Just In
- 13 min ago Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- 2 hrs ago ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- 2 hrs ago ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- 2 hrs ago Ather: ಬೆಂಗಳೂರಿನ ಎಥರ್ನಿಂದ ಫ್ಯಾಮಿಲಿ ಇ-ಸ್ಕೂಟರ್ 'ರಿಜ್ಟಾ' ಬುಕ್ಕಿಂಗ್ ಆರಂಭ, ರೂ.999 ಪಾವತಿಸಿದರೆ ಸಾಕು!
Don't Miss!
- News ಒಂದಲ್ಲ.. ಎರಡಲ್ಲ.. 128 ಲಕ್ಷ ಕೋಟಿ ರೂಪಾಯಿ ಲಾಭ!
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Movies "ನನ್ನೇನು ಅಭಿಮನ್ಯು ಅಂದುಕೊಂಡ್ಯ..; ಕೆಲವ್ರು ಕುಡಿದ ಮೇಲೆ ಗಂಡಸರಾಗ್ತಾರೆ.. 'ಯುವ' ಡೈಲಾಗ್ ಪಂಚ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
140 ಕಿ.ಮೀ ರೇಂಜ್ ಹೊಂದಿರುವ ಸೂಪರ್ ಸೊಕೊ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
ಚೀನಾ ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ 'ಸೂಪರ್ ಸೊಕೊ' ತನ್ನ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರನ್ನು ಯುರೋಪಿಯನ್ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದೀಗ ಸೂಪರ್ ಸೊಕೊ ಕಂಪನಿಯು ಈ ಹೊಸ ಪಿಸಿಎಕ್ಸ್ ಸ್ಕೂಟರ್ ಅನ್ನು ಆಸ್ಟ್ರೇಲಿಯಾದಲ್ಲಿ ಬಿಡುಗಡೆಗೊಳಿಸಿದೆ.
ಸೂಪರ್ ಸೊಕೊ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾದಲ್ಲಿ ಸೂಪರ್ ಸೊಕೊ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ಭಾರತದ ಕರೆನ್ಸಿ ಪ್ರಕಾರ ಸರಿಸುಮಾರು ರೂ.4.34 ಲಕ್ಷಗಳಾಗಿದೆ. ಈ ಸ್ಕೂಟರ್ ವಿತರಣೆಯು ಶೀಘ್ರದಲ್ಲೇ ಪ್ರಾರಂಭವಾಗಿದೆ. ಸೂಪರ್ ಸೊಕೊ ಪಿಸಿಎಕ್ಸ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಸೂಪರ್ ಸೊಕೊ ಬ್ರಿಟನ್ ನಲ್ಲಿ ಅತ್ಯಂತ ಯಶಸ್ವಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿದೆ.
ಈ ಸೂಪರ್ ಸೊಕೊ ಕಂಪನಿಯು ತನ್ನ ಪೋರ್ಟ್ಫೋಲಿಯೊದಲ್ಲಿ ಸಿಯುಎಕ್ಸ್, ಸಿಯುಎಕ್ಸ್ ಡುಕಾಟಿ ವರ್ಷನ್, ಟಿಎಸ್ಎಕ್ಸ್, ಟಿಸಿ, ಸಿಪಿಎಕ್ಸ್ ಮತ್ತು ಟಿಸಿ ಮಾಕ್ಸ್ ಎಂಬ ಆರು ರೂಪಾಂತರಗಳಲ್ಲಿ ಲಭ್ಯವಿರಲಿದೆ
ಸೂಪರ್ ಸೊಕೊ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬ್ಲ್ಯಾಕ್, ಗ್ರೇ ಮತ್ತು ಸಿಲ್ವರ್ ಬಣ್ಣಗಳಲ್ಲಿ ಲಭ್ಯವಿದೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಫುಲ್ ಎಲ್ಇಡಿ ಹೆಡ್ಲ್ಯಾಂಪ್, ದೊಡ್ಡ ಫ್ಲೈಸ್ಕ್ರೀನ್, ಡಿಜಿಟಲ್ ಇನ್ಸ್ ಟ್ರೂ,ಮೆಂಟ್ ಕನ್ಸೋಲ್ ಮತ್ತು ಯುಎಸ್ಬಿ ಚಾರ್ಜಿಂಗ್ ಫೀಚರ್ ಗಳನ್ನು ಒಳಗೊಂಡಿದೆ.
ಇನ್ನು ಈ ಹೊಸ ಸೂಪರ್ ಸೊಕೊ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ನೀಡಲಾಗಿದೆ.
ಇನ್ನು ಈ ಹೊಸ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಡ್ಯುಯಲ್ ಫ್ಲಾಟ್ ಸೀಟ್ ಕಾನ್ಫಿಗರೇಶನ್ ಅನ್ನು ಒಳಗೊಂಡಿದೆ. ಈ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ 8-ಸ್ಪೋಕ್ ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ,
ಈ ಹೊಸ ಸೂಪರ್ ಸೊಕೊ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ರಿವರ್ಸ್ ಮೋಡ್ ಮತ್ತು ಸೂಪರ್ ಸೊಕೊ ಅಪ್ಲಿಕೇಶನ್ ಮೂಲಕ ಸ್ಮಾರ್ಟ್ ಫೋನ್ ಕನೆಕ್ಟ್ ಮಾಡಬಹುದಾಗಿದೆ. ಇನ್ನು ಈ ಸ್ಕೂಟರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.
ಹೊಸಸೂಪರ್ ಸೊಕೊ ಸಿಪಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 4 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅನ್ನು ಅಳವಡಿಸಲಾಗಿದೆ. ಈ ಎಲೆಕ್ಟ್ರಿಕ್ ಮೋಟಾರ್ 5.36 ಬಿಹೆಚ್ಪಿ ಪವರ್ ಮತ್ತು 171 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಸೂಪರ್ ಸೊಕೊ ಸಿಪಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಿದರೆ 140 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಶೇ.90 ರಷ್ಟು ಚಾರ್ಜ್ ಆಗಲು ಸುಮಾರು 3-4 ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ. ಇನ್ನು ಈ ಎಲೆಕ್ಟ್ರಿಕ್ ಸ್ಕೂಟರ್ 95 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.