ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

ಇಂಧನಗಳ ಬೆಲೆ ಏರಿಕೆಯಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತಮ ಬೇಡಿಕೆ ಹರಿದುಬರುತ್ತಿದ್ದು, ಟಿವಿಎಸ್ ಮೋಟಾರ್ ಕಂಪನಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಯಾದ ಐಕ್ಯೂಬ್ ಮಾದರಿಯು ಸಹ ಭಾರೀ ಉತ್ತಮ ಬೇಡಿಕೆ ಪಡೆದುಕೊಂಡಿದೆ.

ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

2020 ಜನವರಿಯಲ್ಲಿ ಬಿಡುಗಡೆಗೊಂಡಿದ್ದ ಟಿವಿಎಸ್ ಐಕ್ಯೂಬ್ ಮಾದರಿಯು ಆರಂಭದಲ್ಲಿ ಬೆಂಗಳೂರಿನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿತ್ತು. ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಹೊಸ ಇವಿ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಲಾಗಿದ್ದು, ಹೊಸ ಸ್ಕೂಟರ್ ಮಾದರಿಯು ಪ್ರತಿಸ್ಪರ್ಧಿ ಮಾದರಿಗಳ ಅಬ್ಬರದ ನಡುವೆ 1 ಸಾವಿರ ಯುನಿಟ್ ವಿತರಣೆಗೊಂಡಿದೆ.

ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

ಬೇಡಿಕೆಯಯ ಆಧಾರದ ಮೇಲೆ ಹೊಸ ಇವಿ ಸ್ಕೂಟರ್ ಮಾರಾಟವನ್ನು ವಿಸ್ತರಿಸಲಿರುವ ಟಿವಿಎಸ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ಸ್ಕೂಟರ್ ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೆಚ್ಚಿನಮಟ್ಟದ ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕೆ ಎದುರುನೋಡುತ್ತಿದೆ.

ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದಂತೆ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಸಹ ಹೆಚ್ಚಿನ ಮಟ್ಟದ ಸ್ಥಾಪನೆಗೊಳ್ಳುತ್ತಿದ್ದು, ಆಟೋ ಉತ್ಪಾದನಾ ಕಂಪನಿಗಳು ಮೂಲಸೌಕರ್ಯ ಹೆಚ್ಚಿದಂತೆ ತಮ್ಮ ಮಾರಾಟ ವ್ಯಾಪ್ತಿಯನ್ನು ಕೂಡಾ ಹೆಚ್ಚಿಸುತ್ತಿವೆ.

ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

ಇನ್ನು ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಎಲೆಕ್ಟ್ರಿಕ್ ಸ್ಕೂಟರ್‌ಗಿಂತಲೂ ಆಕರ್ಷಕ ವಿನ್ಯಾಸ ಮತ್ತು ತಾಂತ್ರಿಕ ಸೌಲಭ್ಯಗಳನ್ನು ಹೊತ್ತುಬಂದಿದ್ದು, ಹೊಸ ಸ್ಕೂಟರ್‌ನಲ್ಲಿ 4.4kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಲಾಗಿದೆ. ಇದು ಪ್ರತಿ ಗಂಟೆಗೆ ಗರಿಷ್ಠ 78 ಕಿಮೀ ಟಾಪ್ ಸ್ಪೀಡ್ ಹೊಂದಿದ್ದು, ಎಕಾನಮಿ ಮತ್ತು ಪವರ್ ಮೊಡ್ ಮೂಲಕ ಅತ್ಯುತ್ತಮ ರೈಡಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

ಎಕಾನಮಿ ಮೋಡ್‌ನಲ್ಲಿ ಐಕ್ಯೂಬ್ ಸ್ಕೂಟರ್ ಪ್ರತಿ ಚಾರ್ಜ್‌ಗೆ ಗರಿಷ್ಠ 75 ಕಿಮೀ ಮೈಲೇಜ್ ಮತ್ತು ಪವರ್ ಮೋಡ್‌ ರೈಡಿಂಗ್‌ನಲ್ಲಿ ಗರಿಷ್ಠ 70 ಕಿಮೀ ಮೈಲೇಜ್ ಹಿಂದಿರುಗಿಸಲಿದ್ದು, ಹೊಸ ಸ್ಕೂಟರ್ ಬೆಲೆಯು ಬೆಂಗಳೂರಿನಲ್ಲಿ ಆನ್‌-ರೋಡ್ ಪ್ರಕಾರ ರೂ.1.15 ಲಕ್ಷ ಬೆಲೆ ಹೊಂದಿದ್ದರೆ ದೆಹಲಿಯಲ್ಲಿ ವಿವಿಧ ಸಬ್ಸಡಿ ಯೋಜನೆಗಳಿಂದಾಗಿ ಹೊಸ ಸ್ಕೂಟರ್ ರೂ.1.08 ಲಕ್ಷ ಖರೀದಿಗೆ ಲಭ್ಯವಾಗಿದೆ.

ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

ವಿಶೇಷ ಅಂದ್ರೆ, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ಹೋಮ್ ಚಾರ್ಜರ್ ಜೊತೆಗೆ ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ಸೇವೆಯನ್ನು ನೀಡಲಾಗುತ್ತಿದ್ದು, ಹೊಸ ಸ್ಕೂಟರ್‌ನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಹಲವಾರು ಫೀಚರ್ಸ್‌ಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

ಐಕ್ಯೂಬ್ ಸ್ಕೂಟರ್‌ನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಟೈಲ್‌ಲೈಟ್ಸ್, ಪ್ರತಿಫಲಿಸುವ ಲೊಗೋ, ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಸೌಲಭ್ಯವು ಉತ್ತಮವಾಗಿದ್ದು, ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

ಸುರಕ್ಷತೆಗಾಗಿ ಹೊಸ ಸ್ಕೂಟರ್‌ನಲ್ಲಿ ಮುಂಭಾಗದ ಚಕ್ರದಲ್ಲಿ ಡಿಸ್ಕ್ ಬ್ರೇಕ್, ರಿಮೋಟ್ ಚಾರ್ಜಿಂಗ್ ಸ್ಟೆಟಸ್, ಜಿಯೋ ಫೆನ್ಸ್, ಲಾಸ್ಟ್ ಪಾರ್ಕಿಂಗ್ ಲೊಕೆಷನ್, ಇನ್‌ಕಮಿಂಗ್ ಕಾಲ್ಸ್/ಮೆಜೆಸ್ ಅಲರ್ಟ್, ಕ್ಯೂ-ಪಾರ್ಕ್ ಅಸಿಸ್ಟ್ ಸೌಲಭ್ಯಗಳನ್ನು ಹೊಂದಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಒಂದು ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಟಿವಿಎಸ್ ಐಕ್ಯೂಬ್ ಇವಿ ಸ್ಕೂಟರ್

ಈ ಮೂಲಕ ಹೊಸ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಎಥರ್ 450ಎಕ್ಸ್ , ಬಜಾಜ್ ಚೇತಕ್ ಎಲೆಕ್ಟ್ರಿಕ್ ಮತ್ತು ಒಕಿನಾವ ಸ್ಕೂಟರ್‌ಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ದೆಹಲಿ ನಂತರ ಮುಂಬರುವ ದಿನಗಳಲ್ಲಿ ವಿವಿಧ ನಗರಗಳಲ್ಲೂ ಹೊಸ ಸ್ಕೂಟರ್ ಮಾರಾಟಗೊಳ್ಳಲಿದೆ.

More from DriveSpark

Article Published On: Thursday, April 22, 2021, 10:40 [IST]
English summary
TVS iQube Electric Scooter Sales Cross 1,000 Units. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+