ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಟಿವಿಎಸ್ ಮೋಟಾರ್ ತನ್ನ ಅಪಾಚೆ ಆರ್‌ಟಿಆರ್ 200 4ವಿ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕ್ ಸಿಂಗಲ್ ಚಾನೆಲ್ ಎಬಿಎಸ್ ಮತ್ತು ಡ್ಯುಯಲ್-ಚಾನೆಲ್ ಎಬಿಎಸ್ ಎಂಬ ರೂಪಾಂತರಗಳಲ್ಲಿ ಲಭ್ಯವಿರಲಿದೆ.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕಿನ ಸಿಂಗಲ್ ಚಾನೆಲ್ ಎಬಿಎಸ್ ರೂಪಾಂತರದ ಬೆಲೆಯು ರೂ.1,33,840 ಗಳಾದರೆ, ಡ್ಯುಯಲ್-ಚಾನೆಲ್ ಎಬಿಎಸ್ ರೂಪಾಂತರದ ಬೆಲೆಯು ರೂ.1,38,890 ಗಳಾಗಿದೆ. ಈ ಎಲ್ಲಾ ಬೆಲೆಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರವಾಗಿದೆ. ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕ್ ಗ್ಲೋಸ್ ಬ್ಲಾಕ್, ಪರ್ಲ್ ವೈಟ್ ಮತ್ತು ಮ್ಯಾಟ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ. ಬೆಲೆಗಳು ಹೆಚ್ಚು ಬದಲಾಗಿಲ್ಲ ಆದರೆ ತಯಾರಕರು ಡಿಆರ್‌ಎಲ್‌ (ಡೇಟೈಮ್ ರನ್ನಿಂಗ್ ಲೈಟ್) ನೊಂದಿಗೆ ಹೊಸ ಹೆಡ್‌ಲ್ಯಾಂಪ್ ಅನ್ನು ಸೇರಿಸಿದ್ದಾರೆ.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕ್ ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಅಪಾಚೆ ಆರ್‌ಟಿಆರ್ 160 4ವಿ ಮಾದರಿಗೆ ಹೋಲುತ್ತದೆ. ಈ ಬೈಕ್ ಒಟ್ಟಾರೆ ಸ್ಟೈಲಿಂಗ್ ಮತ್ತು ಎಂಜಿನ್ ವಿಶೇಷಣಗಳನ್ನು ಉಳಿಸಿಕೊಂಡಿದೆ. ಈ ಹೊಸ ಬೈಕಿನಲ್ಲಿ ಲೋ ಮತ್ತು ಹೈ ಬೀಮ್ ಗಳೊಂದಿಗೆ ಏಕಕಾಲದಲ್ಲಿ ಕಾರ್ಯನಿರ್ವಹಿಸುವ ಫ್ರಂಟ್ ಪೊಸಿಷನ್ ಲ್ಯಾಂಪ್ (ಎಫ್‌ಪಿಎಲ್) ಗೆ ತನ್ನ ನಿಲುವನ್ನು ಬದಲಾಯಿಸಿದೆ.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಈ ನೇಕೆಡ್ ಸ್ಟ್ರೀಟ್‌ಫೈಟರ್ ಈಗಾಗಲೇ ವೈಶಿಷ್ಟ್ಯಗಳೊಂದಿಗೆ ಪ್ಯಾಕ್ ಮಾಡಲ್ಪಟ್ಟಿದೆ. ಈ ಬೈಕ್ ಸ್ಪೋರ್ಟ್, ಅರ್ಬನ್ ಮತ್ತು ರೈನ್ ಮೂರು ರೈಡ್ ಮೋಡ್‌ಗಳನ್ನು ಹೊಂದಿದೆ. ಇನ್ನು ಹೊಂದಾಣಿಕೆ ಮಾಡಬಹುದಾದ ಸಸ್ಪೆಂಕ್ಷನ್ ಸವಾರರಿಗೆ ಹೆಚ್ಚುವರಿ ಹತೋಟಿ ನೀಡುತ್ತದೆ.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಶೋವಾ ಸಸ್ಪೆಂಕ್ಷನ್ ಮತ್ತು ಇದು ಪ್ರಿ ಲೋಡ್ ಮಾಡಲಾದ ಹೊಂದಾಣಿಕೆಯನ್ನು ಹೊಂದಿದ್ದು ಬಳಕೆದಾರರಿಗೆ ವಿಭಿನ್ನ ರೈಡಿಂಗ್ ಪರಿಸ್ಥಿತಿಗಳ ನಡುವೆ ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ಈ ಹೊಸ ಬೈಕ್ ಹೊಂದಾಣಿಕೆಯ ಬ್ರೇಕ್‌ಗಳು ಮತ್ತು 3-ಹಂತದ ಹೊಂದಾಣಿಕೆಯೊಂದಿಗೆ ಕ್ಲಚ್ ಲಿವರ್‌ಗಳನ್ನು ಒಳಗೊಂಡಿದೆ.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಈ ಹೊಸ ಬೈಕ್ 17-ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ. ಇನ್ನು ಪ್ರಮುಖವಾಗಿ ಇದರ ಬ್ರೇಕಿಂಗ್ ಸಿಸ್ಟಂಗಳ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 270 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಪೆಟಲ್ ಡಿಸ್ಕ್ ಯುನಿಟ್ ಅನ್ನು ಹೊಂದಿದೆ, ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಸಿಂಗಲ್ ಮತ್ತು ಡ್ಯುಯಲ್-ಚಾನೆಲ್ ಎಬಿಎಸ್ ಆಯ್ಕೆಯನ್ನು ಹೊಂದಿದೆ,

