ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು 2021ರ ಜುಲೈ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಇದರ ಪ್ರಕಾರ ಕಳೆದ ತಿಂಗಳಿನಲ್ಲಿ ಸುಜುಕಿ ಮೋಟಾರ್‌ಸೈಕಲ್ ಕಂಪನಿಯು 73,083 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ 60,589 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಕೇವಲ 34,412 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಅದರಲ್ಲಿ 1,421 ದ್ವಿಚಕ್ರ ವಾಹನಗಳನ್ನು ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ. ದೇಶಿಯ ಮಾರುಕಟ್ಟೆಯ ಮಾರಾಟದಲ್ಲಿ ಶೇ.92.8 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಸತೋಶಿ ಅವರು ಮಾತನಾಡಿ, ಅನೇಕ ನಗರಗಳಲ್ಲಿ ಹಂತ ಹಂತದ ಅನ್‌ಲಾಕ್ ಮತ್ತು ಎರಡನೇ ಅಲೆಯ ಕರೋನಾ ಪ್ರಕರಣಗಳ ಕುಸಿತದೊಂದಿಗೆ, ನಾವು ವಿವರವಾದ ಆಪರೇಟಿಂಗ್ ಮಾರ್ಗಸೂಚಿಗಳನ್ನು ಅನುಸರಿಸುತ್ತಲೇ ಉತ್ಪಾದನೆಯನ್ನು ಹೆಚ್ಚಿಸಿದ್ದೇವೆ.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಇದರ ಪರಿಣಾಮವಾಗಿ, ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಕಳೆದ ತಿಂಗಳು ದೇಶೀಯ ಮಾರುಕಟ್ಟೆಯಲ್ಲಿ ಶೇಕಡಾ 92.8 ರಷ್ಟು ಬೆಳವಣಿಗೆಯನ್ನು ಕಂಡಿದೆ ಮತ್ತು ರಫ್ತಿನಲ್ಲಿ ಶೇ.17.7 ರಷ್ಟು ಹೆಚ್ಚಳವನ್ನು ಕಂಡಿದೆ. ಇನ್ನು 112 ಶೇಕಡಾಕ್ಕಿಂತ ಹೆಚ್ಚಿನ ವಾರ್ಷಿಕ ಬೆಳವಣಿಗೆಯನ್ನು ಸಾಧಿಸಿದೆ ಎಂದರು.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಮೋಟಾರ್‌ಸೈಕಲ್‌ ತನ್ನ ಹೊಸ ಹಯಾಬುಸಾ ಬೈಕನ್ನು ಭಾರತದಲ್ಲಿ ಈ ವರ್ಷದ ಏಪ್ರಿಲ್ 26ಕ್ಕೆ ಬಿಡುಗಡೆಗೊಳಿಸಿತ್ತು. ಸುಜುಕಿ ಹೊಸ ಹಯಾಬುಸಾದ ಬೈಕಿನ ಮೊದಲ ಬ್ಯಾಚ್ ಆಗಿ 101 ಯುನಿಟ್ ಗಳನ್ನು ಬಿಡುಗಡೆಗೊಳಿಸಿತ್ತು. ಈ ಎಲ್ಲಾ ಯುನಿಟ್‌ಗಳು ಬುಕ್ಕಿಂಗ್ ಪ್ರಾರಂಭವಾದ ಒಂದೆರಡು ದಿನಗಳಲ್ಲಿ ಮಾರಾಟವಾದವು.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ನಂತರ ಸುಜುಕಿ ಹಯಾಬುಸಾ ಬೈಕಿನ ಎರಡನೇ ಬ್ಯಾಚ್ ಅನ್ನು ಜುಲೈ 1 ರಿಂದ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದರು. ಎರಡನೇ ಬ್ಯಾಚ್​​ನಲ್ಲಿ ಹಯಾಬುಸಾ ಬೈಕಿನ 100 ಯುನಿಟ್ ಗಳಿತ್ತು. ಈ ಎಲ್ಲಾ ಯುನಿಟ್‌ಗಳು ಕೇವಲ ಒಂದು ಗಂಟೆಯಲ್ಲಿ ಮಾರಾಟ ಮಾಡಲಾಯಿತು. ಇದರಿಂದ ನಿಸ್ಸಂಶಯವಾಗಿ ಹೇಳಬಹುದು, ಭಾರತದ ಅತ್ಯಂತ ಜನಪ್ರಿಯ ಸೂಪರ್‌ ಬೈಕ್‌ಗಳಲ್ಲಿ ಒಂದಾಗಿದೆ.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಕರೋನಾ ಸಂಕಷ್ಟದ ನಡುವೆಯೂ ಭಾರತದಲ್ಲಿ ಐಷಾರಾಮಿ 2021ರ ಸುಜುಕಿ ಹಯಾಬುಸಾ ಬೈಕಿಗೆ ಸಖತ್ ಡಿಮ್ಯಾಂಡ್ ಪಡೆದುಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಸೂಪರ್ ಬೈಕ್ ವಿಭಾಗದಲ್ಲಿ ಸುಜುಕಿ ಹಯಾಬುಸಾ ಮಾದರಿಯು ಹೊಸ ಸಂಚಲನವನ್ನು ಸೃಷ್ಟಿಸಿದೆ.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಹಯಾಬುಸಾ ಬೈಕಿನಲ್ಲಿ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 9,700 ಆರ್‌ಪಿಎಂನಲ್ಲಿ 187.7 ಬಿಹೆಚ್‌ಪಿ ಪವರ್ ಮತ್ತು 7,000 ಆರ್‌ಪಿಎಂನಲ್ಲಿ 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್ ಮತ್ತು ಬೈ-ಡೈರಕ್ಷನಲ್ ಕ್ವಿಕ್‌ಶಿಫ್ಟರ್‌ನೊಂದಿಗೆ ಜೋಡಿಸಲಾಗಿದೆ.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಇನ್ನು ಇತ್ತೀಚೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿ ಪಡಿಸುತ್ತಿದೆ. ಇದರ ಜೊತೆಗೆ ಜಪಾನ್ ಮೂಲದ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‍‍ಸೈಕಲ್ ಕೂಡ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಅಭಿವೃದ್ಧಿಪಡಿಸುತ್ತಿದೆ.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಸುಜುಕಿ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಪರಿಚಯಿಸಲು ಭರ್ಜರಿಯಾಗಿ ಸಜ್ಜಾಗುತ್ತಿದೆ. ಈ ಹೊಸ ಸುಜುಕಿ ಎಲೆಕ್ಟ್ರಿಕ್ ಸ್ಕೂಟರ್ ಪೇಟೆಂಟ್ ಚಿತ್ರಗಳು ಇತ್ತೀಚೆಗೆ ಬಹಿರಂಗವಾಗಿತ್ತಿ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ನ ಆಕಾರ ಮತ್ತು ಸಿಲೂಯೆಟ್ ಸಾಂಪ್ರದಾಯಿಕ ಸ್ಕೂಟರ್‌ಗಳಿಗೆ ಹೋಲುತ್ತದೆ ಎಂದು ತೋರುತ್ತದೆಯಾದರೂ, ವಿನ್ಯಾಸವು ಸ್ವಲ್ಪ ವಿಭಿನ್ನವಾಗಿದೆ.

