ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. ಎಲೆಕ್ಟ್ರಿಕ್ ಬೈಕ್‌, ಎಲೆಕ್ಟ್ರಿಕ್ ಸ್ಕೂಟರ್‌, ಎಲೆಕ್ಟ್ರಿಕ್ ಆಟೋ ಹಾಗೂ ಎಲೆಕ್ಟ್ರಿಕ್ ಕಾರುಗಳ ನಂತರ ಎಲೆಕ್ಟ್ರಿಕ್ ಮಿನಿ ಲೋಡ್ ವ್ಯಾನ್‌ಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಇದರ ಜೊತೆಗೆ ಎಲೆಕ್ಟ್ರಿಕ್ ಸೈಕಲ್‌ಗಳು ಸಹ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ಎಲೆಕ್ಟ್ರಿಕ್ ಸೈಕಲ್ ಗಳು ದಿನ ನಿತ್ಯ ದ್ವಿಚಕ್ರ ವಾಹನ ಬಳಸುವವರಿಗೆ ವರದಾನವಾಗಿವೆ ಎಂದೇ ಹೇಳಬಹುದು. ಎಲೆಕ್ಟ್ರಿಕ್ ಸೈಕಲ್ ಗಳು ಎಲೆಕ್ಟ್ರಿಕ್ ಸ್ಕೂಟರ್‌ ಹಾಗೂ ಎಲೆಕ್ಟ್ರಿಕ್ ಬೈಕ್‌ಗಳಿಗೆ ಸರಿ ಸಮಾನವಾಗಿ ಮಾರಾಟವಾಗುತ್ತಿವೆ. ಈ ಲೇಖನದಲ್ಲಿ ಭಾರತದ ಅತ್ಯುತ್ತಮ ಎಲೆಕ್ಟ್ರಿಕ್ ಸೈಕಲ್ ಗಳೆಂದು ಪರಿಗಣಿಸಬಹುದಾದ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳು ಯಾವುವು ಎಂಬುದನ್ನು ನೋಡೋಣ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

Hero Lectro E-Zephyr TX 700C SS

ಬೆಲೆ: ರೂ. 21,000

ಪ್ರಮುಖ ಸೈಕಲ್ ತಯಾರಕ ಕಂಪನಿಯಾದ Hero Lectro ಹಲವು ಎಲೆಕ್ಟ್ರಿಕ್ ಸೈಕಲ್ ಗಳನ್ನು ಮಾರಾಟ ಮಾಡುತ್ತದೆ. ಅವುಗಳಲ್ಲಿ E-Zephyr TX 700C SS ಕಂಪನಿಯ ಪ್ರಮುಖ ಎಲೆಕ್ಟ್ರಿಕ್ ಸೈಕಲ್ ಗಳಲ್ಲಿ ಒಂದಾಗಿದೆ. ಈ ಎಲೆಕ್ಟ್ರಿಕ್ ಸೈಕಲ್ ಕಳೆದ ಕೆಲವು ವರ್ಷಗಳಿಂದ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ಕೈಗೆಟುಕುವ ಬೆಲೆಯ ಎಲೆಕ್ಟ್ರಿಕ್ ಸೈಕಲ್ ಬಯಸುವವರಿಗೆ E-Zephyr TX 700C SS ಉತ್ತಮ ಆಯ್ಕೆಯಾಗಿದೆ. ಈ ಎಲೆಕ್ಟ್ರಿಕ್ ಸೈಕಲ್ 250 ವ್ಯಾ, 36 ವೋಲ್ಟ್ ಹಬ್ ಮೋಟರ್ ಹೊಂದಿದೆ. ಈ ಮೋಟರ್ ಗರಿಷ್ಠ 40 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ಇದರಲ್ಲಿ 5.8 ಎಹೆಚ್ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದ ನಂತರ 25 ರಿಂದ 45 ಕಿ.ಮೀಗಳವರೆಗೆ ಚಲಿಸಬಹುದು. ಈ 4 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಮಾಡಬಹುದು. ಈ ಎಲೆಕ್ಟ್ರಿಕ್ ಸೈಕಲ್ ಹಲವು ರೈಡಿಂಗ್ ಮೋಡ್‌ಗಳನ್ನು ಹೊಂದಿದೆ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

