Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 3 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 5 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 15 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- News
ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; 48 ಲಕ್ಷ ವಾಚ್ ಒಡೆದ ಅಧಿಕಾರಿಗಳು!
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರ ಜನವರಿ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್
ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯು 2021ರ ಜನವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಸುಜುಕಿ ಕಂಪನಿಯು ಭಾರತದಲ್ಲಿ 57,004 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಇನ್ನು ಕಳೆದ ವರ್ಷದ ಜನವರಿ ತಿಂಗಳಿನಲ್ಲಿ ಸುಜುಕಿ ಕಂಪನಿಯು 56,013 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.2 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಸುಜಿಕಿ ಕಂಪನಿಯು ಕಳೆದ ತಿಂಗಳು 7865 ಯುನಿಟ್ ಗಳನ್ನು ರಫ್ತು ಮಾಡಲಾಗಿತ್ತು. ಇನ್ನು ಕಳೆದ ವರ್ಷದ ಜನವರಿ ತಿಂಗಳಿನಲ್ಲಿ 9389 ಯುನಿಟ್‌ಗಳನ್ನು ರಫ್ತು ಮಾಡಾಲಾಗಿತ್ತು.

ರಫ್ತಿನಲ್ಲಿ ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ಶೇ.19.38 ರಷ್ಟು ಕುಸಿತ ಕಂಡಿದೆ. ದೇಶಿಯ ಮಾರುಕಟ್ಟೆಯಲ್ಲಿ ಮಾರಾಟದಲ್ಲಿ ಸಣ್ಣದ ಮಟ್ಟದ ಬೆಳವಣಿಗೆಯನ್ನು ಸಾಧಿಸಿದರೂ ರಫ್ತಿನಲ್ಲಿ ದೊಡ್ಡ ಕುಸಿತವನ್ನು ಕಂಡಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್ಸೈಕಲ್

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದ ಎಂಡಿ ಕೊಯಿಚಿರೊ ಹಿರಾವ್ ಮಾತನಾಡಿ, ಹೊಸ ವರ್ಷದಲ್ಲಿ ದ್ವಿಚಕ್ರ ಮಾರಾಟದಲ್ಲಿ ಆಶಾದಾಯಕ ಬೆಳವಣಿಗೆಯನ್ನು ಸಾಧಿಸಿದ್ದೇವೆ. ದೇಶೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇಕ. 2 ರಷ್ಟು ಬೆಳವಣಿಗೆಯನ್ನು ದಾಖಲಿಸುತ್ತಾ, ಮುಂಬರುವ ವರ್ಷಗಳಲ್ಲಿ ನಾವು ಪ್ರೀಮಿಯಂ ವಿಭಾಗದ ಬೈಕುಗಳಿಹೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ ಎಂದು ಹೇಳಿದರು.

ಇತ್ತೀಗೆ ಸುಜುಕಿ ಮೋಟಾರ್ಸೈಕಲ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಇನ್‌ಟ್ರುಡರ್ ಬೈಕಿನ ಬೆಲೆಯನ್ನು ಹೆಚ್ಚಿಸಿದೆ. ಇದರಿಂದಾಗಿ ಈ ಸುಜುಕಿ ಇನ್‌ಟ್ರುಡರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ತುಸು ದುಬಾರಿಯಾಗಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಸುಜುಕಿ ಈ ಇನ್‌ಟ್ರುಡರ್ ಬೈಕಿನ ಬೆಲೆಯನ್ನು ರೂ.186 ವರೆಗೆ ಹೆಚ್ಚಿಸಿದೆ. ಇದೀಗ ಸುಜುಕಿ ಇನ್‌ಟ್ರುಡರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1,22,327 ಗಳಾಗಿದೆ. ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳಿರುವುದಿಲ್ಲ

ಸುಜುಕಿ ಮೋಟಾರ್ಸೈಕಲ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬ್ರ್ಯಾಂಡ್‌ನ ಜನಪ್ರಿಯ ಬರ್ಗ್‌ಮನ್ ಸ್ಟ್ರೀಟ್ 125 ಮ್ಯಾಕ್ಸಿ-ಸ್ಕೂಟರ್ ಆಧರಿಸಿ ಅಭಿವೃದ್ದಿ ಪಡಿಸಲಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಸುಜುಕಿ ಬರ್ಗ್‌ಮನ್ ಲೆಕ್ಟ್ರಿಕ್ ಸ್ಕೂಟರ್ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಈ ಸ್ಪೈ ಚಿತ್ರದಲ್ಲಿ ಕಂಡುಬಂದತೆ ಹೊಸ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಎಲೆಕ್ಟ್ರಿಕ್ ಸ್ಕೂಟರ್ ಬಹುತೇಕೆ ತನ್ನ ಪೆಟ್ರೋಲ್ ಮಾದರಿಯ ರೀತಿಯಲ್ಲೇ ವಿನ್ಯಾಸವನ್ನು ಹೊಂದಿರಲಿದೆ.

ಸುಜುಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನ ಮಾರಾಟದಲ್ಲಿ ಚೇತರಿಕೆಯನ್ನು ಕಂಡಿದೆ. ಮುಂದಿನ ದಿನಗಳಲ್ಲಿ ಸುಜುಕಿ ಹೊಸ ಮಾದರಿಗಳನ್ನು ಭಾರತದಲ್ಲಿ ಪರಿಚಯಿಸಲಿದೆ. ಇದು ಮಾರಾಟವನ್ನು ಹೆಚ್ಚಿಸಲು ನೆರವಾಗುತ್ತದೆ.