ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ದೇಶಾದ್ಯಂತ ಎಲೆಕ್ಟ್ರಿಕ್ ವಾಹನ ಉದ್ಯಮವು ದಿನದಿಂದ ದಿನಕ್ಕೆ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಟಿವಿಎಸ್ ಮೋಟಾರ್ ಕಂಪನಿಯು ಹೊಸ ಉದ್ಯಮದಲ್ಲಿ ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಮುಂಚೂಣಿ ಸಾಧಿಸುವ ತವಕದಲ್ಲಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಟಿವಿಎಸ್ ಮೋಟಾರ್ ಕಂಪನಿಯು ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮೂಲಕ ಎಲೆಕ್ಟ್ರಿಕ್ ವಾಹನ ಉದ್ಯಮವನ್ನು ಅಧಿಕೃತವಾಗಿ ಪ್ರವೇಶಿಸಿದ್ದು, ಕಂಪನಿಯು ಇದೀಗ ಕ್ರಿಯಾನ್ ಎನ್ನುವ ಮತ್ತೊಂದು ಪ್ರೀಮಿಯಂ ಸ್ಕೂಟರ್ ಬಿಡುಗಡೆಗೆ ಸಜ್ಜಾಗುತ್ತಿದೆ. ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ಪ್ರತ್ಯೇಕ ವಿಭಾಗವನ್ನು ತೆರೆಯುತ್ತಿರುವ ಟಿವಿಎಸ್ ಕಂಪನಿಯು ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಹೊಸ ಇವಿ ವಾಹನ ಉದ್ಯಮದ ಮೇಲೆ ಕಂಪನಿಯು ರೂ. 1 ಸಾವಿರ ಕೋಟಿ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದು, ಹಂತ-ಹಂತವಾಗಿ ಬಂಡವಾಳ ಹೂಡಿಕೆಯೊಂದಿಗೆ ಇವಿ ವಾಹನ ಉತ್ಪಾದನೆ ಹೆಚ್ಚಳ ಮತ್ತು ಅಗತ್ಯ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಚಾಲನೆ ನೀಡಲಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಇನ್ನು ಟಿವಿಎಸ್ ಬಹುನೀರಿಕ್ಷಿತ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಐಕ್ಯೂಬ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಒದಗಿಸಲಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಟಿವಿಎಸ್ ಹೊಸ ಕ್ರಿಯಾನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಎಥರ್ 450ಎಕ್ಸ್ ಮತ್ತು ಒಕಿನಾವ ಸ್ಕೂಟರ್ ಮಾದರಿಗಳಿಗೆ ಅತ್ಯುತ್ತಮ ಪೈಟೋಟಿ ನೀಡಲಿದ್ದು, ಹೊಸ ಕ್ರಿಯಾನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲಿ 3kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಹೊಂದಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಹೊಸ ಸ್ಕೂಟರ್ ಮಾದರಿಯ ಅತ್ಯುತ್ತಮ ಪ್ರತಿ ಚಾರ್ಜ್‌ಗೆ 80 ಕಿ.