ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ಟಿವಿಎಸ್ ಮೋಟಾರ್ ಕಂಪನಿಯು 2021ರ ಮಾರ್ಚ್ ತಿಂಗಳ ಮಾರಾಟದ ಅಂಕಿಅಂಶಗಳನ್ನು ಬಿಡುಗಡೆಗೊಳಿಸಿದೆ. ಕಂಪನಿಯು ಮಾರ್ಚ್ ತಿಂಗಳಿನಲ್ಲಿ ಒಟ್ಟು 3.22 ಲಕ್ಷ ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ.

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ಟಿವಿಎಸ್ ಮೋಟಾರ್ ಕಂಪನಿಯು 2020ರ ಮಾರ್ಚ್ ತಿಂಗಳಿನಲ್ಲಿ 1.44 ಲಕ್ಷ ಯುನಿಟ್ ವಾಹನಗಳನ್ನು ಮಾರಾಟ ಮಾಡಿತ್ತು. ಕಳೆದ ವರ್ಷದ ಮಾರಾಟಕ್ಕೆ ಹೋಲಿಸಿದರೆ ಈ ವರ್ಷದ ಮಾರಾಟವು 123%ನಷ್ಟು ಹೆಚ್ಚಳವಾಗಿದೆ. ಬೈಕ್ ಸೆಗ್'ಮೆಂಟಿನ ಮಾರಾಟವು 136%ನಷ್ಟು ಹೆಚ್ಚಳವಾಗಿದ್ದರೆ, ಸ್ಕೂಟರ್ ಸೆಗ್'ಮೆಂಟಿನ ಮಾರಾಟವು 206%ನಷ್ಟು ಹೆಚ್ಚಳವಾಗಿದೆ.

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ದ್ವಿಚಕ್ರ ವಾಹನಗಳ ಮಾರಾಟದ ಬಗ್ಗೆ ಹೇಳುವುದಾದರೆ, ಕಂಪನಿಯು 2021ರ ಮಾರ್ಚ್ ತಿಂಗಳಿನಲ್ಲಿ 3,07,437 ಯುನಿಟ್ ವಾಹನಗಳನ್ನು ಮಾರಾಟ ಮಾಡಿತ್ತು. ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ 1,33,988 ಯುನಿಟ್ ದ್ವಿಚಕ್ರ ವಾಹನಗಳು ಮಾರಾಟವಾಗಿದ್ದವು.

MOST READ: ನಿರ್ವಹಣಾ ವೆಚ್ಚ ತಗ್ಗಿಸಲು ವಾಣಿಜ್ಯ ವಾಹನಗಳಿಗಾಗಿ ಹೊಸ ಎಂಜಿನ್ ಪರಿಚಯಿಸಿದ ಟಾಟಾ ಮೋಟಾರ್ಸ್

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ದ್ವಿಚಕ್ರ ವಾಹನ ಮಾರಾಟ ಪ್ರಮಾಣವು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 130%ನಷ್ಟು ಹೆಚ್ಚಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳು 2,02,155 ಯುನಿಟ್ ವಾಹನಗಳನ್ನು ಮಾರಾಟ ಮಾಡಲಾಗಿದೆ.

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ಕಳೆದ ವರ್ಷ ಈ ಪ್ರಮಾಣವು 94,103 ಯುನಿಟ್‌ಗಳಾಗಿತ್ತು. ಮಾರಾಟ ಪ್ರಮಾಣವು ಈ ವರ್ಷ 115%ನಷ್ಟು ಹೆಚ್ಚಾಗಿದೆ. 2020ರ ಮಾರ್ಚ್ ತಿಂಗಳಿನಲ್ಲಿ 66,673 ಯುನಿಟ್‌ ಬೈಕ್'ಗಳನ್ನು ಮಾರಾಟ ಮಾಡಲಾಗಿತ್ತು.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ಈ ವರ್ಷ 1,57,294 ಯುನಿಟ್'ಗಳನ್ನು ಮಾರಾಟ ಮಾಡಲಾಗಿದ್ದು, ಮಾರಾಟ ಪ್ರಮಾಣವು 136%ನಷ್ಟು ಏರಿಕೆಯಾಗಿದೆ. ಈ ವರ್ಷದ ಮಾರ್ಚ್ ತಿಂಗಳಿನಲ್ಲಿ 1,04,513 ಯುನಿಟ್ ಸ್ಕೂಟರ್'ಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ 34,191 ಯುನಿಟ್ ಸ್ಕೂಟರ್'ಗಳನ್ನು ಮಾರಾಟ ಮಾಡಲಾಗಿತ್ತು.

