2021ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್'ಗಳಿವು
ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿವೆ. ಇದರ ಜೊತೆಗೆ ಹಲವು ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ತಯಾರಿ ನಡೆಸಿವೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳು ತಮ್ಮದೇ ಆದ ಪ್ರತ್ಯೇಕ ಮಾರುಕಟ್ಟೆಯನ್ನು ಹೊಂದಿದ್ದರೆ, ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಸಹ ತಮ್ಮ ಪ್ರಾಬಲ್ಯವನ್ನು ಹೊಂದಿವೆ. 2021ರಲ್ಲಿ ಹಲವು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ಬಿಡುಗಡೆಗೊಳಿಸಲು ಮುಂದಾಗಿವೆ. ಈ ವರ್ಷ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

1. ಓಲಾ ಎಲೆಕ್ಟ್ರಿಕ್ ಸ್ಕೂಟರ್
2020ರ ಮೇ ತಿಂಗಳಿನಲ್ಲಿ ಓಲಾ ಕಂಪನಿಯು ಡಚ್ ಇ-ಸ್ಕೂಟರ್ ತಯಾರಕ ಕಂಪನಿಯಾದ ಅಟರ್ಗೊವನ್ನು ಸ್ವಾಧೀನ ಪಡಿಸಿಕೊಂಡಿತು. ಈ ಮೂಲಕ ಓಲಾ ಕಂಪನಿಯು ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಪ್ರವೇಶಿಸುವುದಾಗಿ ಘೋಷಿಸಿತು. ಓಲಾ ಕಂಪನಿಯು ಅಟರ್ಗೊ ಸ್ಕೂಟರಿನ ಆವೃತ್ತಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ಸ್ಕೂಟರಿನಲ್ಲಿ 1.16 ಕಿ.ವ್ಯಾನ ಬ್ಯಾಟರಿ ಪ್ಯಾಕ್ ಅಳವಡಿಸಲಾಗುವುದು. ಈ ಸ್ಕೂಟರ್ ಪೂರ್ತಿಯಾಗಿ ಚಾರ್ಜ್ ಆದ ನಂತರ 80 ಕಿ.ಮೀಗಳವರೆಗೆ ಚಲಿಸುತ್ತದೆ.ಈ ಸ್ಕೂಟರಿನಲ್ಲಿರುವ ಎಲೆಕ್ಟ್ರಿಕ್ ಮೋಟರ್ 6 ಕಿ.ವ್ಯಾ ಪವರ್ ಹಾಗೂ 50 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

2. ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್
ಜಪಾನಿನ ಮೋಟಾರ್‌ಸೈಕಲ್ ಹಾಗೂ ಸ್ಕೂಟರ್ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್ ತನ್ನ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ನಡೆಸಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಬಿಡುಗಡೆಯಾದ ನಂತರ, ಈ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಎಥೆರ್ 450 ಎಕ್ಸ್ ಹಾಗೂ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್'ಗಳಿಗೆ ಪೈಪೋಟಿ ನೀಡಲಿದೆ.ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಅಳವಡಿಸುವ 4 - 6 ಕಿ.ವ್ಯಾನ ಬ್ಯಾಟರಿ ಪ್ಯಾಕ್ ಪೂರ್ತಿಯಾಗಿ ಚಾರ್ಜ್ ಆದ ನಂತರ 80 ಕಿ.ಮೀಗಳವರೆಗೆ ಚಲಿಸುತ್ತದೆ.

3. ಹೀರೋ ಎಲೆಕ್ಟ್ರಿಕ್ ಎಇ -29
ಹೀರೋ ಎಲೆಕ್ಟ್ರಿಕ್ ಕಂಪನಿಯು ತನ್ನ ಎಇ -29 ಸ್ಕೂಟರ್ ಅನ್ನು 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿತ್ತು. ಈ ಹೈಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ 1 ಕಿ.ವ್ಯಾ ಮೋಟಾರ್ ಹಾಗೂ 3.5 ಕಿ.ವ್ಯಾ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 55 ಕಿ.ಮೀಗಳಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

4. ಹೀರೋ ಎಮಾಸ್ಟ್ರೊ
ಹೀರೋ ಎಮಾಸ್ಟ್ರೊ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್‌ನ ಉತ್ಪನ್ನವಾಗಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಹೀರೋ ಮೆಸ್ಟ್ರೋ ಎಡ್ಜ್ ಸ್ಕೂಟರಿನ ಎಲೆಕ್ಟ್ರಿಕ್ ಆವೃತ್ತಿಯಾಗಿರಲಿದೆ. ಈ ಸ್ಕೂಟರ್ ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 80 ಕಿ.ಮೀಗಳವರೆಗೆ ಚಲಿಸುತ್ತದೆ.

5. ಒಕಿನಾವಾ ಕ್ರೂಸರ್
ಒಕಿನಾವಾ ಕಂಪನಿಯು 2020ರ ಆಟೋ ಎಕ್ಸ್‌ಪೋದಲ್ಲಿ ಕ್ರೂಸರ್ ಮ್ಯಾಕ್ಸಿ-ಸ್ಕೂಟರ್ ಅನ್ನು ಪರಿಚಯಿಸಿತ್ತು. ಈ ಸ್ಕೂಟರಿನಲ್ಲಿ ಅಳವಡಿಸಿರುವ 4 ಕಿ.ವ್ಯಾ ಡಿಟ್ಯಾಚೇಬಲ್ ಲಿಥಿಯಂ ಐಯಾನ್ ಬ್ಯಾಟರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 120 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಬ್ಯಾಟರಿಯು ಸುಮಾರು 2 ರಿಂದ 3 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಆಗುತ್ತದೆ.


Click it and Unblock the Notifications