ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

ಹೊಸ ಹಣಕಾಸಿನ ವರ್ಷದಲ್ಲಿ ಹಲವಾರು ವಾಹನ ಉತ್ಪಾದನಾ ಕಂಪನಿಗಳು ಬೆಲೆ ಏರಿಕೆ ಮಾಡಿದೆ. ಟಿವಿಎಸ್ ಕೂಡ ತನ್ನ ಸ್ಟಾರ್ ಸಿಟಿ ಪ್ಲಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದೆ. ಇದರಿಂದ ದೇಶೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್ ದುಬಾರಿಯಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್ ಡಿಸ್ಕ್ ಮತ್ತು ಡ್ರಮ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಈ ಎರಡು ರೂಪಾಂತರಗಳ ಬೆಲೆಯನ್ನು ರೂ.1,000 ಗಳವರೆಗೆ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯ ಬಳಿಕ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕಿನ ಆರಂಭಿಕ ಬೆಲೆಯು ರೂ.66,865 ಗಳಾಗಿದ್ದರೆ, ಟಾಪ್ ಸ್ಪೆಕ್ ಆದ ಡಿಸ್ಕ್ ರೂಪಾಂತರದ ಬೆಲೆಯು ರೂ.69,465 ಗಳಾಗಿದೆ. ಈ ಎಲ್ಲಾ ಬೆಲೆಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

ಇನ್ನು ಟಿವಿಎಸ್ ಮೋಟಾರ್ ಕಂಪನಿಯು ತನ್ನ 2021ರ ಸ್ಟಾರ್ ಸಿಟಿ ಪ್ಲಸ್ ಬೈಕನ್ನು ಹೊಸ ಡ್ಯುಯಲ್-ಟೋನ್ ಬಣ್ಣದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಇದು ಪರ್ಲ್ ಬ್ಲೂ-ಸಿಲ್ವರ್ ಎಂಬ ಡ್ಯುಯಲ್ ಟೋನ್ ಬಣ್ಣದ ಅಯ್ಕೆಯನ್ನು ಪಡೆದುಕೊಂಡಿದೆ. ಈ ಬೈಕಿನ ಎರಡು ರೂಪಾಂತರಗಳು ಹೊಸ ಡ್ಯುಯಲ್ ಟೋನ್ ಬಣ್ಣದಲ್ಲಿ ಲಭ್ಯವಿರುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ಕಮ್ಯೂಟರ್ ಬೈಕ್‌ಗಳಲ್ಲಿ ಒಂದಾಗಿದೆ. 2021ರ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್ ಇಟಿ-ಫೈ (ಇಕೋ ಥ್ರಸ್ಟ್ ಫ್ಯೂಯಲ್ ಇಂಜೆಕ್ಷನ್), ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಮತ್ತು ಎಲ್‌ಇಡಿ ಹೆಡ್‌ಲ್ಯಾಂಪ್ ಸೆಟಪ್‌ನಂತಹ ಕೆಲವು ಫೀಚರ್ ಗಳನ್ನು ಪಡೆದುಕೊಂಡಿವೆ.

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

2021ರ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕಿನ ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಈ ಬೈಕಿನಲ್ಲಿ ಅದೇ 109ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

ಈ ಎಂಜಿನ್ 8.08 ಬಿಹೆಚ್‍ಪಿ ಪವರ್ ಮತ್ತು 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 4-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಎಂಜಿನ್‌ನಲ್ಲಿನ ಇಟಿ-ಫೈ ತಂತ್ರಜ್ಞಾನವು ಮೊದಲಿಗಿಂತ ಉತ್ತಮ ಪರಿಷ್ಕರಣೆಯನ್ನು ಮತ್ತು ಶೇ.15 ರಷ್ಟು ಸುಧಾರಿತ ಇಂಧನ ದಕ್ಷತೆಯನ್ನು ಒದಗಿಸುತ್ತದೆ.

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

2021ರ ಸ್ಟಾರ್ ಸಿಟಿ ಪ್ಲಸ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಬಹುದಾದ ಶಾಕ್ ಅಬ್ಸಾರ್ಬರ್ ಸೆಟಪ್ ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

2021ರ ಸ್ಟಾರ್ ಸಿಟಿ ಪ್ಲಸ್ ಎಂಟ್ರಿ ಲೆವೆಲ್ ವೆರಿಯೆಂಟ್ ನಲ್ಲಿ ಎರಡು ಕಡೆಗಳಲ್ಲಿ ಡ್ರಮ್ ಬ್ರೇಕ್ ಗಳನ್ನು ನೀಡಲಾಗಿದೆ. ಆದರೆ ಟಾಪ್ ವೆರಿಯೆಂಟ್ ಗಳಲ್ಲಿ ಮುಂಭಾಗದಲ್ಲಿ ರೊಟೊ ಪೆಟಲ್ ಡಿಸ್ಕ್ ಬ್ರೇಕ್‌ಗಳು ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‌ ನೀಡಲಾಗಿದೆ

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬಾರತೀಯ ಮಾರುಕಟ್ಟೆಯಲ್ಲಿ ಎಂಟ್ರಿ ಲೆವೆಲ್ ಕಮ್ಯೂಟರ್ ಬೈಕ್ ಆಗಿದೆ. ಈ ಹೊಸ ಬೈಕ್ ಕೇವಲ 116 ಕೆಜಿ ಕಡಿಮೆ ತೂಕವನ್ನು ಹೊಂದಿದೆ. ಇನ್ನು ಈ ಬೈಕ್ 10-ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು ಹೊಂದಿದೆ.

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

ಇದಲ್ಲದೆ ಈ ಬೈಕಿನಲ್ಲಿ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದು ತುಂಬಾ ಸರಳವಾಗಿದ್ದು, ಸವಾರನಿಗೆ ಇದನ್ನು ಸುಲಭವಾಗಿ ಓದಬಹುದು. ಹೊಸ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಕೈಗೆಟುಕುವ ಮತ್ತು ಅನುಕೂಲಕರ ಪ್ರಯಾಣಿಕರ ವಿಭಾಗದ ಬೈಕ್ ಆಗಿದೆ.

ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್

ಈ ಹೊಸ ಸ್ಟಾರ್ ಸಿಟಿ ಪ್ಲಸ್ ಬೈಕ್ ಉತ್ತಮ ಮೈಲೇಜ್, ಸುಗಮ ಎಂಜಿನ್ ಕಾರ್ಯಕ್ಷಮತೆ ಮತ್ತು ಆರಾಮದಾಯಕ ಸವಾರಿ ಅನುಭವನ್ನು ನೀಡುತ್ತದೆ. ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಎಚ್‌ಎಫ್ ಡಿಲಕ್ಸ್ ಮತ್ತುಹೀರೋ ಸ್ಪ್ಲೆಂಡರ್ ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Tvs Star City Plus Prices Marginally Increased. Read In Kannada.
Story first published: Wednesday, April 14, 2021, 20:37 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X