ಜುಲೈ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಸುಜುಕಿ ಮೋಟಾರ್‌ಸೈಕಲ್

ಎಲೆಕ್ಟ್ರಿಕ್ ಸ್ಕೂಟರ್ ಆಗಿರುವುದರಿಂದ ಕೆಲವು ಸಣ್ಣ ಬದಲಾವಣೆಗಳನ್ನು ಪಡೆದುಕೊಳ್ಳುತ್ತದೆ. ಇನ್ನು ಕರೋನಾ ಆತಂಕದ ನಡುವೆ ಕಳೆದ ತಿಂಗಳ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಸುಜುಕಿ ಕಂಪನಿಯ ಜನಪ್ರಿಯ ಮತ್ತು ದುಬಾರಿ ಹಯಾಬುಸಾ ಸೂಪರ್ ಬೈಕ್ ಸೋಲ್ಡ್ ಔಟ್ ಆಗಿದೆ. ಸುಜುಕಿ ಮೋಟಾರ್‍‍ಸೈಕಲ್ ಕಂಪನಿಯು ತಮ್ಮ ದ್ವಿಚಕ್ರ ವಾಹನಗಳ ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸುತ್ತಿದೆ.

Most Read Articles

Kannada
English summary
Suzuki motorcycle two wheeler sales growth 112 percent in july 2021 details
Story first published: Tuesday, August 3, 2021, 19:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X