ಹೊಸ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಗೊಂಡ 2021ರ ಸುಜುಕಿ ಜಿಎಸ್ಎಕ್ಸ್-ಎಸ್125 ಬೈಕ್
ಸುಜುಕಿ ಮೋಟಾರ್ಸೈಕಲ್ ಕಂಪನಿಯು ತನ್ನ 2021ರ ಜಿಎಸ್ಎಕ್ಸ್-ಎಸ್125 ಬೈಕನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹೊಸ ವರ್ಷದಲ್ಲಿ ಎಂಟ್ರಿ ಲೆವಲ್ ಸುಜುಕಿ ಜಿಎಸ್ಎಕ್ಸ್-ಎಸ್12 ಬೈಕ್ ಹೊಸ ಬಣ್ಣಗಳ ಆಯ್ಕೆಗಳನ್ನು ಪಡೆದುಕೊಂಡಿವೆ.

2021ರ ಸುಜುಕಿ ಜಿಎಸ್ಎಕ್ಸ್-ಎಸ್12 ಬೈಕ್ ಟ್ರೈಟಾನ್ ಮೆಟಾಲಿಕ್ ಬ್ಲೂ ಮತ್ತು ಟೈಟಾನ್ ಬ್ಲ್ಯಾಕ್ ಎಂಬ ಎರಡು ಹೊಸ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ. ಇನ್ನು ಈ ಹೊಸ ಬೈಕ್ ಕೆಲವು ಸೂಕ್ಷ್ಮ ನವೀಕರರಣಗಳನ್ನು ಪಡೆದುಕೊಂಡಿದೆ. ಮ್ಯಾಕನಿಕಲ್ ಅಂಶಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಈ ಹೊಸ ಸುಜುಕಿ ಜಿಎಸ್ಎಕ್ಸ್-ಎಸ್125 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಬೈಕಿನ ಹೃದಯ ಭಾಗ ಎಂದೇ ಹೇಳುವ ಎಂಜಿನ್ ಬಗ್ಗೆ ಹೇಳುವುದಾದರೆ, ಹಿಂದಿನ ಮಾದರಿಯಲ್ಲಿದ್ದ ಅದೇ 124ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು 2021ರ ಸುಜುಕಿ ಜಿಎಸ್ಎಕ್ಸ್-ಎಸ್125 ಬೈಕಿನಲ್ಲಿ ಅಳವಡಿಸಿಸಲಾಗಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್ಸೈಕಲ್

ಈ ಎಂಜಿನ್ 15 ಬಿಹೆಚ್‍ಪಿ ಪವರ್ ಮತ್ತು 11 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಂಜಿನ್ ಅನ್ನು ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಇನ್ನು 2021ರ ಸುಜುಕಿ ಜಿಎಸ್ಎಕ್ಸ್-ಎಸ್125 ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಸುರಕ್ಷತಾ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 290 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 187 ಎಂಎಂ ಡಿಸ್ಕ್ ಅನ್ನು ಅಳವಡಿಸಿದ್ದಾರೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಿದ್ದಾರೆ.

2021ರ ಸುಜುಕಿ ಜಿಎಸ್ಎಕ್ಸ್-ಎಸ್125 ಬೈಕಿನಲ್ಲಿ ಡಿಆರ್ಎಲ್ ಗಳೊಂದಿಗೆ ಆಲ್-ಎಲ್ಇಡಿ ಹೆಡ್ ಲೈಟ್ ಅನ್ನು ಹೊಂದಿದೆ. ಇನ್ನು ಸ್ಪೀಡ್, ಇಂಧನ ಮಟ್ಟ, ಎಂಜಿನ್ ತಾಪಮಾನ, ಗೇರ್ ಸ್ಥಾನದ ಸೂಚಕ ಮತ್ತು ಸರಾಸರಿ ಇಂಧನ ಬಳಕೆಯ ಮಾಹಿತಿಯನ್ನು ಪ್ರದರ್ಶಿಸುವ ಫುಲ್ ಎಲ್ಸಿಡಿ ಡಿಸ್ ಪ್ಲೇಯನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತೀಯ ಮಾರುಕಟ್ಟೆಯಲ್ಲಿ ಸುಜುಕಿ ಮೋಟಾರ್‍ಸೈಕಲ್ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಸುಜುಕಿ ಮೋಟಾರ್ಸೈಕಲ್ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಇತ್ತೀಚೆಗೆ ಭಾರತದಲ್ಲಿ ಸ್ಫಾಟ್ ಟೆಸ್ಟ್ ನಡೆಸಿದೆ. ಹೊಸ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಎಲೆಕ್ಟ್ರಿಕ್ ಸ್ಕೂಟರ್ ಬಹುತೇಕೆ ತನ್ನ ಪೆಟ್ರೋಲ್ ಮಾದರಿಯ ರೀತಿಯಲ್ಲೇ ವಿನ್ಯಾಸವನ್ನು ಹೊಂದಿರಲಿದೆ..

ಇನ್ನು 2021ರ ಸುಜುಕಿ ಜಿಎಸ್ಎಕ್ಸ್-ಎಸ್125 ಡನ್ಲೋಪ್ ಡಿ102 ಟಯರ್ ಗಳಲ್ಲಿ ಅಲ್ಯೂಮಿನಿಯಂ ವ್ಹೀಲ್ ಅನ್ನು ಹೊಂದಿದೆ. ಇನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 2021ರ ಸುಜುಕಿ ಜಿಎಸ್ಎಕ್ಸ್-ಎಸ್125 ಬೈಕಿನ ಬೆಲೆಯು ಭಾರತದ ಕರೆನ್ಸಿ ಅನುವಾದಿಸಿದಾಗ ಅಂದಾಜು ರೂ.2.69 ಲಕ್ಷಗಳಾಗಿದೆ.


Click it and Unblock the Notifications








