Just In
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 16 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- News
ಸಮೀಕ್ಷೆ: ಅಸ್ಸಾಂನಲ್ಲಿ ಕಾಂಗ್ರೆಸ್ ಮಣಿಸಿ ಬಿಜೆಪಿ ಅಧಿಕಾರಕ್ಕೆ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದುಬಾರಿಯಾಯ್ತು ಟಿವಿಎಸ್ ಅಪಾಚೆ ಆರ್‌ಆರ್ 310 ಬೈಕ್
ಟಿವಿಎಸ್ ಮೋಟಾರ್ ಕಂಪನಿಯು ತನ್ನ ಜನಪ್ರಿಯ ಬಿಎಸ್-6 ಅಪಾಚೆ ಆರ್‌ಆರ್ 310 ಬೈಕಿನ ಬೆಲೆಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಹೆಚ್ಚಿಸಿದೆ. ಟಿವಿಎಸ್ ಕಂಪನಿಯು ಈ ಅಪಾಚೆ ಆರ್‌ಆರ್ 310 ಬೈಕಿನ ಬೆಲೆಯನ್ನು ರೂ.2,000 ಗಳವರೆಗೆ ಹೆಚ್ಚಿಸಲಾಗಿದೆ.

ಟಿವಿಎಸ್ ಕಂಪನಿಯು 2020ರ ಜನವರಿಯಲ್ಲಿ ಅಪಾಚೆ ಆರ್‌ಆರ್ 310 ಬೈಕನ್ನು ರೂ.2.4 ಲಕ್ಷಕ್ಕೆ ಬಿಡುಗಡೆಗೊಳಿಸಿತ್ತು. 2020ರ ಜುಲೈ ತಿಂಗಳಲ್ಲಿ ಈ ಟಿವಿಎಸ್ ಆರ್‌ಆರ್ 310 ಬೈಕಿನ ಬೆಲೆಯನ್ನು ಹೆಚ್ಚಿಸಲಾಗಿತ್ತು. ಇನ್ನು ಹೊಸ ಬೆಲೆ ಏರಿಕೆಯ ಬಳಿಕ ಟಿವಿಎಸ್ ಅಪಾಚೆ ಆರ್‌ಆರ್ 310 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.2.5 ಲಕ್ಷಗಳಾಗಿದೆ. ಈ ಬೈಕಿನ ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಟಿವಿಎಸ್ ಅಪಾಚೆ ಆರ್‌ಆರ್ 310 ಬೈಕಿನಲ್ಲಿ ಟಿವಿಎಸ್ ಸ್ಮಾರ್ಟ್ ತಂತ್ರಜ್ಞಾನ, ಥ್ರೊಟಲ್-ಬೈ-ವೈರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಫೀಚರುಗಳನ್ನು ಹೊಂದಿದೆ. ಈ ಟಿವಿಎಸ್ ಅಪಾಚೆ ಆರ್‌ಆರ್ 310 ಬೈಕಿನಲ್ಲಿ 5-ಇಂಚಿನ ಟಿಎಫ್‌ಟಿ ಕಲರ್ ಇನ್ಸ್ಟ್ರುಮೆಂಟ್ ಕನ್ಸೋಲ್ ಅನ್ನು ಕೂಡ ಒಳಗೊಂಡಿದೆ. ಈ ಬೈಕಿನಲ್ಲಿ ಮೈಕೆಲಿನ್ ರೋಡ್5 ಟಯರುಗಳನ್ನು ಹೊಂದಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಈ ಅಪಾಚೆ ಆರ್‌ಆರ್ 310 ಬೈಕಿನಲ್ಲಿ 312 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 33.5 ಬಿಹೆಚ್‍ಪಿ ಪವರ್ ಮತ್ತು 27.3 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಈ ಬೈಕಿನಲ್ಲಿ ರೈನ್, ಅರ್ಬನ್, ಸ್ಪೋರ್ಟ್ ಮತ್ತು ಟ್ರ್ಯಾಕ್ ಎಂಬ ನಾಲ್ಕು ರೈಡಿಂಗ್ ಮೋಡ್ ಗಳನ್ನು ಒಳಗೊಂಡಿಡೆ. ಈ ಬೈಕ್ 2.93 ಸೆಕೆಂಡುಗಳಲ್ಲಿ 60 ಕಿ.ಮೀ ವೇಗವನ್ನು ಪಡೆದುಕೊಳುತ್ತದೆ. ಇನ್ನು 0 ದಿಂದ 100 ಕಿ.ಮೀ ವೇಗವನ್ನು ಪಡೆಯಲು ಈ ಬೈಕ್ 7.17 ಸೆಕೆಂಡುಗಳನ್ನು ತೆಗೆದುಕೊಳ್ಳುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಬಿಎಸ್-6 ಅಪಾಚೆ ಆರ್‌ಆರ್ 310 ಬೈಕಿನ ಪೀಚರುಗಳನ್ನು ಇದರ ಹಿಂದಿನ ಮಾದರಿಗೆ ಹೋಲಿಸಿದರೆ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಈ ಬೈಕಿನಲ್ಲಿ ಆರ್‌ಟಿ-ಸ್ಲಿಪ್ಪರ್ ಕ್ಲಚ್, ಬೈ-ಎಲ್ಇಡಿ ಟ್ವಿನ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆರ್‌ಟಿ-ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಹೊಂದಿದೆ.

ಈ ಅಪಾಚೆ ಆರ್‌ಆರ್ 310 ಬೈಕಿನಲ್ಲಿ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಯುಎಸ್ಡಿ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಅಳವಡಿಸಿದೆ. ಇನ್ನು ಈ ಬೈಕಿನ ಮುಂಭಾಗದ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬಿಎಸ್-6 ಟಿವಿಎಸ್ ಅಪಾಚೆ ಆರ್‌ಆರ್ 310 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಆರ್‍ಸಿ 390, ಯಮಹಾ ಆರ್3 ಮತ್ತು ಕವಾಸಕಿ ನಿಂಜಾ 400 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

ಬಿಎಸ್-6 ಟಿವಿಎಸ್ ಅಪಾಚೆ ಆರ್‌ಆರ್ 310 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಬೆಲೆ ಹಚ್ಚಳದಿಂದ ದುಬಾರಿಯಾಗಿದೆ. ಇನ್ನು ಈ ಬಿಎಸ್-6 ಟಿವಿಎಸ್ ಅಪಾಚೆ ಆರ್‌ಆರ್ 310 ಬೈಕಿನ ಬೆಲೆಯನ್ನು ಹೆಚ್ಚಿಸಿರುವುದು ಮಾರಾಟದ ಮೇಲೆ ಪರಿಣಾಮವನ್ನು ಬೀರುತ್ತಾ ಎಂಬುದು ಕಾದು ನೋಡಬೇಕು.