Just In
Don't Miss!
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
ಹೊಸೂರು ಮೂಲದ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ತಯಾರಕ ಕಂಪನಿಯಾದ ಟಿವಿಎಸ್ ಮೋಟಾರ್ ತನ್ನ ಉದ್ಯೋಗಿಗಳಿಗೆ ಕರೋನಾ ವೈರಸ್ ಲಸಿಕೆಯನ್ನು ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.

ಕಂಪನಿಯು ತನ್ನ ಉದ್ಯೋಗಿಗಳಿಗೆ ಮಾತ್ರವಲ್ಲದೆ ಉದ್ಯೋಗಿಗಳ ಕುಟುಂಬಸ್ಥರಿಗೂ ಲಸಿಕೆ ನೀಡಲಿದೆ ಎಂದು ಹೇಳಲಾಗಿದೆ. ಕೋವಿಡ್ ಲಸಿಕೆಯನ್ನು ದೇಶಾದ್ಯಂತ ಹಲವು ನಾಯಕರಿಗೆ ನೀಡಲಾಗಿದೆ. ಇತ್ತೀಚೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಸಹ ಈ ಲಸಿಕೆಯನ್ನು ಪಡೆದು ಕೊಂಡರು. ಜನರಲ್ಲಿ ಲಸಿಕೆ ಬಗ್ಗೆ ಭರವಸೆ ಮೂಡಿಸಲು ಹಲವು ರಾಜ್ಯಗಳ ಮುಖ್ಯಮಂತ್ರಿಗಳಿಗೂ ಲಸಿಕೆ ಹಾಕಲಾಗಿದೆ.

ಈಗ ತನ್ನ ಉದ್ಯೋಗಿಗಳಿಗೆ ಲಸಿಕೆ ನೀಡಲು ಉದ್ದೇಶಿಸಿರುವುದಾಗಿ ಟಿವಿಎಸ್ ಕಂಪನಿ ತಿಳಿಸಿದೆ. ಕರೋನಾದಿಂದ ಬಳಲುತ್ತಿರುವ 45 ವರ್ಷ ಹಾಗೂ 60 ವರ್ಷ ಮೇಲ್ಪಟ್ಟ ಉದ್ಯೋಗಿಗಳ ಕುಟುಂಬ ಸದಸ್ಯರಿಗೆ ಲಸಿಕೆ ನೀಡುವುದಾಗಿ ಕಂಪನಿ ಪ್ರಕಟಿಸಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಸರ್ಕಾರದ ಮಾರ್ಗಸೂಚಿಗಳ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿ ತಿಳಿಸಿದೆ. ಟಿವಿಎಸ್ ಮೋಟಾರ್ ಕಂಪನಿಯು ದೇಶಾದ್ಯಂತ ಸುಂದರಂ ಕ್ಲೇಟನ್, ಟಿವಿಎಸ್ ಫೈನಾನ್ಷಿಯಲ್ ಸರ್ವೀಸಸ್, ಸುಂದರಂ ಆಟೋ ಪಾರ್ಟ್ಸ್ ಹಾಗೂ ಎಮರಾಲ್ಡ್ ಹೆವನ್ ರಿಯಾಲ್ಟಿಗಳನ್ನು ನಿರ್ವಹಿಸುತ್ತದೆ.

ಈ ಕಂಪನಿಗಳು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ 35 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಿಸಿಕೊಂಡಿವೆ. ಎಲ್ಲಾ ಉದ್ಯೋಗಿಗಳಿಗೆ ಹಾಗೂ ಕುಟುಂಬದ ಸದಸ್ಯರಿಗೆ ವಿಶೇಷ ಕಾರ್ಯಕ್ರಮದ ಮೂಲಕ ಕರೋನಾ ವೈರಸ್ ಲಸಿಕೆ ನೀಡಲಾಗುತ್ತದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಈ ಬಗ್ಗೆ ಮಾತನಾಡಿರುವ ಟಿವಿಎಸ್ ಮೋಟಾರ್ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಆರ್. ಅನಂತ ಕೃಷ್ಣನ್, ನಮ್ಮ ಉದ್ಯೋಗಿಗಳ ಆರೋಗ್ಯಕ್ಕೆ ನಾವು ಹೆಚ್ಚಿನ ಒತ್ತು ನೀಡುತ್ತೇವೆ.

ಇದಕ್ಕೆ ಅನುಗುಣವಾಗಿ ನಾವು ಲಸಿಕೆ ನೀಡುವ ಕಾರ್ಯಕ್ರಮವನ್ನು ಆರಂಭಿಸಿದ್ದೇವೆ. ಕರೋನಾ ವೈರಸ್ ಅವಧಿಯಲ್ಲಿ ನಮ್ಮ ಕಂಪನಿಯಿಂದ ತುರ್ತು ಆರೈಕೆ, ವೈದ್ಯಕೀಯ ನೆರವು ಸೇರಿದಂತೆ ಹಲವು ಸೇವೆಗಳನ್ನು ನೀಡಲಾಗಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಟಿವಿಎಸ್ ಕಂಪನಿಯ ಈ ನಿರ್ಧಾರವು ಕಂಪನಿಯ ಉದ್ಯೋಗಿಗಳಿಂದ ಮಾತ್ರವಲ್ಲದೆ ದೇಶದ ಜನತೆಯಿಂದಲೂ ಮೆಚ್ಚುಗೆ ಪಡೆದಿದೆ. ಹಲವು ವಾಹನ ತಯಾರಕ ಕಂಪನಿಗಳು ಕರೋನಾ ವೈರಸ್ ಅವಧಿಯಲ್ಲಿ ಅವಶ್ಯಕತೆ ಇದ್ದವರಿಗೆ ನೆರವಾಗಿದ್ದವು.

ವಾಹನ ತಯಾರಕ ಕಂಪನಿಗಳು ಜನರಿಗೆ ಫೇಸ್ ಮಾಸ್ಕ್, ಸ್ಯಾನಿಟೈಜರ್, ಅಗತ್ಯ ಔಷಧ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿದ್ದವು. ಈಗ ಟಿವಿಎಸ್ ಮೋಟಾರ್ ಕಂಪನಿಯು ತನ್ನ ಉದ್ಯೋಗಿಗಳನ್ನು ರಕ್ಷಿಸಲು ಕರೋನಾ ವೈರಸ್ ಲಸಿಕೆ ನೀಡಲು ಮುಂದಾಗಿದೆ.
ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.