ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಪೆಟ್ರೋಲ್, ಡೀಸೆಲ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜನರು ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಬದಲು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಆದ್ಯತೆ ನೀಡುತ್ತಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಮೊದಲಿಗಿಂತ ಹಲವು ಪಟ್ಟು ಹೆಚ್ಚಾಗಿದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಎಲೆಕ್ಟ್ರಿಕ್ ವಾಹನಗಳ ನಿರ್ವಹಣೆಯು ಸಹ ತುಂಬಾ ಸುಲಭ. ಇದರ ಜೊತೆಗೆ ಗಂಟೆಗೆ 25 ಕಿ.ಮೀಗಳಿಗಿಂತ ಕಡಿಮೆ ವೇಗದಲ್ಲಿ ಚಲಿಸುವ ಎಲೆಕ್ಟ್ರಿಕ್ ವಾಹನಗಳನ್ನು ಚಾಲನೆ ಮಾಡಲು ಡ್ರೈವಿಂಗ್ ಲೈಸೆನ್ಸ್, ಆರ್‌ಸಿ, ಇನ್ಶ್ಯೂರೆನ್ಸ್ ಸೇರಿದಂತೆ ಯಾವುದೇ ದಾಖಲಾತಿಗಳ ಅಗತ್ಯವಿಲ್ಲ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಕೆಲವು ಎಲೆಕ್ಟ್ರಿಕ್ ವಾಹನಗಳು ವಿಶೇಷ ಫೀಚರ್'ಗಳನ್ನು ಹೊಂದಿವೆ. ಈ ಲೇಖನದಲ್ಲಿ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಖರೀದಿಸುವ ಮುನ್ನ ಪರಿಶೀಲಿಸಬೇಕಾದ ಅಂಶಗಳು ಯಾವುವು ಎಂಬುದನ್ನು ನೋಡೋಣ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ವಿನ್ಯಾಸ:

ಯಾವುದೇ ವಾಹನವನ್ನು ಖರೀದಿಸುವ ಮುನ್ನ ಆ ವಾಹನದ ವಿನ್ಯಾಸವನ್ನು ಪರಿಶೀಲಿಸಲಾಗುತ್ತದೆ. ಅದೇ ರೀತಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಖರೀದಿಸುವ ಮುನ್ನವೂ ಆ ವಾಹನದ ವಿನ್ಯಾಸವನ್ನು ಪರಿಶೀಲಿಸಿ ಖರೀದಿಸುವುದು ಸೂಕ್ತ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಫೀಚರ್'ಗಳು:

ಹೆಚ್ಚಿನ ಎಲೆಕ್ಟ್ರಿಕ್ ವಾಹನಗಳನ್ನು ಹಲವಾರು ವಿಶೇಷ ಫೀಚರ್'ಗಳೊಂದಿಗೆ ಬಿಡುಗಡೆಗೊಳಿಸಲಾಗುತ್ತಿದೆ. ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಆ್ಯಂಟಿ -ಥೆಫ್ಟ್ ಸಿಸ್ಟಂ, ಸ್ಪೀಡ್ ಲಾಕಿಂಗ್ ಸಿಸ್ಟಂ, ಕನೆಕ್ಟಿವಿಟಿ, ಸೈಡ್ ಸ್ಟ್ಯಾಂಡ್ ಇಂಡಿಕೇಟರ್, ಇ-ಎಬಿಎಸ್ ಡಿಸ್ಕ್ ಬ್ರೇಕ್, ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್ ಸೇರಿದಂತೆ ಹಲವಾರು ಫೀಚರ್'ಗಳೊಂದಿಗೆ ಮಾರಾಟ ಮಾಡಲಾಗುತ್ತದೆ. ಆದ್ದರಿಂದ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ ಖರೀದಿಸುವ ಮುನ್ನ ಅದರಲ್ಲಿರುವ ಎಲ್ಲಾ ವಿಶೇಷ ಫೀಚರ್'ಗಳನ್ನು ಪರಿಶೀಲಿಸಿ ಖರೀದಿಸುವುದು ಸೂಕ್ತ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ವ್ಯಾಪ್ತಿ:

