Just In
- 20 min ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 13 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 15 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 16 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
Don't Miss!
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ಟ್ರುಡರ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಸುಜುಕಿ ಮೋಟಾರ್ಸೈಕಲ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್ಸೈಕಲ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಇನ್ಟ್ರುಡರ್ ಬೈಕಿನ ಬೆಲೆಯನ್ನು ಹೆಚ್ಚಿಸಿದೆ. ಇದರಿಂದಾಗಿ ಈ ಸುಜುಕಿ ಇನ್ಟ್ರುಡರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ತುಸು ದುಬಾರಿಯಾಗಿದೆ.
ಸುಜುಕಿ ಭಾರತದಲ್ಲಿ ಈ ಇನ್ಟ್ರುಡರ್ ಬೈಕಿನ ಬೆಲೆಯನ್ನು ರೂ.186 ಗಳವರೆಗೆ ಹೆಚ್ಚಿಸಿದೆ. ಇದೀಗ ಸುಜುಕಿ ಇನ್ಟ್ರುಡರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1,22,327 ಗಳಾಗಿದೆ. ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳಿರುವುದಿಲ್ಲ. ಇನ್ನು ಈ ಸುಜುಕಿ ಇನ್ಟ್ರುಡರ್ ಬೈಕಿನ ಬಗ್ಗೆ ಹೇಳುವುದಾದರೆ, ಇದರಲ್ಲಿ ಕಡಿಮೆ-ಸ್ಲಂಗ್ ವಿನ್ಯಾಸ, ಎಲ್ಇಡಿ ಡಿಆರ್ಎಲ್ಗಳೊಂದಿಗೆ ಹೆಡ್ಲ್ಯಾಂಪ್ಗಳು, ಸ್ಪ್ಲಿಟ್ ಸೀಟುಗಳು ಮತ್ತು ಡ್ಯುಯಲ್ ಮಫ್ಲರ್ ಎಕ್ಸಾಸ್ಟ್ ಅನ್ನು ಹೊಂದಿದೆ.
ಇನ್ನು ಸುಜುಕಿ ಇನ್ಟ್ರುಡರ್ ಬೈಕಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟರ್ ಕ್ಲಸ್ಟರ್ ಮತ್ತು ಹಿಬ್ಬಂದಿ ಸವಾರನಿಗಾಗಿ ಸಣ್ಣ ಬ್ಯಾಕ್ರೆಸ್ಟ್ ಸಹ ನೀಡಲಾಗಿದೆ. ಒಟ್ಟಾರೆಯಾಗಿ ಸುಜುಕಿ ಇನ್ಟ್ರುಡರ್ ಆಕರ್ಷಕ ವಿನ್ಯಾಸದಿಂದ ಕೂಡಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್
ಇನ್ನು ಬೈಕಿನ ಹೃದಯ ಭಾಗ ಎಂದೇ ಹೇಳುವ ಎಂಜಿನ್ ಬಗ್ಗೆ ಹೇಳುವುದಾದರೆ, ಈ ಹೊಸ ಸುಜುಕಿ ಇನ್ಟ್ರುಡರ್ ಬೈಕಿನಲ್ಲಿ 154.9 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ.
ಈ ಎಂಜಿನ್ 8000 ಆರ್ಪಿಎಂನಲ್ಲಿ 13 ಬಿಹೆಚ್ಪಿ ಪವರ್ ಮತ್ತು 6000 ಆರ್ಪಿಎಂನಲ್ಲಿ 13.8 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಂಜಿನ್ ಅನ್ನು ಮತ್ತು ಐದು-ಸ್ಪೀಡ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಇನ್ನು ಈ ಬೈಕ್ ಕಂಪನಿಯ ಎಸ್ಇಪಿ (ಸುಜುಕಿ ಇಕೋ ಪರ್ಫಾರ್ಮೆನ್ಸ್) ತಂತ್ರಜ್ಞಾನ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಎಲ್ಲಾ ರೂಪಾಂತರಗಳಲ್ಲಿ ಸ್ಟ್ಯಾಂಡರ್ಡ್ ಆಗಿ ಒಳಗೊಂಡಿದೆ. ಇದು ಪರ್ಫಾಮೆನ್ಸ್ ಸುಧಾರಣೆಯೊಂದಿಗೆ ಇಂಧನ ದಕ್ಷತೆ ಹೆಚ್ಚಿಸುವಲ್ಲಿ ಸಹಕರಿಸುತ್ತದೆ.
ಇನ್ನು ಉಳಿದಂತೆ ಹೊಸ ಬೈಕ್ ಮಾದರಿಯ ತಾಂತ್ರಿಕ ಸೌಲಭ್ಯಗಳಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ, ಈ ಎಂಟ್ರಿ ಲೆವಲ್ ಕ್ರೂಸರ್ ಬೈಕ್ ಮಾದರಿಗಳಲ್ಲೇ ಇದು ಅತ್ಯುತ್ತಮ ಆಯ್ಕೆಗಳಲ್ಲಿ ಒಂದಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್
ಹೊಸ ಸುಜುಕಿ ಇನ್ಟ್ರುಡರ್ ಬೈಕ್ ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್/ಕ್ಯಾಂಡಿ ಸೋನೊಮಾ ರೆಡ್, ಗ್ಲಾಸ್ ಸ್ಪಾರ್ಕಲ್ ಬ್ಲ್ಯಾಕ್/ಮೆಟಾಲಿಕ್ ಮ್ಯಾಟ್ ಸಿಲ್ವರ್ ಮತ್ತು ಮೆಟಾಲಿಕ್ ಮ್ಯಾಟ್ ಟೈಟಾನಿಯಂ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
ಸುಜುಕಿ ಇನ್ಟ್ರುಡರ್ ಭಾರತೀಯ ಮಾರುಕಟ್ಟೆಯ ಎಂಟ್ರಿ ಲೆವೆಲ್ ಕ್ರೂಸರ್ ಬೈಕುಗಳ ವಿಭಾಗದಲ್ಲಿ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಈ ಸಣ್ಣ ಮಟ್ಟದ ಬೆಲೆ ಏರಿಕೆಯು ಈ ಬೈಕಿನ ಮಾರಾಟದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.