ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಭಾರತದಲ್ಲಿ ವಾಹನ ಖರೀದಿಸುವ ಹೆಚ್ಚಿನ ಗ್ರಾಹಕರು ಮೊದಲು ನೋಡುವುದು ಆ ವಾಹನ ಎಷ್ಟು ಮೈಲೇಜ್ ನೀಡುತ್ತದೆ ಎಂದು. ಭಾರತದಲ್ಲಿ ಹೆಚ್ಚಿನ ಗ್ರಾಹಕರು ಮೈಲೇಜ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಇದರಿಂದ ತಿಳಿಯುತ್ತದೆ ಮೈಲೇಜ್ ಬಗ್ಗೆ ವಾಹನ ಖರೀದಿದಾರರೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಇಂಧನ ಬೆಲೆಗಳು ಬೇರೆ ಗಗನದೆತ್ತರಕ್ಕೆ ಸಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಾಹನ ಖರೀದಿಸುವ ಗ್ರಾಹಕರು ಹೆಚ್ಚು ಮೈಲೇಜ್ ನೀಡುವ ಕಾರಿನ ಕಡೆ ಹೆಚ್ಚು ಒಲವನ್ನು ಹೊಂದಿರುತ್ತಾರೆ. ಹೆಚ್ಚು ಮೈಲೇಜ್ ನೀಡುವ ವಾಹನ ಬಳಿಸಿದರೆ ಇಂಧನಕ್ಕೆ ಖರ್ಚು ಮಾಡುವ ಹಣ ಸ್ವಲ್ಪ ಪ್ರಮಾಣದಲ್ಲಿ ಉಳಿತಾಯ ಮಾಡಿಕೊಳ್ಳಬಹುದು. ಸ್ಕೂಟರ್ ಖರೀದಿದಾರರು ಕೂಡ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್ ಅನ್ನು ಆಯ್ಕೆ ಮಾಡಿಕೊಳ್ಳಬಹುದು. ಭಾರತದಲ್ಲಿ ಮಾರಾಟವಾಗುತ್ತಿರುವ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಟಿವಿಎಸ್ ಸ್ಕೂಟಿ ಜೆಸ್ಟ್

ಈ ಟಿವಿಎಸ್ ಸ್ಕೂಟಿ ಜೆಸ್ಟ್ ಸ್ಕೂಟರ್‌ನಲ್ಲಿ 109.7 ಸಿಸಿ ಏರ್ ಕೂಲ್ಡ್ ಎಂಜಿನ ಅನ್ನು ಹೊಂದಿದೆ. ಈ ಎಂಜಿನ್ 7.81 ಬಿ‌ಹೆಚ್‌ಪಿ ಪವರ್ ಹಾಗೂ 8.8 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಕೂಟರ್ 57 ಕಿ,ಮೀ ಮೈಲೇಜ್ ಅನ್ನು ನೀಡುತ್ತದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಈ ಸ್ಕೂಟರಿನಲ್ಲಿ 110 3ಡಿ ಲೋಗೋ, ಬೀಜ್ ಇಂಟೀರಿಯರ್ ಪ್ಯಾನಲ್, ಡ್ಯುಯಲ್ ಟೋನ್ ಸೀಟ್, ಎಲ್‌ಇಡಿ ಡಿ‌ಆರ್‌ಎಲ್ ಹಾಗೂ ಅಂಡರ್ ಸೀಟ್ ಸ್ಟೋರೇಜ್ ಲೈಟ್‌ನಂತಹ ಫೀಚರ್ ಗಳನ್ನು ನೀಡಲಾಗಿದೆ. ಈ ಸ್ಕೂಟರ್ ಏಪ್ರನ್ ಮೌಂಟೆಡ್ ಸ್ಟೋರೇಜ್ ಕಂಪಾರ್ಟ್‌ಮೆಂಟ್ ಹೊರತುಪಡಿಸಿ 19 ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಹಾಗೂ ಡ್ಯುಯಲ್ ಲಗೇಜ್ ಹುಕ್‌ಗಳನ್ನು ಸಹ ಹೊಂದಿದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಟಿವಿಎಸ್ ಜೂಪಿಟರ್ 125