Nuze i1

ಬೆಲೆ: ರೂ. 30,616

Nuze i1 ಎಲೆಕ್ಟ್ರಿಕ್ ಬೈಕ್ ಎಲ್ಲಾ ರೀತಿಯ ಬಳಕೆದಾರರಿಗೆ ಸೂಕ್ತವಾಗಿದೆ. Nuze i1 ಎಲೆಕ್ಟ್ರಿಕ್ ಸೈಕಲ್ ನಲ್ಲಿ 5.2 ಎಹೆಚ್ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ಅಳವಡಿಸಲಾಗಿದೆ. ಈ ಬ್ಯಾಟರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 25 ಕಿ.ಮೀಗಳಿಂದ 30 ಕಿ.ಮೀಗಳವರೆಗೆ ಚಲಿಸಬಹುದು.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ಈ ಬ್ಯಾಟರಿಯನ್ನು 3 ರಿಂದ 4 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಮಾಡಬಹುದು. Nuze i1 ಎಲೆಕ್ಟ್ರಿಕ್ ಸೈಕಲ್‌ನಲ್ಲಿ ಸಸ್ಪೆಂಷನ್, ಹಗುರವಾದ ಫ್ರೇಮ್ ಸೇರಿದಂತೆ ಎರಡೂ ವ್ಹೀಲ್ ಗಳಲ್ಲಿ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

Toutche Heileo M100

ಬೆಲೆ: ರೂ. 49,900

Heileo M100 ಎಲೆಕ್ಟ್ರಿಕ್ ಸೈಕಲ್ ಸ್ವಲ್ಪ ದುಬಾರಿ ಬೆಲೆಯನ್ನು ಹೊಂದಿದೆ. ದುಬಾರಿ ಬೆಲೆಯನ್ನು ಹೊಂದಿದ್ದರೂ ಗುಣಮಟ್ಟದ ಫೀಚರ್ ಗಳನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಸೈಕಲ್ ನಲ್ಲಿ 10.4 ಎಹೆಚ್, 36 ವೋಲ್ಟ್ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಬ್ಯಾಟರಿಯನ್ನು ಪ್ರತ್ಯೇಕವಾಗಿ ಪ್ಲಗ್ ಇನ್ ಮಾಡಬಹುದು.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ಇದರಿಂದ ಎಲ್ಲಿ ಬೇಕಾದರೂ ಈ ಬ್ಯಾಟರಿಯನ್ನು ಚಾರ್ಜ್ ಮಾಡಬಹುದು. ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿ, ಪೆಡಲ್ ಅಸಿಸ್ಟ್ ಫೀಚರ್ ನೊಂದಿಗೆ ಕಾರ್ಯನಿರ್ವಹಿಸಿದರೆ 60 ಕಿ.ಮೀಗಳವರೆಗೆ ಚಲಿಸಬಹುದು. ಥ್ರೊಟಲ್ ಮೋಡ್ ಮೂಲಕ ಕೇವಲ 50 ಕಿ.ಮೀಗಳವರೆಗೆ ಚಲಿಸಬಹುದು. ಈ ಬ್ಯಾಟರಿಯನ್ನು 2.5 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಮಾಡಬಹುದು.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ನೇರವಾಗಿ ಹಿಂಬದಿ ಚಕ್ರಕ್ಕೆ ಚಾಲನೆ ನೀಡಲು ಈ ಎಲೆಕ್ಟ್ರಿಕ್ ಸೈಕಲ್ ನಲ್ಲಿ 250 ವ್ಯಾಟ್ ಬಿ‌ಎಲ್‌ಡಿ‌ಸಿ ಮೋಟರ್ ಅಳವಡಿಸಲಾಗಿದೆ. ಈ ಎಲೆಕ್ಟ್ರಿಕ್ ಸೈಕಲ್ ಪ್ರತಿ ಗಂಟೆಗೆ 25 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಸೈಕಲ್ ನಲ್ಲಿ ಎಲೆಕ್ಟ್ರಿಕ್ ಅಸಿಸ್ಟ್, ಸ್ಪೀಡ್ ಟ್ರೈಲರ್, ಫೋರ್ಕ್, ಡಿಸ್ಕ್ ಬ್ರೇಕ್ ಹಾಗೂ ಹಗುರವಾದ ಅಲಾಯ್ ಫ್ರೇಮ್ ಗಳನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

EMotorad EMX

ಬೆಲೆ: ರೂ. 54,999

EMX ಮಾದರಿಯು EMotorad ಕಂಪನಿಯ ಜನಪ್ರಿಯ ಎಲೆಕ್ಟ್ರಿಕ್ ಬೈಸಿಕಲ್ ಆಗಿದೆ. EMX ಮುಂಭಾಗ ಹಾಗೂ ಹಿಂಭಾಗದಲ್ಲಿ ಸಸ್ಪೆಂಷನ್ ಹೊಂದಿರುವ ಮೊದಲ ಎಲೆಕ್ಟ್ರಿಕ್ ಸೈಕಲ್ ಆಗಿದೆ. ಈ ಎಲೆಕ್ಟ್ರಿಕ್ ಸೈಕಲ್ ಹಲವು ಫೀಚರ್ ಗಳನ್ನು ಹೊಂದಿರುವುದರಿಂದ ಬೆಲೆ ಸ್ವಲ್ಪ ಹೆಚ್ಚಾಗಿದೆ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

