ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಿವಿಎಸ್ ಮೋಟಾರ್
ಟಿವಿಎಸ್ ಮೋಟಾರ್ ಕಂಪನಿಯು 2020ರ ಡಿಸೆಂಬರ್ ತಿಂಗಳ ತನ್ನ ದ್ವಿಚಕ್ರ ವಾಹನಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. 2020ರ ಡಿಸೆಂಬರ್ ತಿಂಗಳಲ್ಲಿ ಒಟ್ಟು ದ್ವಿಚಕ್ರ ವಾಹನಗಳ 2,58,239 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಇನ್ನು 2019ರ ಡಿಸೆಂಬರ್ ತಿಂಗಳಲ್ಲಿ ಟಿವಿಎಸ್ ಕಂಫನಿಯು ದ್ವಿಚಕ್ರ ವಾಹನಗಳ 2,15,619 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇನ್ನು 2019ರ ಡಿಸೆಂಬರ್ ತಿಂಗಳ ಮಾರಾಟವನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.19 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಟಿವಿಎಸ್ ಕಂಪನಿಯ ದ್ವಿಚಕ್ರ ವಾಹನಗಳ ರಫ್ತಿನಲ್ಲಿಯು ಬೆಳವಣಿಗೆಯನ್ನು ಸಾಧಿಸಿದೆ.

ಟಿವಿಎಸ್ ಮೋಟಾರ್ ಕಂಪನಿ ಸ್ಕೂಟರ್ ಮಾರಾಟದಲ್ಲಿ ಶೇ.4 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳು ಟಿವಿಎಸ್ ಮೋಟಾರ್ ಕಂಪನಿಯು ಸ್ಕೂಟರ್ 77,705 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಟಿವಿಎಸ್ ಮೋಟಾರ್ ಕಂಪನಿಯು 2020ರ ಡಿಸೆಂಬರ್ ತಿಂಗಳಿನಲ್ಲಿ ದ್ವಿಚಕ್ರ ವಾಹನಗಳ 81,327 ಯುನಿಟ್‌ಗಳನ್ನು ರಫ್ತು ಮಾಡಿವೆ. 2019ರ ಡಿಸೆಂಬರ್ ತಿಂಗಳಿನಲ್ಲಿ ದ್ವಿಚಕ್ರ ವಾಹನಗಳ 58,375 ಯುನಿಟ್‌ಗಳನ್ನು .ರಫ್ತು ಮಾಡಲಾಗಿತ್ತು.

ಇನ್ನು ಜೂಪಿಟರ್ ಭಾರತೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಕಂಪನಿಯ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಸ್ಕೂಟರ್ ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಟಿವಿಎಸ್ ಜೂಪಿಟರ್ ಸ್ಕೂಟರ್ 110ಸಿಸಿ ಎಂಜಿನ್‌ನೊಂದಿಗೆ ಮಾತ್ರ ಲಭ್ಯವಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇದೀಗ ಟಿವಿಎಸ್ ಕಂಪನಿಯು 125ಸಿಸಿ ಮಾದರಿಯ ಜೂಪಿಟರ್ ಸ್ಕೂಟರ್ ಅನ್ನು ಅಭಿವೃದ್ದಿ ಪಡಿಸುವುದರಲ್ಲಿ ನಿರತರಾಗಿದ್ದಾರೆ. ಪ್ರಸ್ತುತ ಟಿವಿಎಸ್ ಸರಣಿಯಲ್ಲಿ ಎನ್‌ಟಾರ್ಕ್ ಮಾತ್ರ 125ಸಿಸಿ ಎಂಜಿನ್ ನಲ್ಲಿ ಲಭ್ಯವಿದೆ.

ಹೊಸೂರು ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಟಿವಿಎಸ್ ಮೋಟಾರ್ ಹಲವಾರು ಬೈಕ್ ಗಳನ್ನು ಮಾರಾಟ ಮಾಡುತ್ತದೆ. ಟಿವಿಎಸ್ ಕಂಪನಿಯ ಜನಪ್ರಿಯ ಬೈಕುಗಳಲ್ಲಿ ಅಪಾಚೆ ಸರಣಿಯ ಬೈಕುಗಳು ಸಹ ಸೇರಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಟಿವಿಎಸ್ ಕಂಪನಿಯು ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ತನ್ನ ಬೈಕುಗಳನ್ನು ಮಾರಾಟ ಮಾಡುತ್ತದೆ. ಈಗ ಟಿವಿಎಸ್ ಕಂಪನಿಯು ತನ್ನ ಆರ್‌ಟಿಆರ್ 160 4 ವಿ ಬೈಕ್ ಅನ್ನು ಬಾಂಗ್ಲಾದೇಶದಲ್ಲಿ ಬಿಡುಗಡೆಗೊಳಿಸಿದೆ. ಕಂಪನಿಯು ಈ ಬೈಕ್ ಅನ್ನು ವಿಶೇಷ ತಂತ್ರಜ್ಞಾನದ ಸ್ಮಾರ್ಟ್ ಕನೆಕ್ಟ್ ಫೀಚರ್'ನೊಂದಿಗೆ ಬಿಡುಗಡೆಗೊಳಿಸಿದೆ.

ಟಿವಿಎಸ್ ಮೋಟಾರ್ ಕಂಪನಿಯು ಹೊಸ ವಾಹನಗಳ ಖರೀದಿಯನ್ನು ಮತ್ತಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ ವರ್ಚುವಲ್ ಶೋರೂಂ ಅನ್ನು ಇತ್ತೀಚೆಗೆ ಪ್ರಾರಂಭಿಸಿತ್ತು. ಟಿವಿಎಸ್ ವರ್ಚುವಲ್ ಶೋರೂಂ ಅನ್ನು ಆರೈವ್ ಎಂದು ಕರೆಯಲಾಗಿದೆ.

ಇನ್ನು ಟಿವಿಎಸ್ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಕಂಡಿದೆ. ಟಿವಿಎಸ್ ಕಂಪನಿಯು ಕೆಲವು ಹೊಸ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲಿದೆ. ಈ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸಲು ಟಿವಿಎಸ್ ಪ್ರಯತ್ನಿಸುತ್ತಿದೆ.


Click it and Unblock the Notifications