ಮೀ ಗೂ ಅಧಿಕ ಮೈಲೇಜ್‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹಿಂದಿರುಗಿಸಲಿದ್ದು, ಐಕ್ಯೂಬ್ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ಪಡೆದುಕೊಳ್ಳಲಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಹೊಸ ಇವಿ ಸ್ಕೂಟರ್ ಮಾದರಿಯಲ್ಲಿನ ಬ್ಯಾಟರಿ ಮಾದರಿಯು ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಮಟ್ಟದ ಚಾರ್ಜ್ ಮಾಡಲು ಸ್ಮಾರ್ಟ್ ಚಾರ್ಜಿಂಗ್ ಸಾಕೆಟ್ ಸೌಲಭ್ಯವನ್ನು ಪಡೆದುಕೊಂಡಿರಲಿದ್ದು, ಶೇ. 80 ರಷ್ಟು ಚಾರ್ಜಿಂಗ್ ಅನ್ನು ಕೇವಲ 1 ಗಂಟೆಯೊಳಗೆ ಮತ್ತು ಪೂರ್ಣಪ್ರಮಾಣದ ಚಾರ್ಜ್ ಮಾಡಲು ಮೂರು ಗಂಟೆ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡಿದ್ದಲ್ಲಿ ಕೇವಲ 90 ನಿಮಿಷಗಳಲ್ಲಿ ಪೂರ್ಣ ಪ್ರಮಾಣದ ಚಾರ್ಜಿಂಗ್ ಪಡೆದುಕೊಳ್ಳಬಹುದಾಗಿದ್ದು, ಚಾರ್ಜಿಂಗ್ ಸೌಲಭ್ಯದ ಆಧಾರದ ಮೇಲೆ ಚಾರ್ಜಿಂಗ್ ಪೂರ್ಣಾವಧಿಯ ಲೆಕ್ಕಾಚಾರ ನಿರ್ಧಾರವಾಗುತ್ತದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಟಿವಿಎಸ್ ಕ್ರಿಯಾನ್ ಕೂಡಾ ಪ್ರತಿಸ್ಪರ್ಧಿ ಸ್ಕೂಟರ್ ಮಾದರಿಗಳಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಕನೆಕ್ಟೆಡ್ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಕೇವಲ 5.1-ಸೆಕೆಂಡುಗಳಲ್ಲಿ ಸೊನ್ನೆಯಿಂದ 60 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಹಾಗೆಯೇ ಹೊಸ ಇವಿ ಸ್ಕೂಟರ್‌ನಲ್ಲಿ ಸ್ಮಾರ್ಟ್‌ಫೋನ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡಬಲ್ಲ ಟಿಎಫ್‌ಟಿ ಸ್ಕ್ರೀನ್‌ ಜೋಡಿಸಲಾಗಿದ್ದು, ಇದರಲ್ಲಿ ಬ್ಯಾಟರಿ ಲಭ್ಯತೆಯ ಮಾಹಿತಿ, ವಿವಿಧ ರೈಡಿಂಗ್ ಮೋಡ್ ಮಾಹಿತಿ, ಪಾರ್ಕಿಂಗ್ ಮೋಡ್ ಮಾಹಿತಿ ಮತ್ತು ಜಿಯೋ ಫೆನ್ಸಿಂಗ್ ಮಾಹಿತಿ ಪ್ರದರ್ಶನ ಮಾಡುವ ಸೌಲಭ್ಯ ಹೊಂದಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಮಾಹಿತಿಗಳ ಪ್ರಕಾರ ಹೊಸ ಸ್ಕೂಟರ್ ಮಾದರಿಯು 2021ರ ಕೊನೆಯಲ್ಲಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಹೊಸ ಸ್ಕೂಟರ್ ಬೆಲೆಯು ಉತ್ಪಾದನಾ ಆವೃತ್ತಿಯಲ್ಲಿನ ಬ್ಯಾಟರಿ ಸೌಲಭ್ಯದ ಆಧಾರದ ಮೇಲೆ ನಿರ್ಧಾರವಾಗಲಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದ ಮೇಲೆ ರೂ. 1 ಸಾವಿರ ಕೋಟಿ ಹೂಡಿಕೆ ಮಾಡಿದ ಟಿವಿಎಸ್ ಮೋಟಾರ್

ಪ್ರತಿಸ್ಪರ್ಧಿ ಇವಿ ಸ್ಕೂಟರ್ ಮಾದರಿಗಳು ಬ್ಯಾಟರಿ ಸೌಲಭ್ಯದ ಆಧಾರದ ಮೇಲೆ ರೂ. 1 ಲಕ್ಷದಿಂದ ರೂ. 1.40 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಟಿವಿಎಸ್ ಕ್ರಿಯಾನ್ ಕೂಡಾ ಆಕರ್ಷಕ ಬೆಲೆ ಪಡೆದುಕೊಳ್ಳಲಿದೆ.

Most Read Articles

Kannada
English summary
TVS To Invest Rs 1,000 Crore In EV Space. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X