ಬೆಲೆ ಏರಿಕೆ ಪಡೆದುಕೊಂಡ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್

ದ್ವಿಚಕ್ರ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್ ತನ್ನ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್ ಬೆಲೆಯನ್ನು ಭಾರತದಲ್ಲಿ ಪರಿಷ್ಕರಿಸಿದೆ. ಇದರಿಂದ ಜನಪ್ರಿಯ ಈ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ತುಸು ದುಬಾರಿಯಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್

ಹೊಸ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್ ಬೆಲೆಯನ್ನು ರೂ.1,600 ಗಳವರೆಗೆ ಹೆಚ್ಚಿಸಲಾಗಿದೆ. ಬೆಲೆ ಏರಿಕೆ ಪಡೆದುಕೊಂದ ಬಳಿಕ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.85,971 ಗಳಾದರೆ, ಬ್ಲೂಟೂತ್ ಕನಕ್ಟಿವಿಟಿ ರೂಪಾಂತರದ ಬೆಲೆಯು ರೂ.89,471 ಗಳಾಗಿದೆ. ಈ ಎಲ್ಲಾ ಬೆಲೆಗಳು ಥಾಣೆ ಎಕ್ಸ್ ಶೋರೂಂ ಪ್ರಕಾರವಾಗಿದೆ. ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್ ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.

ಬೆಲೆ ಏರಿಕೆ ಪಡೆದುಕೊಂಡ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್

ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್‌ನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಆಕರ್ಷಣೆಗಾಗಿ ಬಾಡಿ ಕ್ರೋಮ್ ಬಳಸಲಾಗಿದ್ದು, ಬಾಡಿ ಮೌಂಟೆಡ್ ವಿಂಡ್ ಸ್ಕ್ರೀನ್, ಹೊಸದಾಗಿ ವಿನ್ಯಾಸಗೊಳಿಸಲಾದ ಎಕ್ಸಾಸ್ಟ್, ಹೊಸದಾಗಿ ನೀಡಲಾಗಿರುವ ಗ್ಲೋ ಬಾಕ್ಸ್, ಸ್ಮಾರ್ಟ್‌ಫೋನ್ ಚಾರ್ಜಿಂಗ್ ಮಾಡಿಕೊಳ್ಳಲು ಡಿಸಿ ಎಲೆಕ್ಟ್ರಿಕ್ ಸಾಕೆಟ್ ಹೊಂದಿದೆ.

ಬೆಲೆ ಏರಿಕೆ ಪಡೆದುಕೊಂಡ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್

ಹಾಗೆಯೇ ಈ ಸ್ಕೂಟರ್ ಬ್ರೇಕಿಂಗ್ ಸಿಸ್ಟಂ ನವೀಕರಣಗೊಳಿಸಲಾಗಿದ್ದು, ಅಲ್ಯುಮಿನಿಯಂನಿಂದ ಸಿದ್ದಗೊಂಡಿದೆ. 124 ಸಿಸಿ ಫೋರ್ ಸ್ಟ್ರೋಕ್ ಎಂಜಿನ್ ಹೊಂದಿರುವ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್ ಮಾದರಿಯು ಫ್ಯೂಲ್ ಇಂಜೆಕ್ಷನ್ ಸಿಸ್ಟಂ ಜೋಡಣೆಯೊಂದಿಗೆ ಮಾಲಿನ್ಯ ಹೊರಸೂಸುವಿಕೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ಬೆಲೆ ಏರಿಕೆ ಪಡೆದುಕೊಂಡ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್

ಈ 124ಸಿಸಿ ಎಂಜಿನ್ 8.58 ಬಿಹೆಚ್‍ಪಿ ಪವರ್ ಮತ್ತು 10 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್‌ನಲ್ಲಿ 5.5-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಇಕ್ ಅನ್ನು ಹೊಂದಿದೆ. ಹೊಸ ಸ್ಕೂಟರ್ ಪ್ರತಿ ಲೀಟರ್‌ಗೆ 54 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಬೆಲೆ ಏರಿಕೆ ಪಡೆದುಕೊಂಡ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್

ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್ ಮೆಟಾಲಿಕ್ ಮ್ಯಾಟೆ ಬೊರ್‌ಡೆಕ್ಸ್ ರೆಡ್, ಪರ್ಲ್ ಮಿರಾಜ್ ವೈಟ್, ಮ್ಯಾಟೆ ಫಿಬ್ರೊಯಿನ್ ಗ್ರೇ, ಗ್ಲಾಸ್ ಸ್ಪಾರ್ಕಲ್ ಬ್ಲ್ಯಾಕ್ ಮತ್ತು ಮೆಟಾಲಿಕ್ ಮ್ಯಾಟೆ ಬ್ಲ್ಯಾಕ್ ಬಣ್ಣಗಳನ್ನು ಸಹ ಆಯ್ಕೆ ಮಾಡಬಹುದಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್

ಇದರೊಂದಿಗೆ ಪ್ರೀಮಿಯಂ ಸ್ಕೂಟರ್ ಖರೀದಿದಾರರನ್ನು ಸೆಳೆದಿರುವ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್ ಮಾದರಿಯು ಎಪ್ರಿಲಿಯಾ ಸ್ಟ್ರೋಮ್ 125 ಮಾದರಿಗೆ ನೇರ ಪೈಪೋಟಿಯಾಗಿದೆ. 125 ಸಿಸಿ ಸ್ಕೂಟರ್ ಮಾದರಿಗಳಲ್ಲೇ ಇದು ಬೆಸ್ಟ್ ಸ್ಟೈಲಿಷ್ ಸ್ಕೂಟರ್ ಗಳಲ್ಲಿ ಒಂದಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್

ಈ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್ ಒಟ್ತು 110 ಕೆ.ಜಿ. ತೂಕವನ್ನು ಹೊಂದಿದೆ. ಈ ಜನಪ್ರಿಯ ಬರ್ಗ್‌ಮನ್ ಸ್ಟ್ರೀಟ್ 125 ಮ್ಯಾಕ್ಸಿ-ಸ್ಕೂಟರ್ ಆಧರಿಸಿ ಸುಜುಕಿ ಮೋಟಾರ್‍‍ಸೈಕಲ್ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ.

ಬೆಲೆ ಏರಿಕೆ ಪಡೆದುಕೊಂಡ ಸುಜುಕಿ ಬರ್ಗಮನ್ ಸ್ಟ್ರೀಟ್ 125 ಸ್ಕೂಟರ್

ಸುಜುಕಿ ಮೋಟಾರ್‍‍ಸೈಕಲ್ ಕಂಪನಿಯ ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗುತ್ತದೆ.

Most Read Articles

Kannada
English summary
Suzuki Burgman Street 125 Prices Hiked. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X