ಕೋವಿಡ್ ವಿರುದ್ದದ ಹೋರಾಟಕ್ಕೆ ರೂ.40 ಕೋಟಿ ದೇಣಿಗೆ ನೀಡಿದ ಟಿವಿಎಸ್ ಗ್ರೂಪ್
ಹೆಚ್ಚುತ್ತಿರುವ ಕೋವಿಡ್ 2ನೇ ಅಲೆಯನ್ನು ತಗ್ಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರವು ಹರಸಾಹಸ ಪಡುತ್ತಿದ್ದು, ಸರ್ಕಾರದ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕೂಡಾ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿವೆ.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳದಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಸರ್ಕಾರಗಳ ಪ್ರಯತ್ನಕ್ಕೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಸಹಕಾರ ನೀಡುತ್ತಿವೆ.

ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಯು ಸಾಧ್ಯವಿರುವ ಕಡೆಗಳಲ್ಲಿ ಸರ್ಕಾರದ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಯಾಗಿರುವ ಟಿವಿಎಸ್ ಮೋಟಾರ್ ಮಾತೃಸಂಸ್ಥೆಯಾದ ಟಿವಿಎಸ್ ಗ್ರೂಪ್ ಕಂಪನಿಯು ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಹಣಾಕಾಸು ನೆರವು ನೀಡಿದೆ.

2020ರ ಏಪ್ರಿಲ್ ಅವಧಿಯಲ್ಲಿನ ಕೋವಿಡ್ ಹೆಚ್ಚಳ ಸಂದರ್ಭದಲ್ಲೂ ಬರೋಬ್ಬರಿ ರೂ.25 ಕೋಟಿ ದೇಣಿಗೆ ನೀಡಿದ್ದ ಟಿವಿಎಸ್ ಗ್ರೂಪ್ ಕಂಪನಿಯು ಇದೀಗ 2ನೇ ಅಲೆಯ ಕೋವಿಡ್ ನಿಯಂತ್ರಣಕ್ಕಾಗಿ ರೂ.40 ಕೋಟಿ ದೇಣಿಗೆ ಘೋಷಣೆ ಮಾಡಿದ್ದು, ದೇಣಿಗೆ ಹಣವನ್ನು ಪಿಎಂ ಕೇರ್ಸ್ ಫಂಡ್(ಪ್ರಧಾನ ಮಂತ್ರಿ ಪರಿಹಾರ ನಿಧಿ)ಗೆ ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಟಿವಿಎಸ್ ಕಂಪನಿಯು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಆಕ್ಸಿಜನ್ ಉತ್ಪಾದನೆಗೆ ಸಾಕಷ್ಟು ಸಹಕಾರ ನೀಡುತ್ತಿದೆ.

ಕೋವಿಡ್ 2ನೇ ಅಲೆಯಿಂದಾಗಿ ಇಡೀ ದೇಶವೇ ಮತ್ತೊಮ್ಮೆ ಸಂಕಷ್ಟ ಪರಿಸ್ಥಿತಿಯಲ್ಲಿ ಸಿಲುಕಿದ್ದು, ಆರ್ಥಿಕ ಚಟುವಟಿಕೆಯಿಲ್ಲದೆ ಭಾರೀ ನಷ್ಟ ಅನುಭವಿಸುತ್ತಿದ್ದರೂ ಸಾಮಾಜಿಕ ಜವಾಬ್ದಾರಿ ಅಡಿ ಹಲವು ವಾಹನ ಕಂಪನಿಗಳು ವಿವಿಧ ರೀತಿಯ ಸಹಕಾರ ಘೋಷಿಸಿವೆ.
MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಪರಿಸ್ಥಿತಿಗೆ ಅನುಗುಣವಾಗಿ ಹಲವು ಕಾರು ಕಂಪನಿಗಳು ತಮ್ಮ ವಾಹನ ಉತ್ಪಾದನಾ ಘಟಕದಲ್ಲಿ ತಾತ್ಕಾಲಿಕವಾಗಿ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ಅವಕಾಶ ನೀಡಿದ್ದು, ಇನ್ನು ಕೆಲವು ವಾಹನ ಕಂಪನಿಗಳು ಹಣಕಾಸು ನೆರವು ಘೋಷಣೆ ಮಾಡಿವೆ.


Click it and Unblock the Notifications