Just In
- 5 min ago XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 2 hrs ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 15 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 16 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
Don't Miss!
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹುನಿರೀಕ್ಷಿತ 2021ರ ಸುಜುಕಿ ಹಯಾಬುಸಾ ಬೈಕಿನ ಟೀಸರ್ ಬಿಡುಗಡೆ
ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್ಸೈಕಲ್ ತನ್ನ ಹೊಸ ಹಯಾಬುಸಾ ಸೂಪರ್ ಬೈಕನ್ನು ಜಾಗತಿಕವಾಗಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಈ ಹೊಸ ಸುಜುಕಿ ಹಯಾಬುಸಾ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.
ಇದೀಗ ಸುಜುಕಿ ಮೋಟಾರ್ಸೈಕಲ್ ಇಂಡಿಯಾ ಕಂಪನಿಯು ತನ್ನ ಹೊಸ ಹಯಾಬುಸಾ ಬೈಕಿನ ಅಧಿಕೃತ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಟೀಸರ್ ನಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಬಹುನಿರೀಕ್ಷಿತ 2021ರ ಸುಜುಕಿ ಹಯಾಬುಸಾ ಕಾಸ್ಮೆಟಿಕ್ ಬದಲಾವಣೆಗಳ ಜೊತೆಗೆ ಕೆಲವು ಹೊಸ ಫೀಚರ್ ಗಳನ್ನು ಪಡೆದುಕೊಂಡಿದೆ. ವರದಿಗಳ ಪ್ರಕಾರ, 2021ರ ಸುಜುಕಿ ಹಯಾಬುಸಾ ಬೈಕಿನ ಖರೀದಿಗಾಗಿ ಅನಧಿಕೃತವಾಗಿ ಬುಕ್ಕಿಂಗ್ ಅನ್ನು ಡೀಲರುಗಳು ಪ್ರಾರಂಭಿಸಲಾಗಿದೆ.
ಬುಕ್ಕಿಂಗ್ ಮಾಡಲು ಟೋಕನ್ ಮೊತ್ತ ರೂ. 2 ಲಕ್ಷವನ್ನು ನಿಗಧಿಪಡಿಸಿದ್ದಾರೆ. ಅಲ್ಲದೇ ಈ ಹೊಸ ಹಯಾಬುಸಾ ಬೈಕಿನ ಬಿಡುಗಡೆಯ ಬಗ್ಗೆಯು ಮಾಹಿತಿ ಬಹಿರಂಗವಾಗಿದೆ. ಇದರಂತೆ ಹೊಸ ಹಯಾಬುಸಾ ಸೂಪರ್ ಬೈಕ್ 2021ರ ಏಪ್ರಿಲ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್ಸೈಕಲ್
ಹೊಸ ಸುಜುಕಿ ಹಯಾಬುಸಾ ಬೈಕಿನ ವಿನ್ಯಾಸವನ್ನು ನವೀಕರಿಸಲಾಗಿದೆ, ಆದರೆ ಸೂಪರ್ ಬೈಕಿನ ಸಾಂಪ್ರದಾಯಿಕ ಶೈಲಿಯನ್ನು ಉಳಿಸಿಕೊಂಡಿದೆ. ಒಟ್ಟಾರೆ ಸಿಲೂಯೆಟ್ ಅನ್ನು ಒಂದೇ ರೀತಿ ಇರಿಸಲಾಗಿದ್ದರೂ, ಸೂಪರ್ ಬೈಕ್ ಹೆಚ್ಚು ಅಗ್ರೇಸಿವ್ ವಿನ್ಯಾಸದೊಂದಿಗೆ ತೀಕ್ಷ್ಣವಾದ ಲೈನ್ ಗಳನ್ನು ಒಳಗೊಂಡಿವೆ.
