ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಟಿವಿಎಸ್ ಮೋಟಾರ್ ಕಂಪನಿಯ ಜನಪ್ರಿಯ ಎನ್‌ಟಾರ್ಕ್ 125 ಸ್ಕೂಟರ್ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಖಲಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್ ಮಾರಾಟದಲ್ಲಿ 1 ಲಕ್ಷ ಯುನಿಟ್ ಗಡಿ ದಾಟಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಟಿವಿಎಸ್ ಮೋಟಾರ್ ಕಂಪನಿಯು ಮೊದಲ ಬಾರಿಗೆ ಎನ್‌ಟಾರ್ಕ್ 125 ಸ್ಕೂಟರ್ ಅನ್ನು 2018ರಲ್ಲಿ ನವೀಕರಿಸಿ ಮತ್ತೆ ಬಿಡುಗಡೆಗೊಳಿಸಿತು. ಈ ಸ್ಕೂಟರ್ ಕನೆಕ್ಟಿವಿಟಿ ಫೀಚರ್ಸ್ ಗಳನ್ನು ಮತ್ತು ಥೋರ್ಟಿ ಎಕ್ಸಾಸ್ಟ್ ನೋಟ್ ನಿಂದ ಸ್ಕೂಟರ್ ಮಾರುಕಟ್ಟೆಯಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆಯಿತು. ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್ ಮಾರಾಟವನ್ನು ದಕ್ಷಿಣ ಏಷ್ಯಾ, ಲ್ಯಾಟಿನ್ ಅಮೆರಿಕ, ಮಧ್ಯಪ್ರಾಚ್ಯ, ಮತ್ತು ಏಷ್ಯಾದ ಮಾರುಕಟ್ಟೆಗಳು ಸೇರಿದಂತೆ 19 ದೇಶಗಳಿಗೆ ವಿಸ್ತರಿಸಲಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದರಲ್ಲಿ 124 ಸಿಸಿ ಫ್ಯೂಯಲ್-ಇಂಜೆಕ್ಟ್ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7000 ಆರ್‌ಪಿಎಂನಲ್ಲಿ 9.1 ಬಿಹೆಚ್‌ಪಿ ಮತ್ತು 5500 ಆರ್‌ಪಿಎಂನ 10.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಸಿವಿಟಿ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಈ ಎನ್‌ಟಾರ್ಕ್ 125 ಸ್ಕೂಟರ್ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಹೊಂದಿದೆ, ಇದು ಕಂಪನಿಯ ಸ್ಮಾರ್ಟ್ ಎಕ್ಸ್ ಕನೆಕ್ಟ್ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಸ್ಮಾರ್ಟ್ ಎಕ್ಸ್ ಕನೆಕ್ಟಿವಿಟಿ ಫೀಚರ್ ಮೂಲಕ ಸ್ಮಾರ್ಟ್ ಫೋನ್ ಅನ್ನು ಬ್ಲೂಟೂತ್ ಮೂಲಕ ಸ್ಕೂಟರ್'ಗೆ ಕನೆಕ್ಟ್ ಮಾಡಿ ಹಲವಾರು ಫೀಚರ್ಸ್ ಗಳನ್ನು ಬಳಸಬಹುದು.