ಫೆಬ್ರವರಿ ತಿಂಗಳ ಮಾರಾಟದಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರನ್ನು ಹಿಂದಿಕ್ಕಿದ ಟಿವಿಎಸ್ ಐಕ್ಯೂಬ್
ಭಾರತೀಯ ಮಾರುಕಟ್ಟೆಯಲ್ಲಿ ದಿನಕಳೆದಂತೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ದ್ವಿಗುಣವಾಗುತ್ತಿದೆ. ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದೆ. ಇದರಲ್ಲಿ ನಡುವೆ ಭಾರತದಲ್ಲಿ ಒಂದು ಡಜನ್‌ಗೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ತಮ್ಮ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುತ್ತಿದೆ.

ಆದರೆ ಕೆಲವರು ಸ್ಟಾರ್ಟ್‌ಅಪ್‌ಗಳ ಕಂಪನಿಗಳ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಾರೆ. ಆದರೆ ಅಂತವರಿಗೆ ಜನಪ್ರಿಯ ವಾಹನ ಕಂಪನಿಗಳ ಎಲೆಕ್ಟ್ರಿಕ್ ವಾಹನಗಳನ್ನು ಆಯ್ಕೆ ಮಾಡಬಹುದು. ಇನ್ನು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗದಲ್ಲಿ ಜನಪ್ರಿಯ ಕಂಪನಿಗಳ ಬಜಾಜ್ ಕಂಪನಿಯ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಟಿವಿಎಸ್ ಕಂಪನಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಆಯ್ಕೆ ಮಾಡಬಹುದು.

2021ರ ಫೆಬ್ರವರಿ ತಿಂಗಳಿನಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 150 ಯುನಿಟ್‌ಗಳು ಮಾರಾಟವಾಗಿವೆ. ಆದರೆ ಟಿವಿಎಸ್ ಕಂಪನಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ 203 ಯುನಿಟ್‌ಗಳು ಮಾರಾಟವಾಗಿವೆ. ಈ ಮೂಲಕ ಕೆಳೆದ ತಿಂಗಳ ಮಾರಾಟದಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರನ್ನು ಟಿವಿಎಸ್ ಐಕ್ಯೂಬ್ ಹಿಂದಿಕ್ಕಿದೆ.
MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

2020ರ ಫೆಬ್ರವರಿ ತಿಂಗಳಿನಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಮಾದರಿಯ 150 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.50 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಇನ್ನು ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಟಿವಿಎಸ್ ಐಕ್ಯೂಬ್ ಮಾದರಿಯ 38 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಬರೊಬ್ಬರಿ ಶೇ.434.21 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಕಳೆದ ಎರಡು ತಿಂಗಳಿನಿಂದ ಸತತವಾಗಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರನ್ನು ಮಾರಾಟದಲ್ಲಿ ಟಿವಿಎಸ್ ಐಕ್ಯೂಬ್ ಹಿಂದಿಕ್ಕಿದೆ. ಇದು ಚೇತಕ್‌ನ ಬೇಡಿಕೆ ಕುಸಿತವಾಗಿದೆ ಎಂದಲ್ಲ. ಬದಲಾಗಿ ಬಜಾಜ್ ಸರಬರಾಜು ಭಾಗದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣದಿಂದಾಗಿ ಆಗಿದೆ.

ಚೇತಕ್ ಸ್ಕೂಟರ್ ತಯಾರಿಸಲು ವಿದೇಶದಿಂದ ಹಲವಾರು ಘಟಕಗಳನ್ನು ಬಳಸಿಕೊಳ್ಳುತ್ತದೆ ಮತ್ತು ಅವುಗಳ ಕೊರತೆಯಿಂದ ಉತ್ಪಾದನಾ ಅಡಚಣೆಯಾಗಿದೆ. ಆದರೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬೇಡಿಕೆ ಕಡಿಮೆಯಾಗಿಲ್ಲ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಬಜಾಜ್ ಕಂಪನಿಯು ಕಳೆದ ವರ್ಷದ ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗದಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬ್ರ್ಯಾಂಡ್‌ನ ಮೊದಲ ಮಾದರಿಯಾಗಿದೆ.

ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಕೂಡ ಬಜಾಜ್ ಚೇತಕ್‌ನಂತೆಯೇ ಬ್ರ್ಯಾಂಡ್‌ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಈ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಮತ್ತು ಎಥರ್ 450ಎಕ್ಸ್ ಮಾದರಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದೆ.ಇನ್ನು ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ.

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ. ಇದು ಇಕೋ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಹೊಂದಿದೆ.

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್‍ನಂತೆ ಕಾಣುತ್ತದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ. ಒಟ್ಟಾರೆ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.


Click it and Unblock the Notifications