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ಮಾರಾಟ ಪ್ರಮಾಣವು ಕಳೆದ ವರ್ಷಕ್ಕಿಂತ ಈ ಬಾರಿ 206%ನಷ್ಟು ಹೆಚ್ಚಾಗಿದೆ. ಕಳೆದ ತಿಂಗಳು 1,19,422 ಯುನಿಟ್ ವಾಹನಗಳನ್ನು ರಫ್ತು ಮಾಡಲಾಗಿದೆ. 2020ರ ಮಾರ್ಚ್ ತಿಂಗಳಿನಲ್ಲಿ 50,197 ಯುನಿಟ್'ಗಳನ್ನು ರಫ್ತು ಮಾಡಲಾಗಿತ್ತು.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ರಫ್ತು ಪ್ರಮಾಣವು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 138%ನಷ್ಟು ಹೆಚ್ಚಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೈಕ್‌ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂಪನಿಯು ಹೆಚ್ಚಿನ ಸಂಖ್ಯೆಯಲ್ಲಿ ಬೈಕುಗಳನ್ನು ರಫ್ತು ಮಾಡಿದೆ.

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

2020ರ ಮಾರ್ಚ್ ತಿಂಗಳಿನಲ್ಲಿ 10,751 ಯುನಿಟ್ ತ್ರಿಚಕ್ರ ವಾಹನಗಳನ್ನು ಮಾಡಲಾಗಿದ್ದರೆ, ಈ ವರ್ಷದ ಮಾರ್ಚ್ ತಿಂಗಳಿನಲ್ಲಿ 15,246 ಯುನಿಟ್ ತ್ರಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿದೆ. ತ್ರಿಚಕ್ರ ವಾಹನ ಮಾರಾಟ ಪ್ರಮಾಣವು ಈ ಬಾರಿ 42% ನಷ್ಟು ಏರಿಕೆಯಾಗಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ಕಂಪನಿಯು ನಾಲ್ಕನೇ ತ್ರೈಮಾಸಿಕದಲ್ಲಿ 50%ನಷ್ಟು ಬೆಳವಣಿಗೆಯನ್ನು ದಾಖಲಿಸಿರುವುದಾಗಿ ವರದಿ ಮಾಡಿದೆ, ಕಳೆದ ವರ್ಷದ ಕೊನೆಯ ಎರಡು ತ್ರೈಮಾಸಿಕಗಳಲ್ಲಿ ಕ್ರಮವಾಗಿ 5.90 ಲಕ್ಷ ಯುನಿಟ್ ಹಾಗೂ 8.87 ಲಕ್ಷ ಯುನಿಟ್ ವಾಹನಗಳನ್ನು ಮಾರಾಟ ಮಾಡಿರುವುದಾಗಿ ತಿಳಿಸಿದೆ.

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ಟಿವಿಎಸ್ ಮೋಟಾರ್ ಕಂಪನಿಯು ಸದ್ಯಕ್ಕೆ ಆಫ್ರಿಕಾ, ಆಗ್ನೇಯ ಏಷ್ಯಾ, ಮಧ್ಯ ಮತ್ತು ಲ್ಯಾಟಿನ್ ಅಮೆರಿಕಾ ಸೇರಿದಂತೆ ಒಟ್ಟು 60 ದೇಶಗಳಲ್ಲಿ ತನ್ನ ವಾಹನಗಳನ್ನು ಮಾರಾಟ ಮಾಡುತ್ತದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ಇದರ ಜೊತೆಗೆ ಟಿವಿಎಸ್ ಮೋಟಾರ್ ಕಂಪನಿಯು ಯುರೋಪ್ ಹಾಗೂ ಉತ್ತರ ಅಮೆರಿಕಾದ ಇತರ ಮಾರುಕಟ್ಟೆಗಳನ್ನು ಪ್ರವೇಶಿಸಲು ನಿರ್ಧರಿಸಿದೆ. ಶೀಘ್ರದಲ್ಲೇ ಹೊಸ ಮಾರುಕಟ್ಟೆಗಳಲ್ಲಿ ತನ್ನ ವಾಹನಗಳನ್ನು ಬಿಡುಗಡೆಗೊಳಿಸಲಿದೆ.

ಮಾರ್ಚ್ ತಿಂಗಳ ಮಾರಾಟ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಟಿವಿಎಸ್ ಮೋಟಾರ್

ಟಿವಿಎಸ್ ಕಂಪನಿಯು ಭಾರತದಲ್ಲಿ ತನ್ನ ವಾಹನಗಳನ್ನು ನಿರಂತರವಾಗಿ ಅಪ್ ಡೇಟ್ ಮಾಡಿ ಬಿಡುಗಡೆಗೊಳಿಸುತ್ತಿದೆ. ಇತ್ತೀಚೆಗೆ ಕಂಪನಿಯು ಅಪಾಚೆ ಆರ್‌ಟಿಆರ್ 160 4 ವಿ ಹಾಗೂ ಹೊಸ ಸ್ಟಾರ್ ಸಿಟಿ ಪ್ಲಸ್ ಬೈಕುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಮೂಲಕ ಕಂಪನಿಯು ಹೊಸ ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದೆ.

Article Published On: Friday, April 2, 2021, 14:12 [IST]
English summary
TVS Motor releases March 2021 sales report. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+