ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಪ್ರೀಮಿಯಂ ಹಾಗೂ ಪರ್ಫಾಮೆನ್ಸ್ ಬೈಕ್ ತಯಾರಕ ಕಂಪನಿಯಾದ ಟ್ರಯಂಫ್ ತನ್ನ ಹೊಸ ಟೈಗರ್ ಸ್ಪೋರ್ಟ್ 660 ಬೈಕ್ ಅನ್ನು ಜಾಗತಿಕವಗಿ ಈ ವರ್ಷದ ಅಕ್ಟೋಬರ್‌ ತಿಂಗಳಿನಲ್ಲಿ ಅನಾವರಣಗೊಳಿಸಿತ್ತು. ಈ ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660(Triumph Tiger Sport 660) ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಕಂಪನಿಯ ಸಾಲಿನಲ್ಲಿ ಹೊಸ ಎಂಟ್ರಿ ಲೆವೆಲ್ ಟೈಗರ್ ಆಗಿದ್ದು, ಅವರ ಅತ್ಯಂತ ಕೈಗೆಟುಕುವ ಟೈಗರ್ ಆಗಿದೆ. ಟೈಗರ್ ಸ್ಪೋರ್ಟ್ 660 ಬ್ರ್ಯಾಂಡ್‌ನ ಇತ್ತೀಚಿನ ನೇಕೆಡ್ ಸ್ಟ್ರೀಟ್‌ಫೈಟರ್-ಟ್ರಿಡೆಂಟ್ 660 ನ ಅದೇ ಫ್ರೇಮ್ ಅನ್ನು ಆಧರಿಸಿದೆ. ಭಾರತವು ಕಂಪನಿಯ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾಗಿರುವುದರಿಂದ, ಈ ಹೊಸ ಅಡ್ವೆಂಚರ್ ಬೈಕ್ ಅನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಇದೀಗ ಟ್ರಯಂಫ್ ಇಂಡಿಯಾ ಕಂಪನಿಯು ಟೈಗರ್ ಸ್ಪೋರ್ಟ್ 660 ಬೈಕ್ ಖರೀದಿಗಾಗಿ ಬುಕ್ಕಿಂಗ್‌ಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ.

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಅಡ್ವೆಂಚರ್ ಬೈಕ್ ಅನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಈ ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕ್ ಆಫ್-ರೋಡ್ ಅಧಾರಿತ ಅಡ್ವೆಂಚರ್ ಸ್ಪೋರ್ಟ್ಸ್ ಟೂರಿಂಗ್ ಬೈಕ್ ಆಗಿದೆ,

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಬೈಕ್ ಟ್ರೈಡೆಂಟ್ 660 ಮಾದರಿಯನ್ನು ಆಧರಿಸಿದ್ದರೂ, ಇದು ಸ್ಪೋರ್ಟ್ಸ್ ಟೂರಿಂಗ್ ಬೈಕ್ ಆಗಿದೆ. ಇದರಲ್ಲಿ ಕೆಲವು ವ್ಯತ್ಯಾಸಗಳನ್ನು ಪಡೆಯುತ್ತದೆ, ಸ್ಪೋರ್ಟಿಯಾಗಿ ಕಾಣುವ ಅರ್ಧ-ಫೇರಿಂಗ್, ನೇರವಾದ ರೈಡಿಂಗ್ ಪೋಷಿಸನ್, ಹೆಚ್ಚು ಸಸ್ಪೆಂಕ್ಷನ್ ಟ್ರ್ಯಾವೆಲ್, ಎತ್ತರದ ಸೀಟ್ ಮತ್ತು ಉತ್ತಮ ಟ್ರ್ಯಾವೆಲ್ ಸಾಮರ್ಥ್ಯಕ್ಕಾಗಿ ಲಗೇಜ್ ಫ್ರೇಮ ಅನ್ನು ಕೂಡ ಒಳಗೊಂಡಿದೆ.

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕ್ ವಿನ್ಯಾಸವು ಖಂಡಿತವಾಗಿಯೂ ಆಕರ್ಷಕವಾಗಿದೆ, ಆದರೆ ಇದು ದೊಡ್ಡ ಟೈಗರ್ 900 ಬೈಕಿಗೆ ಹೋಲುವಂತಿಲ್ಲ, ಈ ಹೊಸ ಬೈಕಿನಲ್ಲಿ ಟ್ವಿನ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎತ್ತರ-ಹೊಂದಿಸಬಹುದಾದ ವಿಂಡ್‌ಶೀಲ್ಡ್ ಅನ್ನು ಹೊಂದಿದೆ.

