ಏಪ್ರಿಲ್ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ಟಿವಿಎಸ್ ಮೋಟಾರ್

ಟಿವಿಎಸ್ ಮೋಟಾರ್ ಕಂಪನಿಯು 2021ರ ಏಪ್ರಿಲ್ ತಿಂಗಳ ವಾಹನಗಳ ಮಾರಾಟದ ಅಂಕಿಅಂಶಗಳನ್ನು ಬಿಡುಗಡೆಗೊಳಿಸಿದೆ. ಟಿವಿಎಸ್ ಕಂಪನಿಯು ಏಪ್ರಿಲ್ ತಿಂಗಳಿನಲ್ಲಿ ಒಟ್ಟು 2,38,983 ಲಕ್ಷ ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. ಇದರಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸೇರಿವೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ಟಿವಿಎಸ್ ಮೋಟಾರ್

ಟಿವಿಎಸ್ ಕಂಪನಿಯು ಕಳೆದ ತಿಂಗಳು 2,26,193 ದ್ವಿಚಕ್ರ ವಾಹನಗಳನ್ನು ಮತ್ತು 12,790 ತ್ರಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. 2021ರ ಮಾರ್ಚ್ ತಿಂಗಳಿನಲ್ಲಿ ಟಿವಿಎಸ್ ಕಂಪನಿಯು 3,22,683 ಯುನಿಟ್ ವಾಹನಗಳನ್ನು ಮಾರಟಗೊಳಿಸಿತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.33 ರಷ್ಟು ಕುಸಿತ ಕಂಡಿದೆ, ಇನ್ನು ಕಳೆದ ತಿಂಗಳ ಮಾರಾಟವನ್ನು ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಹೋಲಿಸಲು ಸಾಧ್ಯವಿಲ್ಲ. ಏಕೆಂದರೆ ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿ ಇದ್ದ ಕಾರಣ ವಾಹನಗಳ ಮಾರಾಟ ಸ್ಥಗಿತವಾಗಿತ್ತು.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ಟಿವಿಎಸ್ ಮೋಟಾರ್

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಅನೇಕ ರಾಜ್ಯಗಳಲ್ಲಿ ವಿಧಿಸಲಾದ ಲಾಕ್‌ಡೌನ್ ತರಹದ ನಿರ್ಬಂಧಗಳಿಂದಾಗಿ ಕಳೆದ ತಿಂಗಳು ದೇಶೀಯ ಮಾರಾಟ ಕಡಿಮೆಯಾಗಿದೆ ಎಂದು ದ್ವಿಚಕ್ರ ವಾಹನ ತಯಾರಕರು ಹೇಳಿದ್ದಾರೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಏಪ್ರಿಲ್ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ಟಿವಿಎಸ್ ಮೋಟಾರ್

ಟಿವಿಎಸ್ ಮೋಟಾರ್ ಚಾನೆಲ್ ಪಾಲುದಾರರನ್ನು ಬೆಂಬಲಿಸಲು ಡೀಲರ್ ಸ್ಟಾಕ್ ಗಳನ್ನು ಕಡಿಮೆ ಮಾಡಿದೆ ಮತ್ತು ಅದು ಮತ್ತೆ ತೆರೆದಾಗ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆ ಹೆಚ್ಚಿಸಲಾಗುತ್ತದೆ ಎಂದು ಹೇಳಿಕೊಂಡಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ಟಿವಿಎಸ್ ಮೋಟಾರ್

ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ಟಿವಿಎಸ್ ಕಂಪನಿಯು 131,386 ಯುನಿಟ್‌ ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ. ಕಳೆದ ತಿಂಗಳು 65,213 ಸ್ಕೂಟರ್ ಯುನಿಟ್‌ಗಳ ಮಾರಾಟವನ್ನು ದಾಖಲಿಸಿದೆ ಇನ್ನು 133,227 ಬೈಕ್ ಯುನಿಟ್‌ಗಳ ಮಾರಾಟವನ್ನು ಕಳೆದ ತಿಂಗಳು ಟಿವಿಎಸ್ ದಾಖಲಿಸಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಏಪ್ರಿಲ್ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ಟಿವಿಎಸ್ ಮೋಟಾರ್

2020 ಜನವರಿಯಲ್ಲಿ ಬಿಡುಗಡೆಗೊಂಡಿದ್ದ ಟಿವಿಎಸ್ ಐಕ್ಯೂಬ್ ಮಾದರಿಯು ಪ್ರತಿಸ್ಪರ್ಧಿ ಮಾದರಿಗಳ ಅಬ್ಬರದ ನಡುವೆ ಇತ್ತೀಚೆಗೆ 1 ಸಾವಿರ ಯುನಿಟ್ ವಿತರಣೆಗೊಂಡಿದೆ. ಆರಂಭದಲ್ಲಿ ಬೆಂಗಳೂರಿನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿತ್ತು. ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಹೊಸ ಇವಿ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಲಾಗಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ಟಿವಿಎಸ್ ಮೋಟಾರ್

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಅಪಾಚೆ ಸರಣಿಯ ಆರ್‌ಟಿಆರ್ 160 4ವಿ ಮತ್ತು ಆರ್‌ಟಿಆರ್ 200 4ವಿ ಬೈಕ್‌ಗಳ ಬೆಲೆಯನ್ನು ಕಳೆದ ತಿಂಗಳು ಏರಿಸಲಾಗಿದೆ. ಟಿವಿಎಸ್ ಕಂಪನಿಯು ತನ್ನ ಅಪಾಚೆ ಆರ್‌ಟಿಆರ್ 200 4ವಿ ಬೈಕಿನ ಬೆಲೆಯನ್ನು ರೂ.1,295 ಗಳವರೆಗೆ ಹೆಚ್ಚಿಸಲಾಗಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಏಪ್ರಿಲ್ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ಟಿವಿಎಸ್ ಮೋಟಾರ್

ಇದೀಗ ಈ ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕಿನ ಸಿಂಗಲ್-ಚಾನೆಲ್ ಎಬಿಎಸ್ ರೂಪಾಂತರದ ಬೆಲೆಯು ರೂ.1,29,315 ಗಳಾಗಿದೆ. ಇನ್ನು ಇದರ ಡ್ಯುಯಲ್-ಚಾನೆಲ್ ಎಬಿಎಸ್ ರೂಪಾಂತರದ ಬೆಲೆಯು ರೂ.1,34,365 ಗಳಾಗಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಕುಸಿತ ಕಂಡ ಟಿವಿಎಸ್ ಮೋಟಾರ್

ಟಿವಿಎಸ್ ಕಂಪನಿಯು ತನ್ನ ಸರಣಿಯಲ್ಲಿರುವ ಇತರ ದ್ವಿಚಕ್ರ ವಾಹನಗಳ ಬೆಲೆಯನ್ನು ಕೂಡ ಹೆಚ್ಚಿಸಲಾಗಿದೆ. ಕಳೆದ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಹಲವು ಜನಪ್ರಿಯ ವಾಹನ ಉತ್ಪಾದನಾ ಕಂಪನಿಗಳು ತಮ್ಮ ಸರಣಿಯಲ್ಲಿರುವ ವಾಹನಗಳ ಬೆಲೆಯನ್ನು ಹೆಚ್ಚಿಸಿದೆ.

Most Read Articles

Kannada
English summary
TVS Records Over 2,38,000 Units Sales. Read In Kannada.
Story first published: Wednesday, May 5, 2021, 9:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X