ಟಿವಿಎಸ್ ಮೋಟಾರ್ ಕಂಪನಿಯು ಹೊಸ ಜೂಪಿಟರ್ 125 ಸ್ಕೂಟರ್‌ ಮಾದರಿಯಲ್ಲಿ ಹೊಸದಾಗಿ 124.8 ಸಿಸಿ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8.3 ಬಿಎಚ್‌ಪಿ ಮತ್ತು 10.5 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಕ್ಸೂಟರ್ 52 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಟಿವಿಎಸ್ ಜೂಪಿಟರ್ 125 ಇಂದು ಖರೀದಿಸಬಹುದಾದ ಅತ್ಯಂತ ಪ್ರಾಯೋಗಿಕ ಸ್ಕೂಟರ್‌ಗಳಲ್ಲಿ ಒಂದಾಗಿದೆ, ಎನ್‌ಟಾರ್ಕ್ 125 ಮಾದರಿಯಲ್ಲಿ ಕಂಪನಿಯು 3-ವಾಲ್ವ್ ಸೆಟಪ್ ಅನ್ನು ಬಳಸಲಿದ್ದಲ್ಲಿ ಜೂಪಿಟರ್ 125 ಮಾದರಿಯಲ್ಲಿ 2 ವಾಲ್ಟ್ ಸೆಟಪ್ ಜೋಡಿಸಿದ್ದು, ಜೊತೆಗೆ ಇಟಿಎಫ್‌ಐ ಮತ್ತು ಇಂಟೆಲಿ-ಗೋ ಆಟೋ ಸ್ಟಾರ್ಟ್/ಸ್ಟಾಪ್ ತಂತ್ರಜ್ಞಾನವನ್ನು ಪಡೆಯುತ್ತದೆ. ಇದರರ್ಥ ಸ್ಟಾರ್ಟರ್ ಮೋಟಾರ್ ಅನ್ನು ಐಎಸ್‌ಜಿಯಿಂದ ಬದಲಾಯಿಸಲಾಗಿದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಸುಜುಕಿ ಆಕ್ಸೆಸ್ 125

ಸುಜುಕಿ ಆಕ್ಸೆಸ್ 125 ಸ್ಕೂಟರ್‌ನಲ್ಲಿ 124 ಸಿಸಿ, ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8.6 ಬಿಹೆಚ್‌ಪಿ ಪವರ್ ಮತ್ತು 10 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಟಾರ್ಕ್ ಅಂಕಿ ಅಂಶದಲ್ಲಿ 0.2 ಎನ್ಎಂ ಟಾರ್ಕ್ ಕಡಿಮೆಯಾಗಿದೆ. ಈ ಸ್ಕೂಟರ್ 52 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಸುಜುಕಿ ಆಕ್ಸೆಸ್ 125 ಸ್ಕೂಟರ್‌ನ ಎಲ್ಲಾ ರೂಪಾಂತರಗಳು ಎಲ್‌ಇಡಿ ಹೆಡ್ ಲ್ಯಾಂಪ್ ಅನ್ನು ಹೊಂದಿದೆ. ಟಾಪ್ ಸ್ಪೆಕ್ ಬ್ಲೂಟೂತ್ ಕನೆಕ್ಟಿವಿಟಿ ಹೊಂದಿರುವ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದನ್ನು ಸುಜುಕಿ ರೈಡ್ ಕನೆಕ್ಟ್ ಅಪ್ಲಿಕೇಶನ್‌ನೊಂದಿಗೆ ಜೋಡಿಸಲಾಗಿದೆ. ಸುಜುಕಿ ಆಕ್ಸೆಸ್ 125 ಸ್ಕೂಟರ್ ಪರ್ಲ್ ಸುಜುಕಿ ಡೀಪ್ ಬ್ಲೂ, ಮೆಟಾಲಿಕ್ ಮ್ಯಾಟ್ ಪ್ಲಾಟಿನಂ ಸಿಲ್ವರ್, ಪರ್ಲ್ ಮಿರಾಜ್ ವೈಟ್, ಗ್ಲಾಸ್ ಸ್ಪಾರ್ಕಲ್ ಬ್ಲ್ಯಾಕ್ ಮತ್ತು ಮೆಟಾಲಿಕ್ ಮ್ಯಾಟ್ ಫೈಬ್ರೊಯಿನ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಹೋಂಡಾ ಆಕ್ಟಿವಾ 6ಜಿ

ಹೋಂಡಾ ಆಕ್ಟಿವಾ 6ಜಿ ತನ್ನ ವಿಭಾಗದಲ್ಲಿ ಅತ್ಯಂತ ಜನಪ್ರಿಯ ಸ್ಕೂಟರ್‌ಗಳಲ್ಲಿ ಒಂದಾಗಿದೆ. ಈ ಸ್ಕೂಟರಿನಲ್ಲಿ 109 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7.79 ಬಿಹೆಚ್‍ಪಿ ಪವರ್ ಮತ್ತು 8.79 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಕಂಪನಿಯ ಪಿಜಿಎಂ-ಫೈ ತಂತ್ರಜ್ಞಾನವನ್ನು ಸಹ ಒಳಗೊಂಡಿದೆ. ಇದರಿಂದಾಗಿ ಈ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರಿಗೆ ಉತ್ತಮ ಕಾರ್ಯಕ್ಷಮತೆ ಮತ್ತು 50 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