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಈ ಥೀಮ್‌ಗೆ ಅನುಸಾರವಾಗಿ, ಫ್ಯೂಯಲ್ ಟ್ಯಾಂಕ್ ಸಾಮರ್ಥ್ಯವನ್ನು ಟ್ರೈಡೆಂಟ್ 660 ಬೈಕಿನ 14-ಲೀಟರ್ ಇಂಧನ ಟ್ಯಾಂಕ್‌ಗೆ ಹೋಲಿಸಿದರೆ ಹೊಸ ಬೈಕಿನಲ್ಲಿ 17 ಲೀಟರ್‌ಗಳಿಗೆ ಹೆಚ್ಚಿಸಲಾಗಿದೆ. ಹೊಸ ಟೈಗರ್ ಸ್ಪೋರ್ಟ್ 660 ಹೊಸ ಕಾಕ್‌ಪಿಟ್ ಅನ್ನು ಪಡೆಯುತ್ತದೆ, ಜೊತೆಗೆ ಹೊಸ ಇನ್ಸ್ ಟ್ರೂಮೆಂಟ್ ಕನ್ಸೋಲ್ ಜೊತೆಗೆ ವಿಭಿನ್ನ ಏರೋಗಾಮಿಕ್ಸ್ ಮತ್ತು ಹೆಚ್ಚು ನೇರವಾದ ರೈಡಿಂಗ್ ಫೋಷಿಸನ್ ಅನ್ನು ಹೊಂದಿದೆ,

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಫೀಚರ್ಸ್ ಗಳ ಪಟ್ಟಿಯಲ್ಲಿ, ಟೈಗರ್ ಸ್ಪೋರ್ಟ್ 660 ಬೈಕ್ ರೋಡ್ ಮತ್ತು ರೌನ್ ಎಂಬ ರೈಡಿಂಗ್ ಮೋಡ್ ಗಳನ್ನು ಪಡೆಯುತ್ತದೆ. ಈ ಬೈಕಿನಲ್ಲಿ ಬದಲಾಯಿಸಬಹುದಾದ ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಪಡೆಯುತ್ತದೆ. ಈ ಹೊಸ ಅಡ್ವೆಂಚರ್ ಸ್ಪೋರ್ಟ್ಸ್ ಟೂರಿಂಗ್ ಬೈಕ್ ಲುಸೆರ್ನ್ ಬ್ಲೂ ಮತ್ತು ಸೆಫರಿನ್ ಬ್ಲ್ಯಾಕ್, ಕೊರೊಸಿ ರೆಡ್ ಮತ್ತು ಗ್ರ್ಯಾಫೈಟ್, ಮತ್ತು ಮೂರನೆಯದು, ಗ್ರ್ಯಾಫೈಟ್ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಹೊಂದಿರಲಿದೆ.

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕನ್ಸೋಲ್ ಒಂದು ಟಿಎಫ್ಟಿ ಡಿಸ್ ಪ್ಲೇಯೊಂದಿಗೆ ಬರುತ್ತದೆ ಮತ್ತು ಆಕ್ಸೆಸರಿ-ಫಿಟ್ ಮೈ ಟ್ರಯಂಫ್ ಕನೆಕ್ಟಿವಿಟಿ ಸಿಸ್ಟಂಗೆ ಸಿದ್ಧವಾಗಿದೆ. ಈ ಬೈಕ್ 835 ಎಂಎಂ ಸೀಟ್ ಎತ್ತರವನ್ನು ಹೊಂದಿದೆ. ಇನ್ನು ಈ ಬೈಕ್ 206 ಕೆಜಿ ಕರ್ಬ್ ತೂಕವನ್ನು ಹೊಂದಿದೆ. ಇನ್ನು ಈ ಹೊಸ 22.2 ಕಿ,ಮೀ ಮೈಲೇಜ್ ನೀಡುತ್ತದೆ,

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಟ್ರಯಂಫ್ ಟೈಗರ್ ಸ್ಪೋರ್ಟ್ 660 ಆಫ್-ರೋಡ್ ಆಧಾರಿತ ಬೈಕ್ ಆಗಿರುವುದರಿಂದ ಸ್ಪೋರ್ಟ್ ಮೋನಿಕರ್ ಟಾರ್ಮ್ಯಾಕ್ ಅಡ್ವೆಂಚರ್ ಆಗಿದೆ. ಈ ಬೈಕಿನಲ್ಲಿ ಟ್ರೈಡೆಂಟ್ 660 ಮಾದರಿಯಂತೆ 17 ಇಂಚಿನ ವ್ಹೀಲ್ ಗಳು ಮತ್ತು ಮೈಕೆಲಿನ್ ರೋಡ್ ಟೈರ್‌ಗಳನ್ನು ಹೊಂದಿವೆ. ಇದು ಉತ್ತಮ ಹಿಡಿತವನ್ನು ಹೊಂದಿರುತ್ತದೆ.

