Just In
Don't Miss!
- News
ಶ್ವಾನಗಳಿಂದ ಕೊರೊನಾ ಸೋಂಕು ನಿಖರ ಪತ್ತೆ: ಅಧ್ಯಯನ ವರದಿ
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Finance
ಮಹಾರಾಷ್ಟ್ರದಲ್ಲಿ ಲಾಕ್‌ಡೌನ್: ಕಾರುಗಳ ಉತ್ಪಾದನೆ ಮೇಲೆ ಭಾರೀ ಪರಿಣಾಮ
- Movies
ಸುಶಾಂತ್ ಸಿಂಗ್ ಸಾವಿನ ಬಗ್ಗೆ ಕಂಗನಾ ರಣಾವತ್ ಯೂ-ಟರ್ನ್?
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್
ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯು 2021ರ ಮಾರ್ಚ್ ತಿಂಗಳ ದ್ವಿಚಕ್ರ ವಾಹನ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ ಕಳೆದ ತಿಂಗಳು ಸುಜುಕಿ ಕಂಪನಿಯು ಒಟ್ಟು 69,942 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಕಳೆದ ವರ್ಷ ಇದೇ ತಿಂಗಳಿನಲ್ಲಿ 40,636 ಯುನಿಟ್‌ಗಳನ್ನು ಮಾರಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.72.11 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಆದರೆ ಕಳೆದ ವರ್ಷದ ಮಾರ್ಚ್ ತಿಂಗಳಿನ ದ್ವಿತೀಯಾರ್ಧದಲ್ಲಿ ಕೊರೊನಾ ಆರ್ಭಟದಿಂದಾಗಿ ಲಾಕ್‌ಡೌನ್ ಹೇರಿದ್ದರು. ಇದೇ ಕಾರಣದಿಂದ ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ ಮಾರಾಟದಲ್ಲಿ ಕುಸಿತವಾಗಿತ್ತು.

ಮಾರಾಟದ ಸಾಧನೆ ಕುರಿತು ಮಾತನಾಡಿದ ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕೊಯಿಚಿರೊ ಹಿರಾವ್, ಈ ಹಣಕಾಸು ವರ್ಷವು ಕೊರೊನಾದಿಂದ ಇಡೀ ವಾಹನ ಉದ್ಯಮಕ್ಕೆ ಸವಾಲಾಗಿತ್ತು. ನಾವು ಹೆಚ್ಚು ಗ್ರಾಹಕ-ಕೇಂದ್ರಿತವಾಗಿದ್ದೇವೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್ಸೈಕಲ್

ಡೋರ್‌ಸ್ಟೆಪ್ ಮಾರಾಟ ಎಂಬ ಯೋಜನೆಯ ಮೂಲಕ ನಾವು ಗ್ರಾಹಕರಿಗೆ ಹತ್ತಿರವಾಗಿದ್ದೇವೆ. ಈ ಅವಧಿಯಲ್ಲಿ ಸುಜುಕಿ ಜಿಕ್ಸರ್ ಎಸ್‌ಎಫ್ 250 ಮಾದರಿಯು 5 ದಶಲಕ್ಷ ಉತ್ಪಾದನೆಯ ಮೈಲಿಗಲ್ಲನ್ನು ಸಾಧಿಸುವಲ್ಲಿ ನಮಗೆ ಬೆಂಬಲ ನೀಡಿದ ನಮ್ಮ ಗ್ರಾಹಕರಿಗೆ ಕೃತಜ್ಞರಾಗಿರುತ್ತೇವೆ ಎಂದು ಹೇಳಿದರು.

2021ರ ಮಾರ್ಚ್ ತಿಂಗಳಿನಲ್ಲಿ ಸುಜುಕಿ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ 60,222 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಕಳೆದ ತಿಂಗಳಿನಲ್ಲಿ 9720 ಯುನಿಟ್‌ಗಳನ್ನು ರಫ್ತು ಮಾಡಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

2020ರ ಮಾರ್ಚ್ ತಿಂಗಳಲ್ಲಿ 33,930 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕೆ ಹೋಲಿಸಿದರೆ ಶೇ.77.48 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಕಳೆದ ವರ್ಷದ ಮಾರ್ಚ್ ತಿಂಗಳ ರಫ್ತನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.45 ರಷ್ಟು ಹೆಚ್ಚಾಗಿದೆ.

ಇನ್ನು 2021ರ ಸುಜುಕಿ ಹಯಾಬುಸಾ ಸೂಪರ್ ಬೈಕ್ ಇದೇ ತಿಂಗಳು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಸುಜುಕಿ ಮೋಟಾರ್ಸೈಕಲ್ ಕಂಪನಿಯು ಖಚಿತಪಡಿಸಿದೆ. ಇದರ ಬಿಡುಗಡೆ ದಿನಾಂಕ ಮತ್ತು ಇತರ ಬುಕ್ಕಿಂಗ್ ವಿವರಗಳನ್ನು ಬಹಿರಂಗಪಡಿಸಿಲ್ಲ. ವರದಿಗಳ ಪ್ರಕಾರ, 2021ರ ಸುಜುಕಿ ಹಯಾಬುಸಾ ಬೈಕಿನ ಖರೀದಿಗಾಗಿ ಅನಧಿಕೃತವಾಗಿ ಬುಕ್ಕಿಂಗ್ ಅನ್ನು ಡೀಲರುಗಳು ಪ್ರಾರಂಭಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ಹಲವು ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿ ಪಡಿಸುತ್ತಿದೆ. ಇದೀಗ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಸುಜುಕಿ ಮೋಟಾರ್ಸೈಕಲ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ

ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬ್ರ್ಯಾಂಡ್‌ನ ಜನಪ್ರಿಯ ಬರ್ಗ್‌ಮನ್ ಸ್ಟ್ರೀಟ್ 125 ಮ್ಯಾಕ್ಸಿ-ಸ್ಕೂಟರ್ ಆಧರಿಸಿ ಅಭಿವೃದ್ದಿ ಪಡಿಸಲಿದೆ. ಸುಜುಕಿ ಮೋಟಾರ್ಸೈಕಲ್ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತದಲ್ಲಿ ಈಗಗಾಲೇ ಸ್ಫಾಟ್ ಟೆಸ್ಟ್ ನಡೆಸಿದೆ.

ಇನ್ನು ಸುಜುಕಿ ದ್ವಿಚಕ್ರ ವಾಹನ ಮಾರಾಟದಲ್ಲಿ ಉತ್ತಮವಾಗಿ ಏರಿಕೆಯಾಗಿದೆ. ಸುಜುಕಿಯ ಹಲವು ದ್ದ್ವಿಚಕ್ರ ವಾಹನಗಳು ಭಾರತದಲ್ಲಿ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಸುಜುಕಿ ಭಾರತದಲ್ಲಿ ಕೆಲವು ಹೊಸ ಮಾದರಿಗಳನ್ನು ಪರಿಚಯಿಸಲಿದೆ.