Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 5 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್
ಟಿವಿಎಸ್ ಮೋಟಾರ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ 2021ರ ಜನವರಿ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಟಿವಿಎಸ್ ಕಂಪನಿಯು ಒಟ್ಟು 307,149 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

2020ರ ಜನವರಿ ತಿಂಗಳಿನಲ್ಲಿ ಟಿವಿಎಸ್ ಕಂಪನಿಯು 234,920 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟವನ್ನು ಶೇ.31 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 2020ರ ಜನವರಿ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮಾತ್ರ ದ್ವಿಚಕ್ರ ವಾಹನಗಳ 205,216 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಕಳೆದ ವರ್ಷದ ಜನವರಿ ತಿಂಗಳಲ್ಲಿ ಭಾರತದಲ್ಲಿ ಮಾತ್ರ ದ್ವಿಚಕ್ರ ವಾಹನಗಳ 163,007 ಯುನಿಟ್‌ಗಳನ್ನು ಮಾತ್ರ ಮಾರಾಟಗೊಳಿಸಿತ್ತು.

ದೇಶೀಯ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.26 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಟಿವಿಎಸ್ ಕಂಪನಿಯು ಕಳೆದ ತಿಂಗಳು 98,319 ಸ್ಕೂಟರ್‌ಗಳನ್ನು ಮಾರಾಟಗೊಳಿಸಿವೆ. ಟಿವಿಎಸ್ ಸ್ಕೂಟರ್ ವಿಭಾಗದ ಮಾರಾಟದಲ್ಲಿಯು ಬೆಳವಣಿಗೆಯನ್ನು ಸಾಧಿಸಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಟಿವಿಎಸ್ ಮೋಟಾರ್ ಕಂಪನಿಯು ಕಳೆದ ತಿಂಗಳು 100,926 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಇನ್ನು ಕಳೆದ ವರ್ಷದ ಜನವರಿ ತಿಂಗಳಿನಲ್ಲಿ ಟಿವಿಎಸ್ 70,784 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ರಫ್ತಿನಲ್ಲಿ ಟಿವಿಎಸ್ ಶೇ.43 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ

72ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಟಿವಿಎಸ್ ಮೋಟಾರ್ ಕಂಪನಿಯು ಒನ್ ನೇಷನ್ ಡಿಫರೆಂಟ್ ಯೂನಿಫಾರಂ ಅಭಿಯಾನವನ್ನು ಇತ್ತೀಚೆಗೆ ಆರಂಭಿಸಿದೆ. ಈ ಅಭಿಯಾನದಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲು ಕಂಪನಿಯು ಪ್ಯಾನ್ ಇಂಡಿಯಾ ರೈಡ್ ಆಯೋಜಿಸಲಾಗಿದೆ.
MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಈ ಅಭಿಯಾನದಲ್ಲಿ ಬೆಂಗಳೂರಿನ 24 ವರ್ಷದ ಶ್ರೀ ವಿಷ್ಣು ಎಸ್ ಎಂಬುವವರು 6 ತಿಂಗಳಲ್ಲಿ ದೇಶಾದ್ಯಂತ ಪ್ರಯಾಣಿಸಲಿದ್ದಾರೆ. ಈ ರ‍್ಯಾಲಿಯಲ್ಲಿ ಶ್ರೀ ವಿಷ್ಣು ದೇಶದ 28 ರಾಜ್ಯಗಳ ಎಲ್ಲಾ ಜಿಲ್ಲೆಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳ ಮೂಲಕ 40,000 ಕಿ.ಮೀ ಪ್ರಯಾಣಿಸಲಿದ್ದಾರೆ.

ಇನ್ನು ಟಿವಿಎಸ್ ಮೋಟಾರ್ ಕಂಪನಿ ತನ್ನ ಎಕ್ಸ್‌ಎಲ್100 ವಿನ್ನರ್ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿದೆ. ಈ ಹೊಸ ಟಿವಿಎಸ್ ಎಕ್ಸ್‌ಎಲ್100 ವಿನ್ನರ್ ಎಡಿಷನ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.49,599 ಗಳಾಗಿದೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಇನ್ನು ಕಳೆದ ವರ್ಷ ಇದರ ಹೆವಿ ಡ್ಯೂಟಿ ರೂಪಾಂತವನ್ನು ಬಿಡುಗಡೆಗೊಳಿಸಿತ್ತು. ಇದೀಗ ಟಿವಿಎಸ್ ಎಕ್ಸ್‌ಎಲ್100 ಮೊಪೆಡ್ ವಿನ ವಿನ್ನರ್ ಎಡಿಷನ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ವಿನ್ನರ್ ಎಡಿಷನ್ ಪ್ರಾರಂಭಿಸುವುದರೊಂದಿಗೆ ಡ್ಯಾಪರ್ ಅನ್ನು ಕೂಡ ಪಡೆದುಕೊಂಡಿದೆ.

ಟಿವಿಎಸ್ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಮತ್ತು ರಫ್ತಿನಲ್ಲಿಯು ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಟಿವಿಎಸ್ ಕಂಪನಿಯ ಅಪಾಚೆ ಸರಣಿಯ ಬೈಕುಗಳು ಮಾರಾಟದಲ್ಲಿ ಕಂಪನಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿದೆ.