Just In
- 4 min ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 2 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 3 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 4 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2021ರ ಹಯಾಬುಸಾ ಬೈಕಿನ ವಿತರಣೆ ಆರಂಭಿಸಿದ ಸುಜುಕಿ ಮೋಟಾರ್ಸೈಕಲ್
ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್ಸೈಕಲ್ ತನ್ನ ಹೊಸ ಹಯಾಬುಸಾ ಬೈಕನ್ನು ಭಾರತದಲ್ಲಿ ಈ ವರ್ಷದ ಏಪ್ರಿಲ್ ತಿಂಗಳು ಬಿಡುಗಡೆಗೊಳಿಸಿತ್ತು. ಹೊಸ ಸುಜುಕಿ ಹಯಾಬುಸಾ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.16.40 ಲಕ್ಷಗಳಾಗಿದೆ.
2021ರ ಸುಜುಕಿ ಹಯಾಬುಸಾದ 101 ಯುನಿಟ್ ಗಳು ಒಂದೆರಡು ದಿನಗಳಲ್ಲಿ ಮಾರಾಟವಾದವು. ಇದೀಗ ಇದರ ವಿತರಣೆಯನ್ನು ಕೂಡ ಪ್ರಾರಂಭಿಸಿದ್ದಾರೆ. ಕೆಲವು ವರದಿಗಳ ಪ್ರಕಾರ, ಎರಡನೇ ಹಂತದ 2021ರ ಸುಜುಕಿ ಹಯಾಬುಸಾ ಜುಲೈ ಅಥವಾ ಆಗಸ್ಟ್ನಲ್ಲಿ ಭಾರತೀಯ ಮಾರುಕಟ್ಟೆಗೆ ಬರಲಿದೆ. ಇನ್ನು ಈ ಎರಡನೇ ಹಂತದ ಸುಜುಕಿ ಹಯಾಬುಸಾ ಬೈಕ್ ಖರೀದಿಗಾಗಿ ಜುಲೈ ತಿಂಗಳಿನಲ್ಲಿ ಬುಕ್ಕಿಂಗ್ ಅನ್ನು ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ.
2021ರ ಸುಜುಕಿ ಹಯಾಬುಸಾ ಸೂಪರ್ ಬೈಕ್ ತನ್ನ ಸಾಂಪ್ರದಾಯಿಕ ಶೈಲಿಯನ್ನು ಉಳಿಸಿಕೊಂಡಿದೆ. ಒಟ್ಟಾರೆ ಸಿಲೂಯೆಟ್ ಅನ್ನು ಒಂದೇ ರೀತಿ ಇರಿಸಲಾಗಿದ್ದರೂ, ಸೂಪರ್ ಬೈಕ್ ಹೆಚ್ಚು ಅಗ್ರೇಸಿವ್ ವಿನ್ಯಾಸದೊಂದಿಗೆ ಅಗ್ರೇಸಿವ್ ಲೈನ್ ಗಳು ಮತ್ತು ಹೊಸ ಫಾಸಿಕವನ್ನು ಒಳಗೊಂಡಿದೆ.
ಈ ಹೊಸ ಹಯಾಬುಸಾ ಸೂಪರ್ ಬೈಕ್ ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇದು ಹೆಡ್ ಲ್ಯಾಂಪ್ ಮತ್ತು ಟೈಲ್ ಗಳನ್ನು ಒಳಗೊಂಡಿದೆ. ಮುಂಭಾಗದಲ್ಲಿ ಇಂಡಿಕೇಟರ್ ಸ್ಥಾನ ಲೈಟ್ ಗಳೊಂದಿಗೆ ಸಂಯೋಜಿಸಲಾಗಿದೆ, ಮುಂಭಾಗದ ಏರ್ ಟೆಕ್ ಹೊರಭಾಗದಲ್ಲಿ ಇರಿಸಲಾಗುತ್ತದೆ.
ಈ ಹೊಸ ಸೂಪರ್ ಬೈಕ್ ಬೈಕ್ ಫೀಚರ್ ಗಳ ಬಗ್ಗೆ ಹೇಳುವುದಾದರೆ, ಹಲವು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಅನ್ನು ಹೊಂದಿದೆ. ಇನ್ನು ಇದರಲ್ಲಿ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ನಲ್ಲಿ ಹೊಸ ಟಿಎಫ್ಟಿ ಡಿಸ್ ಪ್ಲೇಯನ್ನು ಹೊಂದಿದೆ. ಇದು ಹೊಸ ಸ್ವಿಚ್ಗಿಯರ್ ಜೊತೆಗೆ ರೈಡರಿಗೆ ವಿವಿಧ ರೈಡರ್ ಅಸಿಸ್ಟ್ ಆಯ್ಕೆಗಳ ನಡುವೆ ನ್ಯಾವಿಗೇಟ್ ಅನ್ನು ಹೊಂದಿದೆ.
