ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಟಿವಿಎಸ್ ಮೋಟಾರ್

ಎಥರ್ 450 ಎಕ್ಸ್ ಎಲೆಕ್ಟ್ರಿಕ್ ಸ್ಕೂಟರಿಗೆ ಪೈಪೋಟಿ ನೀಡಲು ಟಿವಿಎಸ್ ಮೋಟಾರ್ ಕಂಪನಿಯು ಕ್ರಯಾನ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಶೀಘ್ರದಲ್ಲಿಯೇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಯಾಗಿದೆ.

ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಟಿವಿಎಸ್ ಮೋಟಾರ್

ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಗಳಲ್ಲಿ ಒಂದಾದ ತಮಿಳುನಾಡು ಮೂಲದ ಟಿವಿಎಸ್ ಮೋಟಾರ್ ಕಂಪನಿಯು ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾದ ಕ್ರಯಾನ್ ಅನ್ನು ಬಿಡುಗಡೆಗೊಳಿಸಲು ಕೆಲವು ದಿನಗಳಿಂದ ಸಿದ್ದತೆ ನಡೆಸಿದೆ.

ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಟಿವಿಎಸ್ ಮೋಟಾರ್

ಟಿವಿಎಸ್ ಕಂಪನಿಯು ರೂ.1,000 ಕೋಟಿ ಹೂಡಿಕೆಯೊಂದಿಗೆ ತನ್ನ ಎಲೆಕ್ಟ್ರಿಕ್ ವಾಹನ ವಿಭಾಗವನ್ನು ಬಲಪಡಿಸಲು ಮುಂದಾಗಿದೆ. ಕ್ರಯಾನ್ ಎಲೆಕ್ಟ್ರಿಕ್ ಸ್ಕೂಟರ್ ಕಾನ್ಸೆಪ್ಟ್ ಮಾದರಿಯನ್ನು ಮೊದಲ ಬಾರಿಗೆ 2018 ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿತ್ತು.

ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಟಿವಿಎಸ್ ಮೋಟಾರ್

ಈಗ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ, ಟಿವಿಎಸ್ ಕ್ರಯಾನ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು 2022ರ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಉತ್ಪಾದನಾ ಮಾದರಿಯು 2018 ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ಕಾನ್ಸೆಪ್ಟ್ ಮಾದರಿಯಂತೆ ಕಾಣುವುದಿಲ್ಲವಾದರೂ, ಕಾನ್ಸೆಪ್ಟ್ ಮಾದರಿಯ ಮೇಲೆ ಆಧಾರಿತವಾಗಿದೆ.

ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಟಿವಿಎಸ್ ಮೋಟಾರ್

ಈ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಅತ್ಯಾಧುನಿಕ ಟೆಕ್ನಾಲಜಿ ಹಾಗೂ ಕನೆಕ್ಟೆಡ್ ಟೆಕ್ನಾಲಜಿ ಫೀಚರ್'ಗಳನ್ನು ಹೊಂದಿರಲಿದೆ. ಇತರ ಟಿವಿಎಸ್ ವಾಹನಗಳಂತೆ,ಕ್ರಯಾನ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಸಹ ಹೊಸೂರಿನ ಟಿವಿಎಸ್ ಉತ್ಪಾದನಾ ಘಟಕದಲ್ಲಿ ಉತ್ಪಾದಿಸಲಾಗುತ್ತದೆ.

ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಟಿವಿಎಸ್ ಮೋಟಾರ್

ಕ್ರಯಾನ್ ಎಲೆಕ್ಟ್ರಿಕ್ ಸ್ಕೂಟರಿನ ವಿನ್ಯಾಸದಲ್ಲಿ ಸುಮಾರು 500 ಎಂಜಿನಿಯರ್‌ಗಳು ತೊಡಗಿಸಿಕೊಂಡಿದ್ದಾರೆ. 2018 ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡಿದ್ದ ಟಿವಿಎಸ್ ಕ್ರಯಾನ್‌ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ 12 ಕಿ.ವ್ಯಾ ಲಿಥಿಯಂ ಐರನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿತ್ತು.

ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಟಿವಿಎಸ್ ಮೋಟಾರ್

5.1 ಸೆಕೆಂಡುಗಳಲ್ಲಿ 0 - 60 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುವ ಕ್ರಯಾನ್‌ ಸ್ಕೂಟರಿನಲ್ಲಿ ಫಾಸ್ಟ್ ಚಾರ್ಜರ್'ಗಳನ್ನು ನೀಡಲಾಗಿದೆ. ಫಾಸ್ಟ್ ಚಾರ್ಜಿಂಗ್ ಸಿಸ್ಟಂ ಬಳಸಿಕೊಂಡು ಈ ಸ್ಕೂಟರಿನಲ್ಲಿರುವ ಬ್ಯಾಟರಿಯನ್ನು 1 ಗಂಟೆಯಲ್ಲಿ 80% ನಷ್ಟು ಚಾರ್ಜ್ ಮಾಡಬಹುದು ಎಂದು ಆಟೋ ಎಕ್ಸ್‌ಪೋದಲ್ಲಿ ಹೇಳಲಾಗಿತ್ತು.

ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಟಿವಿಎಸ್ ಮೋಟಾರ್

ಅಲ್ಲದೆ, ಈ ಎಲೆಕ್ಟ್ರಿಕ್ ಸ್ಕೂಟರ್ ಪೂರ್ತಿಯಾಗಿ ಚಾರ್ಜ್ ಆದ ನಂತರ 80 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಟಿವಿಎಸ್ ಕಂಪನಿ ತಿಳಿಸಿದೆ. ಟಿವಿಎಸ್ ಕಂಪನಿಯ ಐಕ್ಯೂ ಎಲೆಕ್ಟ್ರಿಕ್ ಸ್ಕೂಟರ್ ಇತರ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗಿಂತ ಹೆಚ್ಚು ಪ್ರೀಮಿಯಂ ಅಂಶಗಳನ್ನು ಹೊಂದಿದೆ.

ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಟಿವಿಎಸ್ ಮೋಟಾರ್

ಕ್ರಯಾನ್ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ಐಕ್ಯೂ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆಗಿಂತ ದುಬಾರಿಯಾಗಿರಲಿದೆ ಎಂದು ಹೇಳಲಾಗಿದೆ. ಟಿವಿಎಸ್ ಕ್ರಯಾನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾದ ನಂತರ ಎಥರ್ 450 ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್‌ಗೆ ಪೈಪೋಟಿ ನೀಡಲಿದೆ.

Most Read Articles

Kannada
English summary
TVS Motor to launch its new electric scooter in India soon. Read in Kannada.
Story first published: Monday, July 19, 2021, 20:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X