ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್

ಟಿವಿಎಸ್ ಮೋಟಾರ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ 2021ರ ಜನವರಿ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಟಿವಿಎಸ್ ಕಂಪನಿಯು ಒಟ್ಟು 307,149 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್

2020ರ ಜನವರಿ ತಿಂಗಳಿನಲ್ಲಿ ಟಿವಿಎಸ್ ಕಂಪನಿಯು 234,920 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟವನ್ನು ಶೇ.31 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 2020ರ ಜನವರಿ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮಾತ್ರ ದ್ವಿಚಕ್ರ ವಾಹನಗಳ 205,216 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಕಳೆದ ವರ್ಷದ ಜನವರಿ ತಿಂಗಳಲ್ಲಿ ಭಾರತದಲ್ಲಿ ಮಾತ್ರ ದ್ವಿಚಕ್ರ ವಾಹನಗಳ 163,007 ಯುನಿಟ್‌ಗಳನ್ನು ಮಾತ್ರ ಮಾರಾಟಗೊಳಿಸಿತ್ತು.

ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್

ದೇಶೀಯ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.26 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಟಿವಿಎಸ್ ಕಂಪನಿಯು ಕಳೆದ ತಿಂಗಳು 98,319 ಸ್ಕೂಟರ್‌ಗಳನ್ನು ಮಾರಾಟಗೊಳಿಸಿವೆ. ಟಿವಿಎಸ್ ಸ್ಕೂಟರ್ ವಿಭಾಗದ ಮಾರಾಟದಲ್ಲಿಯು ಬೆಳವಣಿಗೆಯನ್ನು ಸಾಧಿಸಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್

ಟಿವಿಎಸ್ ಮೋಟಾರ್ ಕಂಪನಿಯು ಕಳೆದ ತಿಂಗಳು 100,926 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಇನ್ನು ಕಳೆದ ವರ್ಷದ ಜನವರಿ ತಿಂಗಳಿನಲ್ಲಿ ಟಿವಿಎಸ್ 70,784 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ರಫ್ತಿನಲ್ಲಿ ಟಿವಿಎಸ್ ಶೇ.43 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ

ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್

72ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಟಿವಿಎಸ್ ಮೋಟಾರ್ ಕಂಪನಿಯು ಒನ್ ನೇಷನ್ ಡಿಫರೆಂಟ್ ಯೂನಿಫಾರಂ ಅಭಿಯಾನವನ್ನು ಇತ್ತೀಚೆಗೆ ಆರಂಭಿಸಿದೆ. ಈ ಅಭಿಯಾನದಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲು ಕಂಪನಿಯು ಪ್ಯಾನ್ ಇಂಡಿಯಾ ರೈಡ್ ಆಯೋಜಿಸಲಾಗಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್

ಈ ಅಭಿಯಾನದಲ್ಲಿ ಬೆಂಗಳೂರಿನ 24 ವರ್ಷದ ಶ್ರೀ ವಿಷ್ಣು ಎಸ್ ಎಂಬುವವರು 6 ತಿಂಗಳಲ್ಲಿ ದೇಶಾದ್ಯಂತ ಪ್ರಯಾಣಿಸಲಿದ್ದಾರೆ. ಈ ರ‍್ಯಾಲಿಯಲ್ಲಿ ಶ್ರೀ ವಿಷ್ಣು ದೇಶದ 28 ರಾಜ್ಯಗಳ ಎಲ್ಲಾ ಜಿಲ್ಲೆಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳ ಮೂಲಕ 40,000 ಕಿ.ಮೀ ಪ್ರಯಾಣಿಸಲಿದ್ದಾರೆ.

ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್

ಇನ್ನು ಟಿವಿಎಸ್ ಮೋಟಾರ್ ಕಂಪನಿ ತನ್ನ ಎಕ್ಸ್‌ಎಲ್100 ವಿನ್ನರ್ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿದೆ. ಈ ಹೊಸ ಟಿವಿಎಸ್ ಎಕ್ಸ್‌ಎಲ್100 ವಿನ್ನರ್ ಎಡಿಷನ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.49,599 ಗಳಾಗಿದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್

ಇನ್ನು ಕಳೆದ ವರ್ಷ ಇದರ ಹೆವಿ ಡ್ಯೂಟಿ ರೂಪಾಂತವನ್ನು ಬಿಡುಗಡೆಗೊಳಿಸಿತ್ತು. ಇದೀಗ ಟಿವಿಎಸ್ ಎಕ್ಸ್‌ಎಲ್100 ಮೊಪೆಡ್ ವಿನ ವಿನ್ನರ್ ಎಡಿಷನ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ವಿನ್ನರ್ ಎಡಿಷನ್ ಪ್ರಾರಂಭಿಸುವುದರೊಂದಿಗೆ ಡ್ಯಾಪರ್ ಅನ್ನು ಕೂಡ ಪಡೆದುಕೊಂಡಿದೆ.

ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್

ಟಿವಿಎಸ್ ಕಂಪನಿಯು ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಮತ್ತು ರಫ್ತಿನಲ್ಲಿಯು ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಟಿವಿಎಸ್ ಕಂಪನಿಯ ಅಪಾಚೆ ಸರಣಿಯ ಬೈಕುಗಳು ಮಾರಾಟದಲ್ಲಿ ಕಂಪನಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿದೆ.

Most Read Articles

Kannada
English summary
TVS Registers 31% Y-o-Y Sales Growth. Read In Kananda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X