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಈ ಬೈಕ್ TVS SmartXonnect ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಬರುತ್ತದೆ ಅದು ರೇಸಿಂಗ್ ಶೈಲಿಯನ್ನು ಪರಿಶೀಲಿಸಲು ರೇಸ್ ಅನಾಲಿಟಿಕ್ಸ್ ಮತ್ತು ಡೇಟಾ ಸೇರಿದಂತೆ ಹಲವಾರು ಡೇಟಾವನ್ನು ನೀಡುತ್ತದೆ. ಇದರಲ್ಲಿ ಟ್ರ್ಯಾಕ್ ರೈಡಿಂಗ್ ಟೆಲಿಮೆಟ್ರಿ ಜೊತೆಗೆ ಟರ್ನ್ ಮೂಲಕ ನ್ಯಾವಿಗೇಷನ್, ಕರೆ ಮತ್ತು ಎಸ್ಎಂಎಸ್ ನೋಟಿಫಿಕೇಷನ್ ಮತ್ತು ಕ್ರ್ಯಾಶ್ ಅಲರ್ಟ್ ಸಿಸ್ಟಮ್ ಸೇರಿದಂತೆ ಇತರ ಮಾಹಿತಿಗಳು ನೀಡುತ್ತದೆ.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಇನ್ನು ಈ ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕ್ 197.75 ಸಿಸಿ ಸಿಂಗಲ್-ಸಿಲಿಂಡರ್, ಫೋರ್-ಸ್ಟ್ರೋಕ್, 4ವಿ ಆಯಿಲ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 9,000 ಆರ್‌ಪಿಎಂನಲ್ಲಿ 20.53 ಬಿಹೆಚ್‍ಪಿ ಪವರ್ ಮತ್ತು 7,800 ಆರ್‌ಪಿಎಂನಲ್ಲಿ 17.25 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕ್ 2,050 ಎಂಎಂ ಉದ್ದ, 790 ಎಂಎಂ ಅಗಲ ಮತ್ತು 1,050 ಎಂಎಂ ಎತ್ತರವನ್ನು ಹೊಂದಿದೆ. ಈ ಬೈಕ್‌ನ ವ್ಹೀಲ್‌ಬೇಸ್ 1,050 ಎಂಎಂ ಉದ್ದವಿದೆ. ಇನ್ನು ಬೈಕ್ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಟಿವಿಎಸ್ ಮೋಟಾರ್ ಕಳೆದ ತಿಂಗಳ ತನ್ನ ಮಾರಾಟದ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಲಾಗಿದೆ. ಕಂಪನಿಯು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಟಿವಿಎಸ್ ಮೋಟಾರ್ ಕಂಪನಿಯು ಕಳೆದ ತಿಂಗಳು 3,55,033 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. ಕಂಪನಿಯು 2020ರ ಅಕ್ಟೋಬರ್ ತಿಂಗಳಿನಲ್ಲಿ 3,94,724 ಯುನಿಟ್ ವಾಹನಗಳನ್ನು ಮಾರಾಟ ಮಾಡಿತ್ತು. ಕಂಪನಿಯ ಮಾರಾಟ ಪ್ರಮಾಣವು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 10% ನಷ್ಟು ಕುಸಿದಿದೆ.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಕಂಪನಿಯ ದ್ವಿಚಕ್ರ ವಾಹನ ಮಾರಾಟದ ಬಗ್ಗೆ ಹೇಳುವುದಾದರೆ, ಟಿವಿಎಸ್ ಮೋಟಾರ್ ಕಳೆದ ತಿಂಗಳು ಒಟ್ಟು 3,41,513 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಕಂಪನಿಯು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಒಟ್ಟು 3,41,513 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿತ್ತು. ಈ ವರ್ಷ ದ್ವಿಚಕ್ರ ವಾಹನಗಳ ಮಾರಾಟದಲ್ಲಿ 10.6% ನಷ್ಟು ಕುಸಿತ ಕಂಡು ಬಂದಿದೆ. ಟಿವಿಎಸ್ ಮೋಟಾರ್ ಕಂಪನಿಯ ದೇಶಿಯ ಮಾರುಕಟ್ಟೆಯ ದ್ವಿಚಕ್ರ ವಾಹನಗಳ ಮಾರಾಟದ ಬಗ್ಗೆ ಹೇಳುವುದಾದರೆ, ಕಂಪನಿಯು ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ಒಟ್ಟು 2,58,777 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ್ದರೆ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಒಟ್ಟು 3,01380 ಯುನಿಟ್‌ ದ್ವಿಚಕ್ರ ವಾಹನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿತ್ತು.

ಭಾರತದಲ್ಲಿ ಹೊಸ TVS Apache RTR 200 4V ಬೈಕ್ ಬಿಡುಗಡೆ

ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕ್ ಕೆಲವು ನವೀಕರಣವನ್ನು ಪಡೆದಿದೆ. ಈ ಹೊಸ ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕ್ 200 ಸಿಸಿ ವಿಭಾಗದಲ್ಲಿ ಅತ್ಯುತ್ತಮ ಆಯ್ಕೆಗಳಲ್ಲಿ ಒಂದಾಗಿದೆ. ಈ ಹೊಸ ಬೈಕ್ ಮಾರಾಟದಲ್ಲಿ ಕಂಪನಿಗೆ ಹೆಚ್ಚಿನ ಕೊಡುಗೆಯನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Tvs launched updated 2022 apache rtr 200 4v in india specs features details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X