2021ರ ಹಯಾಬುಸಾ ಬೈಕ್ ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇದು ಹೆಡ್ ಲ್ಯಾಂಪ್ ಮತ್ತು ಟೈಲ್ ಗಳನ್ನು ಒಳಗೊಂಡಿದೆ. ಮುಂಭಾಗದಲ್ಲಿರುವ ಇಂಡಿಕೇಟರ್ ಸ್ಥಾನ ಲೈಟ್ ಗಳೊಂದಿಗೆ ಸಂಯೋಜಿಸಲಾಗಿದೆ, ಮುಂಭಾಗದ ಏರ್ ಟೆಕ್ ಹೊರಭಾಗದಲ್ಲಿ ಇರಿಸಲಾಗುತ್ತದೆ. ಸೂಪರ್ಬೈಕ್ನ 2021 ಆವೃತ್ತಿಯು ದೊಡ್ಡ ಡ್ಯುಯಲ್ ಕ್ರೋಮ್-ಲೇಪಿತ ಎಕ್ಸಾಸ್ಟ್ ಪೈಪ್ಸ್ ಅನ್ನು ಹೊಂದಿದೆ. ಇದು ಹಯಾಬುಸಾದ ಕಮಾಂಡಿಂಗ್ ಸ್ವರೂಪವನ್ನು ಹೆಚ್ಚಿಸುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್
ಇನ್ನು ಈ ಸೂಪರ್ ಬೈಕ್ ಫೀಚರ್ ಗಳ ಬಗ್ಗೆ ಹೇಳುವುದಾದರೆ, ಹಲವಾರು ಉಪಕರಣಗಳು ಮತ್ತು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಅನ್ನು ಹೊಂದಿದೆ. ಇನ್ನು ಇದರಲ್ಲಿ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ನಲ್ಲಿ ಹೊಸ ಟಿಎಫ್ಟಿ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ.
ಇದು ಹೊಸ ಸ್ವಿಚ್ಗಿಯರ್ ಜೊತೆಗೆ ರೈಡರಿಗೆ ವಿವಿಧ ರೈಡರ್ ಅಸಿಸ್ಟ್ ಆಯ್ಕೆಗಳ ನಡುವೆ ನ್ಯಾವಿಗೇಟ್ ಅನ್ನು ನೀಡಿದೆ. ಇನ್ನು 2021ರ ಸುಜುಕಿ ಹಯಾಬುಸಾದಲ್ಲಿ ಕೆಲವು ಸ್ಟ್ಯಾಂಡರ್ಡ್ ಎಲೆಕ್ಟ್ರಾನಿಕ್ ಏಡ್ಸ್, ಮೂರು ಪವರ್ ಮೋಡ್ಗಳು, ಲಾಂಚ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಹೊಂದಿವೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್
ಇದರೊಂದಿಗೆ ಕಾರ್ನರಿಂಗ್ ಎಬಿಎಸ್, ಹಿಲ್-ಹೋಲ್ಡ್ ಕಂಟ್ರೋಲ್, ಹೊಸ ಸಿಕ್ಸ್-ಆಕ್ಸಿಸ್ ಐಎಂಯು ಮತ್ತು ಮೂರು ಹಂತದ ಎಂಜಿನ್ ಬ್ರೇಕಿಂಗ್, ಟ್ರ್ಯಾಕ್ಷನ್ ಕಂಟ್ರೋಲ್ ಆಂಟಿ ವ್ಹೀಲಿ ಕಂಟ್ರೋಲ್ ಹತ್ತು ಹಂತಗಳನ್ನು ಹೊಂದಿದೆ. ಹಯಾಬುಸಾ ಬ್ರ್ಯಾಂಡ್ನ ಎಸ್,ಐ,ಆರ್,ಎಸ್ ತಂತ್ರಜ್ಞಾನವನ್ನು (ಸುಜುಕಿ ಇಂಟೆಲಿಜೆಂಟ್ ರೈಡ್ ಸಿಸ್ಟಂ) ಸಹ ಹೊಂದಿದೆ.
2021ರ ಸುಜುಕಿ ಹಯಾಬುಸಾ ಅದೇ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 190 ಬಿಹೆಚ್ಪಿ ಪವರ್ ಮತ್ತು 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ಬಾಕ್ಸ್ನೊಂದಿಗೆ ಜೋಡಿಸಲಾಗಿದೆ. ಇದರೊಂದಿಗೆ ಬೈ-ಡೈರಕ್ಷನಲ್ ಕ್ವಿಕ್-ಶಿಫ್ಟರ್ ಮತ್ತು ರೈಡ್-ಬೈ-ವೈರ್ ತಂತ್ರಜ್ಞಾನಗಳೊಂದಿಗೆ ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.
2021ರ ಸುಜುಕಿ ಹಯಾಬುಸಾ ಬೈಕ್ 265 ಕೆಜೆ ತೂಕವನ್ನು ಹೊಂದಿದೆ. ಇನ್ನು ಈ ಬೈಕ್ 20-ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಬೈಕ್ 125 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಸುಜುಕಿ ಹಯಾಬುಸಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತು ಭಾರತದಲ್ಲಿ ಅತ್ಯಂತ ಜನಪ್ರಿಯ ಸೂಪರ್ಬೈಕ್ಗಳಲ್ಲಿ ಒಂದಾಗಿದೆ.