2020ರ ಹೋಂಡಾ ಆಕ್ಟಿವಾ 6ಜಿ ಡಿಲಕ್ಸ್ ರೂಪಾಂತರದಲ್ಲಿ ಎಸಿಜಿ ಸ್ಟಾರ್ಟರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ಇನ್ನು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಫ್ಯುಯಲ್ ಫಿಲ್ಲರ್ ಕ್ಯಾಪ್ ಅನ್ನು ಕೂಡ ಹೊಂದಿದೆ. ಇನ್ನು ಈ ಹೋಂಡಾ ಆಕ್ಟಿವಾ 6ಜಿ ಸ್ಕೂಟರ್ ನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೂರು ಹಂತದ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ. ಇನ್ನು ಅಂಡರ್-ಸೀಟ್ 18-ಲೀಟರ್ ಸಾಮರ್ಥ್ಯದ ಸ್ಟ್ರೋರೇಜ್ ಸ್ಪೇಸ್ ಅನ್ನು ಹೊಂದಿದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಹೀರೋ ಮೆಸ್ಟ್ರೋ ಎಡ್ಜ್

ಈ ಹೊಸ ಹೀರೋ ಮೆಸ್ಟ್ರೋ ಎಡ್ಜ್ 110 ಸ್ಕೂಟರಿನಲ್ಲಿ 110 ಸಿಸಿ ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 7,500 ಆರ್‌ಪಿಎಂನಲ್ಲಿ 8 ಬಿಹೆಚ್‌ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 8.75 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಈ ಎಂಜಿನ್ ನೊಂದಿಗೆ ಸಿವಿಟಿ ಯುನಿಟ್ ಅನ್ನು ಜೋಡಿಸಲಾಗಿದೆ. ಈ ಸ್ಕೂಟರ್ 50 ಕಿ.ಮೀ ಮೈಲೇಜ್ ನೀಡುತ್ತದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಈ ಹೀರೋ ಮೆಸ್ಟ್ರೋ ಎಡ್ಜ್ ಸ್ಕೂಟರಿನಲ್ಲಿ ಎಕ್ಸ್‌ಸೆನ್ಸ್ ತಂತ್ರಜ್ಞಾನ ಮತ್ತು ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಒಳಗೊಂಡಿರುವುದರಿಂದ ಹೆಚ್ಚಿನ ಮೈಲೇಜ್ ಅನ್ನು ಒದಗಿಸುತ್ತದೆ. ಈ ಹೊಸ ಹೀರೋ ಮೆಸ್ಟ್ರೋ ಎಡ್ಜ್ 110 ಸ್ಕೂಟರಿನಲ್ಲಿ ಸೈಡ್-ಸ್ಟ್ಯಾಂಡ್ ಇಂಡಿಕೇಟರ್, ಲೈಟ್ ಸ್ಟೋವೇಜ್ ಲೈಟ್ ಹೊಂದಿರುವ ಯುಎಸ್ಬಿ ಪೋರ್ಟ್, ಫ್ಯೂಯಲ್ ಫಿಲ್ಲರ್ ಕ್ಯಾಪ್ ಮತ್ತು ಕಾಂಬಿನೇಶನ್ ಲಾಕ್ ಅನ್ನು ಸಹ ಹೊಂದಿದೆ.

ಭಾರತದಲ್ಲಿ ಅತ್ಯುತ್ತಮ ಮೈಲೇಜ್ ನೀಡುವ ಸ್ಕೂಟರ್‌ಗಳಿವು

ಇನ್ನು ಈ ಮೆಸ್ಟ್ರೋ ಎಡ್ಜ್ ಸ್ಕೂಟರಿನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟೇಶನ್ ಕನ್ಸೋಲ್ ಜೊತೆಗೆ ಆನ್ ಹ್ಯಾಲೊಜೆನ್ ಹೆಡ್‌ಲ್ಯಾಂಪ್ ಮತ್ತು ಇಂಟಿಗ್ರೇಟೆಡ್ ಬ್ರೇಕಿಂಗ್ ಸಿಸ್ಟಂ ಅನ್ನು ಹೊಂದಿದೆ. ಜೊತೆಗೆ ಸರ್ವಿಸ್ ರಿಮೈಂಡರ್ ಫಂಕ್ಷನ್ ಅನ್ನು ಕೂಡ ಒಳಗೊಂಡಿದೆ. ಹೊಸ ಹೀರೋ ಮೆಸ್ಟ್ರೋ ಎಡ್ಜ್ 110 ಸ್ಕೂಟರಿನಲ್ಲಿ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಸ್ಪ್ರಿಂಗ್ ಲೋಡೆಡ್ ಹೈಡ್ರಾಲಿಕ್ ಡ್ಯಾಂಪರ್ ಅನ್ನು ಒಳಗೊಂಡಿದೆ. ಇನ್ನು ಈ ಹೊಸ ಸ್ಕೂಟರಿನಲ್ಲಿ 12 ಇಂಚಿನ ವ್ಹೀಲ್ ಅಪ್ ಫ್ರಂಟ್ ಮತ್ತು ಹಿಂಭಾಗದಲ್ಲಿ 10 ಇಂಚಿನ ವ್ಹೀಲ್ ಅನ್ನು ಅಳವಡಿಸಿದೆ.

Most Read Articles

Kannada
English summary
Top 5 scooters with best fuel economy in india details
Story first published: Monday, November 29, 2021, 15:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X