ದ್ವಿಚಕ್ರ ವಾಹನ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ಮೋಟಾರ್
ಟಿವಿಎಸ್ ಮೋಟಾರ್ ಕಂಪನಿಯು 1 ಲಕ್ಷ ಯುನಿಟ್ ವಾಹನಗಳನ್ನು ರಫ್ತು ಮಾಡಿರುವುದಾಗಿ ತಿಳಿಸಿದೆ. ವಿಶ್ವದಾದ್ಯಂತ ಟಿವಿಎಸ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಕಂಪನಿ ಹೇಳಿದೆ. ಇದರಿಂದಾಗಿ ಈ ಮೈಲಿಗಲ್ಲು ಸಾಧಿಸಲು ಸಾಧ್ಯವಾಗಿದೆ.

ಟಿವಿಎಸ್ ಮೋಟಾರ್ ಕಂಪನಿಯು ಸದ್ಯಕ್ಕೆ ಆಫ್ರಿಕಾ, ಆಗ್ನೇಯ ಏಷ್ಯಾ, ಮಧ್ಯ ಹಾಗೂ ಲ್ಯಾಟಿನ್ ಅಮೆರಿಕಾ ಸೇರಿದಂತೆ ಒಟ್ಟು 60 ದೇಶಗಳಲ್ಲಿ ತನ್ನ ವಾಹನಗಳನ್ನು ಮಾರಾಟ ಮಾಡುತ್ತದೆ. ಇದರ ಜೊತೆಗೆ ಕಂಪನಿಯು ಯುರೋಪ್ ಹಾಗೂ ಉತ್ತರ ಅಮೆರಿಕಾದಲ್ಲಿಯೂ ತನ್ನ ವಾಹನಗಳನ್ನು ಮಾರಾಟ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ.

ಕಂಪನಿಯು ಶೀಘ್ರದಲ್ಲೇ ಹೊಸ ಮಾರುಕಟ್ಟೆಗಳನ್ನು ಪ್ರವೇಶಿಸಲಿದೆ. ಕಂಪನಿಯು ಟಿವಿಎಸ್ ಅಪಾಚೆ, ಟಿವಿಎಸ್ ಹೆಚ್‌ಎಕ್ಸ್‌ಎಲ್ ಸರಣಿ, ಟಿವಿಎಸ್ ಸ್ಟ್ರೈಕರ್ ಸರಣಿಯಂತಹ ವಾಹನಗಳನ್ನು ರಫ್ತು ಮಾಡುತ್ತದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ವಾಹನಗಳಿಗೆ ಅಂತರ್ ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಈ ಮೂಲಕ ಟಿವಿಎಸ್ ವಿಶ್ವದ ಜನಪ್ರಿಯ ದ್ವಿಚಕ್ರ ವಾಹನ ಕಂಪನಿಗಳಲ್ಲಿ ಒಂದಾಗಿದೆ. ಇತ್ತೀಚೆಗೆ ಟಿವಿಎಸ್ ಕಂಪನಿಯು ನಾರ್ಟನ್ ಮೋಟಾರ್‌ಸೈಕಲ್ ಕಂಪನಿಯನ್ನು ಸ್ವಾಧೀನಪಡಿಸಿಕೊಂಡಿತು.

ಕಂಪನಿಯು ಇಲ್ಲಿ ಅತ್ಯಾಧುನಿಕ ಉತ್ಪಾದನಾ ಘಟಕವನ್ನು ತೆರೆಯಲಿದೆ. ನಿರ್ಮಾಣ ಹಂತದಲ್ಲಿರುವ ಈ ಘಟಕವು ಎರಡನೇ ತ್ರೈಮಾಸಿಕದಲ್ಲಿ ಆರಂಭವಾಗುವ ನಿರೀಕ್ಷೆಗಳಿವೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಟಿವಿಎಸ್ ಭಾರತದಲ್ಲಿ ತನ್ನ ವಾಹನಗಳನ್ನು ನಿರಂತರವಾಗಿ ಅಪ್ ಡೇಟ್ ಬಿಡುಗಡೆಗೊಳಿಸುತ್ತಿದೆ. ಕಂಪನಿಯು ಇತ್ತೀಚೆಗಷ್ಟೇ ಹೊಸ ಟಿವಿಎಸ್ ಅಪಾಚೆ ಆರ್‌ಟಿಆರ್ 160 4 ವಿ ಹಾಗೂ ಹೊಸ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕುಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ.

ಈ ಮೂಲಕ ಕಂಪನಿಯು ಹೊಸ ಗ್ರಾಹಕರನ್ನು ಆಕರ್ಷಿಸುತ್ತಿದೆ. ಟಿವಿಎಸ್ ಮೋಟಾರ್ ಕಂಪನಿಯು ಬಿಡುಗಡೆಗೊಳಿಸಿರುವ ಮಾಹಿತಿಯ ಪ್ರಕಾರ ಟಿವಿಎಂ ಕಂಪನಿಯು ಫೆಬ್ರವರಿ ತಿಂಗಳ ಮಾರಾಟದಲ್ಲಿ ಸುಮಾರು 21%ನಷ್ಟು ಬೆಳವಣಿಗೆಯನ್ನು ಸಾಧಿಸಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

2021ರ ಫೆಬ್ರವರಿ ತಿಂಗಳಿನಲ್ಲಿ ಕಂಪನಿಯು 2,84,581 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. 2020ರ ಫೆಬ್ರವರಿ ತಿಂಗಳಿನಲ್ಲಿ ಕಂಪನಿಯು 2,35,891 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿತ್ತು.

ಕಂಪನಿಯ ದೇಶಿಯ ಮಾರುಕಟ್ಟೆಯಲ್ಲಿನ ದ್ವಿಚಕ್ರ ವಾಹನಗಳ ಮಾರಾಟದ ಬಗ್ಗೆ ಹೇಳುವುದಾದರೆ ಕಂಪನಿಯು ಭಾರತದಲ್ಲಿ ಕಳೆದ ತಿಂಗಳು ಒಟ್ಟು 1,95,145 ಯುನಿಟ್ ವಾಹನಗಳನ್ನು ಮಾರಾಟ ಮಾಡಿದ್ದು, 15%ನಷ್ಟು ಬೆಳವಣಿಗೆಯನ್ನು ಸಾಧಿಸಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಒಟ್ಟು 1,69,684 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿತ್ತು.

ಕಂಪನಿಯು ಕಳೆದ ತಿಂಗಳು 1,37,259 ಯೂನಿಟ್ ಬೈಕುಗಳನ್ನು ಮಾರಾಟ ಮಾಡಿದ್ದರೆ, 2020ರ ಫೆಬ್ರವರಿ ತಿಂಗಳಿನಲ್ಲಿ ಒಟ್ಟು 1,18,514 ಯುನಿಟ್ ಬೈಕುಗಳನ್ನು ಮಾರಾಟ ಮಾಡಿತ್ತು.


Click it and Unblock the Notifications