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಇದರ ಕ್ಲಸ್ಟರ್ ನ್ಯಾವಿಗೇಷನ್ ಅಸಿಸ್ಟ್, ಟಾಪ್ ಸ್ಪೀಡ್ ರೆಕಾರ್ಡರ್, ಇನ್ ಬಿಲ್ಡ್ ಲ್ಯಾಪ್-ಟೈಮರ್, ಫೋನ್-ಬ್ಯಾಟರಿ ಸಾಮರ್ಥ್ಯ ಪ್ರದರ್ಶನ, ಸರ್ವಿಸ್ ರಿಮೈಂಡರ್, ಟ್ರಿಪ್ ಮೀಟರ್ ಮತ್ತು ಸ್ಟ್ರೀಟ್ ಮತ್ತು ಸ್ಪೋರ್ಟ್‌ನಂತಹ ಮಲ್ಟಿ-ರೈಡ್ ಸ್ಟ್ಯಾಟಿಸ್ಟಿಕ್ ಮೋಡ್‌ಗಳನ್ನು ಪ್ರದರ್ಶಿಸುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಟಿವಿಎಸ್ ಕಂಪನಿಯು ಭಾರತದಲ್ಲಿ ತನ್ನ ಹೊಸ ರೇಸ್-ಎಡಿಷನ್' ಅನ್ನು ಹೊಸ ಬಣ್ಣಗಳ ಆಯ್ಕೆಯನ್ನು ಕಳೆದ ವರ್ಷದಲ್ಲಿ ಬಿಡುಗಡೆಗೊಳಿಸಿತ್ತು. ಹೊಸ ಸ್ಕೂಟರ್‌ನಲ್ಲಿ ಈ ಬಾರಿ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ರೇಸ್ ಎಡಿಷನ್‌ನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್ ಸೇರಿದಂತೆ ಎಕ್ಸಾಸ್ಟ್ ಸಿಸ್ಟಂ ಬದಲಾವಣೆ ಮಾಡಿರುವುದು ಈ ಬಾರಿ ಪ್ರಮುಖ ಆಕರ್ಷಣೆಯಾಗಿದೆ. ರೇಸ್ ಎಡಿಷನ್ ಎನ್‌ಟಾರ್ಕ್ ಸ್ಕೂಟರ್ ಮಾರಾಟವನ್ನು ಹೆಚ್ಚಿಸಲು ಸಹಾಯವಾಗಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಪರ್ಫಾಮೆನ್ಸ್ ಪ್ರಿಯರಿಗಾಗಿ ಎನ್‌ಟಾರ್ಕ್ ರೇಸ್ ಎಡಿಷನ್ ಸಹ ಖರೀದಿಗೆ ಲಭ್ಯವಿದೆ. ಸ್ಟ್ಯಾಂಡರ್ಡ್ ಮಾದರಿಗಿಂತಲೂ ಇದು ಹಲವಾರು ಕಾಸ್ಮೆಟಿಕ್ ಹಾಗೂ ಪ್ರೀಮಿಯಂ ಫೀಚರ್ಸ್ ಅಪ್‌ಡೇಟ್‌ಗಳನ್ನು ಮಾಡಲಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಭಾರತದಲ್ಲಿ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ತೂಕದಲ್ಲಿ ಹೆಚ್ಚಳವಾಗಿದೆ. ಎನ್‌ಟಾರ್ಕ್ 125 ಸ್ಕೂಟರ್ ತೂಕವು 1.9 ಕೆಜಿಯಷ್ಟು ಹೆಚ್ಚಾಗಿದೆ. ಒಟ್ಟು ತೂಕ 118 ಕೆಜಿಯಾಗಿದೆ. ಫ್ಯೂಯಲ್ ಟ್ಯಾಂಕ್ ಸಾಮರ್ಥ್ಯವನ್ನು 5-ಲೀಟರ್‌ನಿಂದ 5.8-ಲೀಟರ್‌ಗೆ ಹೆಚ್ಚಿಸಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಟಿವಿಎಸ್ ಎನ್‌ಟಾರ್ಕ್ 125 ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ 125 ಎಫ್ಐ, ಸುಜುಕಿ ಆಕ್ಸೆಸ್ 125, ಯಮಹಾ ರೇ ಜೆಡ್ಆರ್ 125 ಮತ್ತು ಹೋಂಡಾ ಗ್ರಾಜಿಯಾ ಸ್ಕೂಟರ್ ಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
TVS Ntorq 125 Sales Cross 1 Lakh Units Mark In International Markets. Read In Kannada.
Story first published: Monday, May 17, 2021, 17:43 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X