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಟೈಗರ್ ಸ್ಪೋರ್ಟ್ 660 ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಎರಡೂ ಕಡೆಗಳಲ್ಲಿ 150 ಎಂಎಂ ಟ್ರಾವೆಲ್ ನೊಂದಿಗೆ ಸಸ್ಪೆಂಕ್ಷನ್ ಟ್ರಾವೆಲ್ ಹೆಚ್ಚಿಸಲಾಗಿದೆ. ಇದರ ಮುಂಭಾಗದಲ್ಲಿ ಶೋವಾ 41 ಎಂಎಂ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ರಿಮೋಟ್ ಪ್ರಿಲೋಡ್ ಹೊಂದಾಣಿಕೆಯನ್ನು ಪಡೆಯುತ್ತದೆ. ಇನ್ನು ಪ್ರಮುಖವಾಗಿ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರಲ್ಲಿ ನಿಸ್ಸಿನ್ ಬ್ರೇಕ್‌ಗಳನ್ನು ಟ್ರೈಡೆಂಟ್ 660 ನೊಂದಿಗೆ ಹಂಚಿಕೊಳ್ಳಲಾಗಿದೆ, ಎರಡು-ಪಿಸ್ಟನ್ ಸ್ಲೈಡಿಂಗ್ ಕ್ಯಾಲಿಪರ್‌ಗಳು 310 ಎಂಎಂ ಟ್ವಿನ್ ಫ್ರಂಟ್ ಡಿಸ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಸಿಂಗಲ್-ಪಿಸ್ಟನ್ ಕ್ಯಾಲಿಪರ್ 255 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ,

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕಿನಲ್ಲಿ 660 ಸಿಸಿ ಇನ್-ಲೈನ್ ಮೂರು ಸಿಲಿಂಡರ್ ಎಂಜಿನ್ ಅನ್ನು ಟ್ರೈಡೆಂಟ್ 660 ನೊಂದಿಗೆ ಹಂಚಿಕೊಳ್ಳಲಾಗಿದೆ. ಈ ಎಂಜಿನ್ 79 ಬಿಹೆಚ್‍ಪಿ ಪವರ್ ಮತ್ತು 64 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನಿರೀಕ್ಷಿಸುತ್ತೇವೆ.

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಟ್ರಯಂಫ್ ಮೋಟರ್‌ಸೈಕಲ್ ತನ್ನ ಹೊಸ ಸ್ಟ್ರೀಟ್ ಸ್ಕ್ರ್ಯಾಂಬ್ಲರ್ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಟ್ರಯಂಫ್ ಸ್ಟ್ರೀಟ್ ಸ್ಕ್ರ್ಯಾಂಬ್ಲರ್ ಬೈಕಿನ ಬೆಲೆಯು ಎಕ್ಸ್ ಶೊರೂಂ ಪ್ರಕಾರ ರೂ.9,35,000 ಆಗಿದೆ. ಹೊಸ ಟ್ರಯಂಫ್ ಸ್ಟ್ರೀಟ್ ಸ್ಕ್ರ್ಯಾಂಬ್ಲರ್ ಬೈಕ್ ಜೆಟ್ ಬ್ಲಾಕ್, ಅರ್ಬನ್ ಗ್ರೇ ಮತ್ತು ಡ್ಯುಯಲ್ ಟೋನ್ ಮ್ಯಾಟ್ ಖಾಕಿ ಮತ್ತು ಮ್ಯಾಟ್ ಐರನ್ ಸ್ಟೋನ್ ಎಂಬ ಮೂರು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಹೊಸ ಟ್ರಯಂಫ್ ಸ್ಟ್ರೀಟ್ ಸ್ಕ್ರ್ಯಾಂಬ್ಲರ್ ಬೈಕ್ 900 ಸಿಸಿ ಪ್ಯಾರಲಲ್-ಟ್ವಿನ್ ಎಂಜಿನ್ ಅನ್ನು ಹೊಂದಿದೆ.

ಹೊಸ Triumph Tiger Sport 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಆದರೆ ಕಂಪನಿಯು ಆಧಿಕೃತಿವಾಗಿ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಇನ್ನು ಬುಕ್ಕಿಂಗ್ ಪ್ರಾರಂಭಿಸಿರುವುದರಿಂದ ಈ ಬೈಕ್ ಅನ್ನು ಖರೀದಿಸಲು ಬಯಸುವ ಗ್ರಾಹಕರು ಬುಕ್ಕಿಂಗ್ ಮಾಡಿಕೊಳ್ಳಬಹುದು.

More from DriveSpark

Article Published On: Friday, December 3, 2021, 19:34 [IST]
English summary
Triumph motorcycles start accepting new tiger sport 660 bookings in india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+