ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ತಮಿಳುನಾಡು ಮೂಲದ TVS Motor ಕಂಪನಿಯು ವಿಶ್ವದ ಅತಿ ದೊಡ್ಡ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ತಯಾರಕ ಕಂಪನಿಗಳಲ್ಲಿ ಒಂದಾಗಿದೆ. ಕಂಪನಿಯು ವಿಶ್ವದ ಅತಿ ದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಯಾಗಲು ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ, ಕಂಪನಿಯು ತನ್ನ ದ್ವಿಚಕ್ರ ವಾಹನ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ವಿಸ್ತರಿಸಲು ಉದ್ದೇಶಿಸಿದೆ ಎಂದು ಘೋಷಿಸಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಟಿವಿಎಸ್ ಮೋಟಾರ್ ಕಂಪನಿಯು ಸದ್ಯಕ್ಕೆ ಭಾರತದಲ್ಲಿ ತನ್ನ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರಾಟ ಮಾಡುತ್ತಿದೆ. ಕಂಪನಿಯು ಎಲೆಕ್ಟ್ರಿಕ್ ವಾಹನಗಳಿಗಾಗಿ ರೂ. 1,200 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ. ಭವಿಷ್ಯದ ತಂತ್ರಜ್ಞಾನಗಳಲ್ಲಿ ಹಾಗೂ ಎಲೆಕ್ಟ್ರಿಕ್ ವಾಹನಗಳಲ್ಲಿ ಹೂಡಿಕೆ ಮಾಡುವ ಸಲುವಾಗಿ ಕಂಪನಿಯು ಈ ಬೃಹತ್ ಮೊತ್ತವನ್ನು ಮೀಸಲಿಟ್ಟಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಕಂಪನಿಯು ಈ ಮೊತ್ತವನ್ನು ತಮಿಳುನಾಡಿನಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದೆ. ಈ ಸಂಬಂಧ ನವೆಂಬರ್ 23ರಂದು ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಲಾಗಿದೆ ಎಂದು ವರದಿಯಾಗಿದೆ. ಕೊಯಮತ್ತೂರಿನಲ್ಲಿ ನಡೆದ ತಮಿಳುನಾಡು ಹೂಡಿಕೆ ಸಮಾವೇಶ 2021ರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹಾಗೂ ಟಿವಿಎಸ್ ಮೋಟಾರ್ ಅಧ್ಯಕ್ಷ ವೇಣು ಶ್ರೀನಿವಾಸನ್ ಅವರ ಸಮ್ಮುಖದಲ್ಲಿ ಈ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಲಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಈ ತಿಳುವಳಿಕೆ ಒಪ್ಪಂದವು ಮುಂದಿನ ನಾಲ್ಕು ವರ್ಷಗಳಲ್ಲಿ ತಮಿಳುನಾಡಿನಲ್ಲಿ ತಂತ್ರಜ್ಞಾನ ಹಾಗೂ ಎಲೆಕ್ಟ್ರಿಕ್ ವಾಹನಗಳ ಭವಿಷ್ಯದ ಉತ್ಪಾದನೆಗೆ ಕಾರಣವಾಗುತ್ತದೆ. ಓಲಾ ಎಲೆಕ್ಟ್ರಿಕ್ ಕಂಪನಿಯು ಈಗಾಗಲೇ ತಮಿಳುನಾಡಿನಲ್ಲಿ ತನ್ನ ಎಲೆಕ್ಟ್ರಿಕ್ ವಾಹನ ಉತ್ಪಾದನೆಯನ್ನು ಆರಂಭಿಸಿದೆ. ಇದರ ಜೊತೆಗೆ ಕೆಲವು ಸ್ಟಾರ್ಟ್ ಅಪ್ ಕಂಪನಿಗಳು ಸಹ ತಮಿಳುನಾಡಿನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಈ ಸನ್ನಿವೇಶದಲ್ಲಿ ಟಿವಿಎಸ್ ಮೋಟಾರ್ ಕಂಪನಿಯು ಸಹ ತನ್ನ ಅತ್ಯಾಧುನಿಕ ಎಲೆಕ್ಟ್ರಿಕ್ ವಾಹನ ಉತ್ಪಾದನೆಯನ್ನು ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ತಮಿಳುನಾಡನ್ನು ಎಲೆಕ್ಟ್ರಿಕ್ ವಾಹನ ಉತ್ಪಾದನೆಯ ಕೇಂದ್ರ ಬಿಂದುವಾಗಿ ಪರಿವರ್ತಿಸಲು ಸಜ್ಜಾಗಿದೆ. ರಾಜ್ಯದ ಒಟ್ಟಾರೆ ಆರ್ಥಿಕ ಬೆಳವಣಿಗೆಗೆ ಟಿವಿಎಸ್ ಮೋಟಾರ್ ಕಂಪನಿಯ ಈ ಹೂಡಿಕೆಯು ಸಹ ಕೊಡುಗೆ ನೀಡಲಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಇದರ ಜೊತೆಗೆ ಈ ಬೃಹತ್ ಹೂಡಿಕೆಯು ಟಿವಿಎಸ್ ಮೋಟಾರ್ ಕಂಪನಿಯು ಎಲೆಕ್ಟ್ರಿಕ್ ವಾಹನ ಉತ್ಪಾದನೆಯತ್ತ ಸಾಗುತ್ತಿದೆ ಎಂಬುದನ್ನು ಖಚಿತಪಡಿಸುತ್ತದೆ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಟಾರ್ಟ್ ಅಪ್ ಕಂಪನಿಗಳಿಂದ ಹಿಡಿದು ಪ್ರಮುಖ ವಾಹನ ತಯಾರಕ ಕಂಪನಿಗಳವರೆಗೆ ಹಲವು ಕಂಪನಿಗಳು ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಇತ್ತೀಚಿಗಷ್ಟೇ ಜನಪ್ರಿಯ ಮೊಬೈಲ್ ಫೋನ್ ತಯಾರಕ ಕಂಪನಿಯಾದ Oppo ಸಹ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುವ ಯೋಜನೆಯನ್ನು ಪ್ರಕಟಿಸಿದೆ. ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯು ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಂಪನಿಗಳು ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯನ್ನು ಪ್ರವೇಶಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಟಿವಿಎಸ್ ಮೋಟಾರ್ ಕಂಪನಿಯು ಭಾರತದಲ್ಲಿ ತನ್ನ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರಾಟ ಮಾಡುತ್ತಿದೆ. ಈ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ರೂ. 1,15,218 ಗಳಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಸುಧಾರಿತ ಎಲೆಕ್ಟ್ರಿಕ್ ಡ್ರೈವ್‌ಟ್ರೇನ್ ವ್ಯವಸ್ಥೆಯನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ 4.4 ಕಿ.ವ್ಯಾ ಸಾಮರ್ಥ್ಯದ ಎಲೆಕ್ಟ್ರಿಕ್ ಮೋಟರ್ ಅಳವಡಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಪ್ರತಿ ಗಂಟೆಗೆ ಗರಿಷ್ಠ 78 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿದೆ. ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ ಈ ಎಲೆಕ್ಟ್ರಿಕ್ ಸ್ಕೂಟರ್ 75 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಸ್ಕೂಟರಿನಲ್ಲಿರುವ ಬ್ಯಾಟರಿಯನ್ನು ಸಾಮಾನ್ಯ ಚಾರ್ಜರ್ ಬಳಸಿ 6 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಮಾಡಬಹುದು. ಫಾಸ್ಟ್ ಚಾರ್ಜರ್ ಮೂಲಕ ಈ ಬ್ಯಾಟರಿಯನ್ನು ಮತ್ತಷ್ಟು ಬೇಗ ಚಾರ್ಜ್ ಮಾಡಬಹುದು.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಕೆಲವು ದಿನಗಳ ಹಿಂದಷ್ಟೇ ಟಿವಿಎಸ್ ಮೋಟಾರ್ ಕಂಪನಿಯು ಇವಿ ಉತ್ಪಾದನೆಗಾಗಿ ಪ್ರತ್ಯೇಕ ಕಂಪನಿಯೊಂದನ್ನು ತೆರೆಯುವ ಸಿದ್ದತೆಯಲ್ಲಿದೆ ಎಂದು ವರದಿಯಾಗಿತ್ತು. ಟಿವಿಎಸ್ ಮೋಟಾರ್ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಇವಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಹೊಸ ಇವಿಗಳ ಬಿಡುಗಡೆ ಮುನ್ನ ಇವಿಗಳಿಗಾಗಿಯೇ ಪ್ರತ್ಯೇಕ ಸಹಭಾಗಿತ್ವದ ಕಂಪನಿಯನ್ನು ತೆರೆಯಲು ಟಿವಿಎಸ್ ಕಂಪನಿಯು ಮುಂದಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಹೊಸ ಕಂಪನಿಯ ಮೇಲೆ ಟಿವಿಎಸ್ ಮೋಟಾರ್ ಕಂಪನಿಯು ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗುತ್ತಿದೆ. ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ನಂತರ ಮತ್ತೆ ಯಾವುದೇ ಇವಿಗಳನ್ನು ಬಿಡುಗಡೆ ಮಾಡಲು ಮುಂದಾಗದಿರುವ ಟಿವಿಎಸ್ ಕಂಪನಿಯು ಸಹಭಾಗಿತ್ವ ಕಂಪನಿಯ ಬ್ಯಾಡ್ಜ್‌ನೊಂದಿಗೆ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಗೆ ಸಿದ್ದತೆ ನಡೆಸುತ್ತಿವೆ. ಟಿವಿಎಸ್ ಕಂಪನಿಯು ಸಹ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ವಾಯು ಮಾಲಿನ್ಯವನ್ನುಂಟು ಮಾಡುತ್ತಿರುವ ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ಬಳಕೆಯನ್ನು ತಗ್ಗಿಸಿ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ವಾಯು ಮಾಲಿನ್ಯಕ್ಕೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿದೆ TVS Motor ಕಂಪನಿ

ವಾಹನ ಸವಾರರನ್ನು ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ತನ್ನ ಫೇಮ್ 2 ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡುತ್ತಿದೆ. ಕೇಂದ್ರ ಸರ್ಕಾರದ ಜೊತೆಗೆ ಹಲವು ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡುತ್ತಿವೆ.

Most Read Articles

Kannada
English summary
Tvs motor to invest rs 1200 crore for electric vehicles details
Story first published: Wednesday, November 24, 2021, 12:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X