ಹಲವಾರು ಮಾದರಿಯ ಹೆಲ್ಮೆಟ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇತ್ತೀಚೆಗೆ ಬಿಎಸ್ಐ(ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಸೂಚಿಸಿರುವ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಹೊಸ ಹೆಲ್ಮೆಟ್‌ಗಳನ್ನು ಮರು ವಿನ್ಯಾಸಗೊಳಿಸಿ ಬಿಡುಗಡೆ ಮಾಡುತ್ತಿದೆ.