ಎಲೆಕ್ಟ್ರಿಕ್ ಸ್ಕೂಟರ್'ಗಳಲ್ಲಿ ಫೀಚರ್ ಹಾಗೂ ಶೈಲಿಯನ್ನು ಮಾತ್ರವಲ್ಲದೆ ಶ್ರೇಣಿಯನ್ನೂ ಸಹ ನೋಡಬೇಕಾಗುತ್ತದೆ. ಸದ್ಯಕ್ಕೆ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡುವ ಚಾರ್ಜಿಂಗ್ ಕೇಂದ್ರಗಳು ಬಹಳ ಕಡಿಮೆ ಸಂಖ್ಯೆಯಲ್ಲಿವೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಈ ಕಾರಣಕ್ಕೆ ಪೂರ್ತಿಯಾಗಿ ಚಾರ್ಜ್ ಆದ ನಂತರ ಹೆಚ್ಚು ದೂರ ಚಲಿಸುವ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವುದರಿಂದ ಚಾರ್ಜಿಂಗ್ ಕೇಂದ್ರಗಳನ್ನು ಆಗಾಗ್ಗೆ ಹುಡುಕುವ ತೊಂದರೆಯನ್ನು ತಪ್ಪಿಸಬಹುದು.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಸದ್ಯಕ್ಕೆ ಭಾರತದಲ್ಲಿ ಮಾರಾಟವಾಗುತ್ತಿರುವ ಎಲೆಕ್ಟ್ರಿಕ್ ಸ್ಕೂಟರ್‌ಗಳು ಪೂರ್ತಿಯಾಗಿ ಚಾರ್ಜ್ ಆದ ನಂತರ 60 ಕಿ.ಮೀನಿಂದ 140 ಕಿ.ಮೀಗಳವರೆಗೆ ಚಲಿಸುತ್ತವೆ. ದಿನ ನಿತ್ಯದ ಬಳಕೆದಾರರನ್ನು ಪರಿಗಣಿಸಿ ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬುದು ಗಮನಾರ್ಹ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಬ್ಯಾಟರಿ:

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್'ಗಳನ್ನು ಸೀಸ-ಆಮ್ಲ (ಲೆಡ್-ಆಸಿಡ್) ಹಾಗೂ ಲಿಥಿಯಂ ಐಯಾನ್ ಎಂಬ ಎರಡು ರೀತಿಯ ಬ್ಯಾಟರಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಸೀಸ-ಆಮ್ಲ ಬ್ಯಾಟರಿಗಳಿಗಿಂತ ಲಿಥಿಯಂ-ಐಯಾನ್ ಬ್ಯಾಟರಿಗಳು ಹೆಚ್ಚು ಪರಿಣಾಮಕಾರಿ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಆದರೆ ಸೀಸ-ಆಮ್ಲ ಬ್ಯಾಟರಿಗಳ ಬೆಲೆ ಕಡಿಮೆ. ಈ ಕಾರಣಕ್ಕಾಗಿ ಸೀಸ-ಆಮ್ಲ ಬ್ಯಾಟರಿ ಹೊಂದಿರುವ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಕಡಿಮೆಯಾಗಿರುತ್ತದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಚಾರ್ಜಿಂಗ್ ಅವಧಿ:

ಭಾರತದಲ್ಲಿ ಮಾರಾಟವಾಗುವ ಬಹುತೇಕ ಎಲೆಕ್ಟ್ರಿಕ್ ವಾಹನಗಳು ಪೂರ್ತಿಯಾಗಿ ಚಾರ್ಜ್ ಆಗಲು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತವೆ. ಇದೇ ವೇಳೆ ಫಾಸ್ಟ್ ಚಾರ್ಜಿಂಗ್, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಹೊಂದಿರುವ ವಾಹನಗಳು ಸಹ ಭಾರತದಲ್ಲಿ ಮಾರಾಟವಾಗುತ್ತಿವೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಮುನ್ನ ಯಾವ ವಾಹನವು ವೇಗವಾಗಿ ಚಾರ್ಜ್ ಆಗುತ್ತದೆ ಎಂಬುದನ್ನು ಪರಿಶೀಲಿಸಿ ನಂತರ ಖರೀದಿಸುವುದು ಒಳ್ಳೆಯದು.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ವೇಗ:

ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹೆಚ್ಚಿನ ವೇಗ ಹಾಗೂ ಕಡಿಮೆ ವೇಗದ ಸಾಮರ್ಥ್ಯಗಳಲ್ಲಿ ಮಾರಾಟ ಮಾಡಲಾಗುತ್ತದೆ. 25 ಕಿ.ಮೀ ವೇಗದಲ್ಲಿ ಚಲಿಸುವ ಎಲೆಕ್ಟ್ರಿಕ್ ವಾಹನಗಳನ್ನು ಚಾಲನೆ ಮಾಡಲು ಯಾವುದೇ ದಾಖಲೆಗಳು ಅಗತ್ಯವಿಲ್ಲದಿದ್ದರೂ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಬೆಲೆ:

ಎಲೆಕ್ಟ್ರಿಕ್ ವಾಹನಗಳನ್ನು ಕಂಪನಿ ಹಾಗೂ ಪ್ರೀಮಿಯಂ ಫೀಚರ್'ಗಳಿಗೆ ಅನುಗುಣವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಹೆಚ್ಚಿನ ಪೈಪೋಟಿಯಿಂದಾಗಿ ಭಾರತದಲ್ಲಿ ಟಾಪ್ ಎಂಡ್ ಐಷಾರಾಮಿ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗುತ್ತದೆ. ನಾವು ನೀಡುವ ಮೊತ್ತಕ್ಕೆ ಯೋಗ್ಯವಾದ ಎಲೆಕ್ಟ್ರಿಕ್ ವಾಹನ ಲಭ್ಯವಿದೆಯೇ ಎಂದು ಪರಿಶೀಲಿಸಿಖರೀದಿಸುವುದು ಸೂಕ್ತ.

Most Read Articles

Kannada
English summary
Things to check before buying electric scooter. Read in Kannada.
Story first published: Saturday, April 17, 2021, 20:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X