EMX ಎಲೆಕ್ಟ್ರಿಕ್ ಸೈಕಲ್ ನಲ್ಲಿ 10.4 ಎಹೆಚ್ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಬ್ಯಾಟರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 65 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಬ್ಯಾಟರಿಯನ್ನು 4 ರಿಂದ 5 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಮಾಡಬಹುದು.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ಅತ್ಯುತ್ತಮ ಸವಾರಿ ಅನುಭವವನ್ನು ನೀಡಲು EMX ಎಲೆಕ್ಟ್ರಿಕ್ ಸೈಕಲ್‌ನಲ್ಲಿ ಶಿಮಾನೋ ಟೂರ್ನಿ 21 ಸ್ಪೀಡ್ ಡ್ರೈವ್‌ಟ್ರೇನ್ ಅನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಈ ಎಲೆಕ್ಟ್ರಿಕ್ ಸೈಕಲ್ ಮುಂಭಾಗ ಹಾಗೂ ಹಿಂಭಾಗದ ಚಕ್ರಗಳಲ್ಲಿ ಶಾಕ್ ಅಬ್ಸಾರ್ವರ್, ಡಿಸ್ಕ್ ಬ್ರೇಕ್ ಹಾಗೂ ಸಣ್ಣ ಎಲ್ಇಡಿ ಹೆಡ್ ಲೈಟ್ ಗಳನ್ನು ನೀಡಲಾಗಿದೆ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

Hero Lectro EHX20

ಬೆಲೆ: ರೂ. 1.3 ಲಕ್ಷ

ಈ ಎಲೆಕ್ಟ್ರಿಕ್ ಸೈಕಲ್ ಬೆಲೆ ಬಜೆಟ್ ಬೆಲೆಯ ಬೈಕ್ ಗಿಂತ ಹೆಚ್ಚು. Hero Lectro EHX20 ಪ್ರೀಮಿಯಂ ಗುಣಮಟ್ಟದ ಎಲೆಕ್ಟ್ರಿಕ್ ಸೈಕಲ್ ಆಗಿದೆ. ಈ ಎಲೆಕ್ಟ್ರಿಕ್ ಸೈಕಲ್ ಲೆಕ್ಟ್ರೋ ಸರಣಿಯಲ್ಲಿ ಮಾರಾಟವಾಗುವ ದುಬಾರಿ ಬೆಲೆಯ ಎಲೆಕ್ಟ್ರಿಕ್ ಸೈಕಲ್ ಆಗಿದೆ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ಈ ಎಲೆಕ್ಟ್ರಿಕ್ ಸೈಕಲ್ ಅಭಿವೃದ್ಧಿಗಾಗಿ Hero ಕಂಪನಿಯು ಜಪಾನ್ ನ Yamaha Smart Power ಜೊತೆಗೆ ಕೈಜೋಡಿಸಿರುವುದು ಗಮನಾರ್ಹ. EHX20 ನಾನ್ ಸ್ಲಿಪ್ಬ್ಯಾಟರಿ ಹಾಗೂ ಸೆಂಟರ್ ಮೌಂಟೆಡ್ ಎಲೆಕ್ಟ್ರಿಕ್ ಮೋಟರ್ ಅನ್ನು ಹೊಂದಿದೆ. Hero ಕಂಪನಿಯು ಯಮಹಾ ಜೊತೆಗಿನ ಸಹಭಾಗಿತ್ವದ ಮೂಲಕ ಈ ಫೀಚರ್ ಗಳನ್ನು ಪಡೆದಿದೆ ಎಂಬುದು ಗಮನಾರ್ಹ.

ಭಾರತದಲ್ಲಿ ಮಾರಾಟವಾಗುವ ಟಾಪ್ 5 ಎಲೆಕ್ಟ್ರಿಕ್ ಸೈಕಲ್‌ಗಳಿವು

ಈ ಎಲೆಕ್ಟ್ರಿಕ್ ಸೈಕಲ್‌ ಪೂರ್ತಿಯಾಗಿ ಚಾರ್ಜ್ ಆದ ನಂತರ 80 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಎಲೆಕ್ಟ್ರಿಕ್ ಸೈಕಲ್ ನಲ್ಲಿರುವ ಬ್ಯಾಟರಿಯನ್ನು 3 ರಿಂದ 5 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಮಾಡಬಹುದು. ಈ ಎಲೆಕ್ಟ್ರಿಕ್ ಸೈಕಲ್ ಡಿಜಿಟಲ್ ಸ್ಕ್ರೀನ್, ಹೈಡ್ರಾಲಿಕ್ ಡಿಸ್ಕ್ ಬ್ರೇಕ್ ಹಾಗೂ ಹೈಡ್ರಾಲಿಕ್ ಸಸ್ಪೆಂಷನ್ ನಂತಹ ಪ್ರೀಮಿಯಂ ಫೀಚರ್ ಗಳನ್ನು ಹೊಂದಿದೆ.

Most Read Articles

Kannada
English summary
Top 5 electric bicycles sold in india details
Story first published: Monday, September 27, 2021, 17:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X