Just In
- 7 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 10 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 10 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 12 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ಬನ್ ಸೂಪರ್ ಡಿ1 ಡಿಕೋರ್ ಓಪನ್ ಫೇಸ್ ಹೆಲ್ಮೆಟ್ ಬಿಡುಗಡೆ ಮಾಡಿದ ಸ್ಟಡ್ಸ್
ಹೆಲ್ಮೆಟ್ ಮತ್ತು ಆಕ್ಸೆಸರಿಸ್ ಉತ್ಪಾದನಾ ಕಂಪನಿಯಾಗಿರುವ ಸ್ಟಡ್ಸ್ ಡಿ ಸರಣಿ ಹೆಲ್ಮೆಟ್ನಲ್ಲಿ ಹೊಸದಾಗಿ ಅರ್ಬನ್ ಸೂಪರ್ ಡಿ1 ಡಿಕೋರ್ ಹೆಲ್ಮೆಟ್ ಬಿಡುಗಡೆ ಮಾಡಿದ್ದು, ಹೊಸ ವಿನ್ಯಾಸ ಹೊಂದಿರುವ ಅರ್ಬನ್ ಸೂಪರ್ ಡಿ1 ಡಿಕೋರ್ ಮಾದರಿಯು 2021ರ ಬಿಎಸ್ಐ ಸ್ಟ್ಯಾಂಡರ್ಡ್ ನಿಯಮಾನುಸಾರವಾಗಿ ಅಭಿವೃದ್ದಿಗೊಂಡಿದೆ.
ಸ್ಟಡ್ಸ್ ಕಂಪನಿಯ ಥಂಡರ್ ಡಿ ಸರಣಿಯಲ್ಲಿರುವ ಪ್ರಮುಖ ಹೆಲ್ಮೆಟ್ ಮಾದರಿಗಳಲ್ಲೇ ತುಸು ವಿಭಿನ್ನ ವಿನ್ಯಾಸ ಹೊಂದಿರುವ ಅರ್ಬನ್ ಸೂಪರ್ ಡಿ1 ಡಿಕೋರ್ ಹೆಲ್ಮೆಟ್ ಮಾದರಿಯು ಬೈಕ್ ಮತ್ತು ಸ್ಕೂಟರ್ ಸವಾರರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಲಿದ್ದು, ಹೆಲ್ಮೆಟ್ ಬಳಕೆಯು ಸುಲಭವಾಗಿಸಲು ಒಳಭಾಗದ ವಿನ್ಯಾಸದಲ್ಲಿ ಸಾಕಷ್ಟು ಹೊಸತನ ಪರಿಚಯಿಸುವ ಮೂಲಕ ದ್ವಿಚಕ್ರ ವಾಹನ ಸವಾರಿಯನ್ನು ಮತ್ತಷ್ಟು ಆರಾಮಗೊಳಿಸುತ್ತದೆ.
ಓಪನ್ ಫೇಸ್ ವೈಶಿಷ್ಟ್ಯತೆಯ ಅರ್ಬನ್ ಸೂಪರ್ ಡಿ1 ಡಿಕೋರ್ ಹೆಲ್ಮೆಟ್ ಮಾದರಿಯು ಪ್ರತಿಸ್ಪರ್ಧಿ ಕಂಪನಿಗಳ ಹೆಲ್ಮೆಟ್ ಮಾದರಿಗಿಂತಲೂ ಉತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಹೆಲ್ಮೆಟ್ ಬೆಲೆಯನ್ನು ಆರಂಭಿಕವಾಗಿ ರೂ. 1,220ಕ್ಕೆ ನಿಗದಿಪಡಿಸಿದೆ.
ಸ್ಟಡ್ಸ್ ಕಂಪನಿಯ ಕಬ್ ಡಿ4 ಡಿಕೋರ್ ಹೆಲ್ಮೆಟ್ ಮಾದರಿಗಿಂತಲೂ ಉತ್ತಮವಾಗಿರುವ ಅರ್ಬನ್ ಸೂಪರ್ ಡಿ1 ಡಿಕೋರ್ ಹೆಲ್ಮೆಟ್ ಮಾದರಿಯು ಮೀಡಿಯಂ, ಲಾರ್ಜ್ ಮತ್ತು ಎಕ್ಸ್ಟಾ ಲಾರ್ಜ್ ವಿನ್ಯಾಸದಲ್ಲಿ ಬಿಡುಗಡೆ ಮಾಡಿದ್ದು, ದ್ವಿಚಕ್ರ ವಾಹನ ಸವಾರರು ತಮ್ಮ ಬೇಡಿಕೆಗೆ ಅನುಗುಣವಾಗಿ ಮೀಡಿಯಂ(570-ಎಂಎಂ), ಲಾರ್ಜ್(580-ಎಂಎಂ) ಮತ್ತು ಎಕ್ಸ್ಟಾ ಲಾರ್ಜ್(600-ಎಂಎಂ) ಮಾದರಿಗಳನ್ನು ಖರೀದಿ ಮಾಡಬಹುದು.