ಇನ್ನು ಹೊಸ ಸುಜುಕಿ ಹಯಾಬುಸಾದಲ್ಲಿ ಸೂಪರ್ ಬೈಕಿನಲ್ಲಿ ಕೆಲವು ಸ್ಟ್ಯಾಂಡರ್ಡ್ ಎಲೆಕ್ಟ್ರಾನಿಕ್ ಏಡ್ಸ್, ಮೂರು ಪವರ್ ಮೋಡ್ಗಳು, ಲಾಂಚ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಕೂಡ ಒಳಗೊಂಡಿದೆ
ಇನ್ನು ಈ ಬೈಕಿನಲ್ಲಿ ಕಾರ್ನರಿಂಗ್ ಎಬಿಎಸ್, ಹಿಲ್-ಹೋಲ್ಡ್ ಕಂಟ್ರೋಲ್, ಆಕ್ಟಿವ್ ಸ್ಪೀಡ್ ಲಿಮಿಟರ್, ಲೋ ಆರ್ಪಿಎಂ ಅಸಿಸ್ಟ್, ಕಂಬೈನ್ಡ್ ಬ್ರೇಕ್ ಸಿಸ್ಟಂ, ಹೊಸ ಸಿಕ್ಸ್-ಆಕ್ಸಿಸ್ ಐಎಂಯು ಮತ್ತು ಮೂರು ಹಂತದ ಎಂಜಿನ್ ಬ್ರೇಕಿಂಗ್, 10 ಹಂತದ ಹೊಂದಾಣಿಕೆ ಹೊಂದಿರುವ ಮತ್ತು ಸ್ವಿಚ್ ಮಾಡಬಹುದಾದ ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಒಳಗೊಂಡಿದೆ.
ಹೊಸ ಸುಜುಕಿ ಹಯಾಬುಸಾ ಬೈಕಿನಲ್ಲಿ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 9,700 ಆರ್ಪಿಎಂನಲ್ಲಿ 187.7 ಬಿಹೆಚ್ಪಿ ಪವರ್ ಮತ್ತು 7,000 ಆರ್ಪಿಎಂನಲ್ಲಿ 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ಬಾಕ್ಸ್ಗೆ ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್ ಮತ್ತು ಬೈ-ಡೈರಕ್ಷನಲ್ ಕ್ವಿಕ್ಶಿಫ್ಟರ್ನೊಂದಿಗೆ ಜೋಡಿಸಲಾಗಿದೆ.
2021ರ ಸುಜುಕಿ ಹಯಾಬುಸಾ ಬೈಕ್ ಗ್ಲೋಸ್ ಸ್ಪಾರ್ಕ್ಲಿ ಬ್ಲ್ಯಾಕ್/ಕ್ಯಾಂಡಿ ಬರ್ನ್ಟ್ ಗೋಲ್ಡ್, ಮೆಟಾಲಿಕ್ ಮ್ಯಾಟ್ ಸ್ವೋರ್ಡ್ ಸಿಲ್ವರ್/ಕ್ಯಾಂಡಿ ಡೇರಿಂಗ್ ರೆಡ್ ಮತ್ತು ಪರ್ಲ್ ಬ್ರಿಲಿಯಂಟ್ ವೈಟ್/ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ ಎಂಬ ಮೂರು ಬಣ್ಣಗಳ ಆಯ್ಕೆಗಳನ್ನು ಹೊಂದಿವೆ.
ಕಂಪನಿಯ ಪ್ರಕಾರ, ಈ ಹೊಸ ಸೂಪರ್ಬೈಕ್ 3.2 ಸೆಕೆಂಡುಗಳಲ್ಲಿ 0 ರಿಂದ 100 ಕಿ,ವೀ ವೇಗವನ್ನು ಪಡೆದುಕೊಳ್ಳುತ್ತದೆ ಮತ್ತು 299 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಈ 2021ರ ಸುಜುಕಿ ಹಯಾಬುಸಾ ಬೈಕ್ 265 ಕೆಜಿ ತೂಕವನ್ನು ಹೊಂದಿದೆ. ಇನ್ನು ಈ ಬೈಕ್ 20-ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು ಹೊಂದಿದೆ.