ಜೊತೆಗೆ ಅರ್ಬನ್ ಸೂಪರ್ ಡಿ1 ಡಿಕೋರ್ ಹೆಲ್ಮೆಟ್ ಒಟ್ಟು ಒಂಬತ್ತು ವಿವಿಧ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ವೈಟ್ ಎನ್2, ರೆಡ್ ಎನ್6, ಗನ್ ಗ್ರೇ ಎನ್6, ಮ್ಯಾಟ್ ಬ್ಲ್ಯಾಕ್, ಮ್ಯಾಟ್ ಬ್ಲ್ಯಾಕ್, ಮ್ಯಾಟ್ ಬ್ಲ್ಯೂ, ಮ್ಯಾಟ್ ಪಿಂಕ್ ಸೇರಿದಂತೆ ವಿವಿಧ ಬಣ್ಣಗಳನ್ನು ಆಯ್ಕೆ ಮಾಡಬಹುದಾಗಿದೆ. ಹೊಸ ಹೆಲ್ಮೆಟ್ ಮಾದರಿಯು ಯುವಿ ರೆಸಿಸ್ಟೆಂಟ್ ಪೇಂಟ್, ಚಿನ್ ಸ್ಟ್ಯಾಪ್ನೊಂದಿಗೆ ಗಲ್ಲದ ಭಾಗಕ್ಕೆ ಪೂರ್ಣ ಪ್ರಮಾಣದ ಸುರಕ್ಷತೆ ನೀಡಲಿದ್ದು, ಒಳಭಾಗದಲ್ಲಿ ಪ್ರೀಮಿಯಂ ಫ್ರ್ಯಾಬಿಕ್ ಬಟ್ಟೆಯನ್ನು ಬಳಕೆ ಮಾಡಲಾಗಿದೆ.
ಹಾಗೆಯೇ ಹೊಸ ಹೆಲ್ಮೆಟ್ ಸ್ಕ್ರ್ಯಾಚ್ ಫ್ರೀ ವೈಶಿಷ್ಟ್ಯತೆ ಹೊಂದಿರುವುದರಿಂದ ಹೆಲ್ಮೆಟ್ ಯಾವಾಗಲೂ ಹೊಸತರಂತೆ ಕಾಣಲಿದ್ದು, ಬಿಸಿಲು, ಮಳೆಗಾಲ ಸಂದರ್ಭದಲ್ಲೂ ಈ ಹೆಲ್ಮೆಟ್ ಅನ್ನು ಸುಲಭವಾಗಿ ಬಳಕೆ ಮಾಡಬಹುದಾಗಿದೆ.
ಆದರೆ ಓಪನ್ ಫೇಸ್ ಹೆಲ್ಮೆಟ್ ಮಾದರಿಗಳು ಟ್ರಾಫಿಕ್ ದಟ್ಟಣೆಯಿಂದ ಕೂಡಿರುವ ನಗರ ಪ್ರದೇಶಗಳಲ್ಲಿ ಮಾತ್ರ ಬಳಕೆಗೆ ಸೂಕ್ತವಾಗಿದ್ದು, ಹೆದ್ದಾರಿಗಳಲ್ಲಿ ಯಾವಾಗಲೂ ಫುಲ್ ಫೇಸ್ ಹೆಲ್ಮೆಟ್ ಬಳಕೆಯೇ ಉತ್ತಮ ಎನ್ನಬಹುದು.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ
ಇನ್ನು ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಬೈಕ್ ಸವಾರರ ಸವಾರರ ಜೊತೆಗೆ ಹಿಂಬದಿಯ ಸವಾರರಿಗೂ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಿದ್ದರೂ ದಂಡದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಕಳಪೆ ಹೆಲ್ಮೆಟ್ಗಳ ಬಳಕೆಯು ಹೆಚ್ಚಳವಾಗಿದ್ದು, ಇವು ಬೈಕ್ ಸವಾರರಿಗೆ ರಕ್ಷಣೆ ನೀಡುವ ಬದಲಾಗಿ ಪ್ರಾಣಕ್ಕೆ ಕುತ್ತು ತರುತ್ತಿವೆ ಎಂದರೆ ತಪ್ಪಾಗುವುದಿಲ್ಲ.
ಭಾರತದಲ್ಲಿ ಬೈಕ್ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಬಳಕೆಯನ್ನು ಜಾರಿಗೆ ತರುವಲ್ಲಿ ಆಯಾ ರಾಜ್ಯಗಳ ಸಾರಿಗೆ ಇಲಾಖೆಗಳು ಉತ್ತಮ ಬದಲಾವಣೆ ತರುವಲ್ಲಿ ಯಶಸ್ವಿಯಾಗುತ್ತಿದ್ದರೂ ಕಳಪೆ ಹೆಲ್ಮೆಟ್ ಬಳಕೆಯನ್ನು ತಡೆಯುವಲ್ಲಿ ವಿಫಲವಾಗುತ್ತಿವೆ. ವಾಹನ ಸವಾರರು ದುಬಾರಿ ದಂಡದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಗುಣಮಟ್ಟದ ಬಗ್ಗೆ ತಡೆಕೆಡಿಸಿಕೊಳ್ಳದೆ ಮಾರುಕಟ್ಟೆಯಲ್ಲಿ ಲಭ್ಯವಾಗುವ ಕಳಪೆ ಗುಣಮಟ್ಟದ ಹೆಲ್ಮೆಟ್ಗಳನ್ನು ಬಳಸುತ್ತಿರುವುದು ವಾಹನ ಸವಾರರ ಪ್ರಾಣ ಹಾನಿಗೆ ಕಾರಣವಾಗುತ್ತಿವೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ
ಇದೇ ವಿಚಾರವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿರುವ ಕೇಂದ್ರ ಸಾರಿಗೆ ಇಲಾಖೆಯು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, 2021ರ ಜೂನ್ 1 ರಿಂದ ಐಎಸ್ಐ ಪ್ರಮಾಣೀಕೃತ ಹೆಲ್ಮೆಟ್ಗಳನ್ನು ಮಾತ್ರ ಬಳಕೆ ಮಾಡಬೇಕು ಎಂಬ ಆದೇಶ ಹೊರಡಿಸಿದೆ.