ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಐಷಾರಾಮಿ ದ್ವಿಚಕ್ರ ತಯಾರಕ ಕಂಪನಿಯಾದ BMW Motorrad ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ C 400 GT ಮ್ಯಾಕ್ಸಿ-ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಆಗಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಇದೀಗ ಬಿಎಂಡಬ್ಲ್ಯು ಕಂಪನಿಯು ತನ್ನ ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಹೊಸ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಭಾರತದಲ್ಲಿ ಬಿಎಂಡಬ್ಲ್ಯು ಮೊಟೊರಾಡ್‌ನ ಮೊದಲ ಮ್ಯಾಕ್ಸಿ-ಸ್ಕೂಟರ್ ಆಗಿದ್ದು, ಇದು 349 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್‌ನಿಂದ ನಡೆಸಲ್ಪಡುವ ಪ್ರೀಮಿಯಂ ಮ್ಯಾಕ್ಸಿ-ಸ್ಕೂಟರ್ ಆಗಿ ಸ್ಥಾನ ಪಡೆಯಲಿದೆ. ಈ ಮ್ಯಾಕ್ಸಿ-ಸ್ಕೂಟರ್ ಪ್ರೀಮಿಯಂ ಬೆಲೆಯನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸುತ್ತೇವೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಈ ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭವಾಗಿದೆ. ಈ ಹೊಸ BMW C 400 GT ಮ್ಯಾಕ್ಸಿ-ಸ್ಕೂಟರ್ ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತವನ್ನು ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು, ಭಾರತದಲ್ಲಿ ಮುಂದಿನ ದಿನಗಳಲ್ಲಿ ಸ್ಕೂಟರ್ ಬೆಲೆಯನ್ನು ಕಂಪನಿಯು ಪ್ರಕಟಿಸುವ ಸಾಧ್ಯತೆಯಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಜಾಗತಿಕ ಪೋರ್ಟ್ಫೋಲಿಯೊದಲ್ಲಿರುವ ಕಂಪನಿಯ ಸಿ 400 ಜಿಟಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. ದೊಡ್ಡ ಬದಲಾವಣೆಗಳಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ. ಬಿಎಂಡಬ್ಲ್ಯು ಸಿ 400 ಜಿಟಿ ಮಿಡ್ ಸೈಜ್ ಸ್ಕೂಟರ್ ಆರಾಮದಾಯಕವಾದ ಮಾದರಿಯಾಗಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಜಾಗತಿಕವಾಗಿ ಮಾರಾಟವಾಗುವ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ ಸ್ಕೂಟರ್ ನಲ್ಲಿ 350 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್‌ ಅನ್ನು ಹೊಂದಿದೆ, ಈ ಎಂಜಿನ್ ಎಂಜಿನ್‌ನೊಂದಿಗೆ ಹೊಸ 'ಇ-ಗ್ಯಾಸ್' ತಂತ್ರಜ್ಞಾನದಿಂದ (ನವೀಕರಿಸಿದ ಥ್ರೊಟಲ್-ಬೈ-ವೈರ್ ಸಿಸ್ಟಂ) ಪ್ರಯೋಜನವನ್ನು ಕೂಡ ಒಳಗೊಂಡಿದೆ

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಈ ಸ್ಕೂಟರ್ ನಲ್ಲಿ ಆಕ್ಸಿಜನ್ ಸೆನ್ಸರ್ ಮತ್ತು ನವೀಕರಿಸಿದ ಎಕ್ಸಾಸ್ಟ್ ಸಿಸ್ಟಂ ಸಹ ಹೊಂದಿದೆ. ಈ ಎಲ್ಲಾ ನವೀಕರಣಗಳು ಯುರೋ5 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿದೆ. ಇನ್ನು ಈ ಎಂಜಿನ್ 7.55 ಆರ್‌ಪಿಎಂನಲ್ಲಿ 33.5 ಬಿಹೆಚ್‍ಪಿ ಪವರ್ ಮತ್ತು 5,750 ಆರ್‌ಪಿಎಂನಲ್ಲಿ 139 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಸ್ಕೂಟರ್ 139 ಕಿಲೋಮೀಟರ್ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಹೊಸ ಬಿಎಂಡಬ್ಲ್ಯು ಮ್ಯಾಕ್ಸಿ ಸ್ಕೂಟರ್ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ನೀಡಲಾಗಿದೆ. ಇದರೊಂದಿಗೆ ಹೊಸ ಕ್ಲಚ್ ಸ್ಪ್ರಿಂಗ್‌ಗಳೊಂದಿಗೆ ನವೀಕರಿಸಲಾಗಿದೆ. ಇನ್ನು ಈ ಮ್ಯಾಕ್ಸಿ-ಸ್ಕೂಟರ್ ಆಲ್ಪೈನ್ ವೈಟ್, ಮೂನ್ವಾಲ್ಕ್‌ಗ್ರೇ ಮೆಟಾಲಿಕ್ ಮತ್ತು ಬ್ಲಾಕ್‌ಸ್ಟಾರ್ಮ್ ಮೆಟಾಲಿಕ್ ಎಂಬ ಮೂರು ಬಣ್ಣಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ನಲ್ಲಿ ಎಲ್‌ಇಡಿ ಲೈಟಿಂಗ್ ಸಿಸ್ಟಂ, ಸ್ಪೋರ್ಟಿ ವಿ-ಆಕಾರದ ಟ್ರಿಮ್ ಪ್ಯಾನಲ್ ಯುನಿಟ್ ಗಳು, ದೊಡ್ಡ-ಸ್ವರೂಪದ ವಿಂಡ್‌ಸ್ಕ್ರೀನ್, ಏರೋಡೈನಾಮಿಕ್ ವಿನ್ಯಾಸಗೊಳಿಸಲಾದ ಸೀಟ್ ಮತ್ತು ಹೆಚ್ಚಿನವು ಇದರ ಕೆಲವು ಪ್ರಮುಖ ಲಕ್ಷಣಗಳಾಗಿವೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಇತ್ತೀಚೆಗೆ ನವೀಕರಿಸಿದ ಮಾದರಿಯು ಹೊಸ ಬ್ರೇಕ್‌ಗಳು ಮತ್ತು ಪರಿಷ್ಕೃತ ಆಟೋಮ್ಯಾಟಿಕ್ ಸ್ಟಿಬಿಲಿಟಿ ಕಂಟ್ರೋಲ್ (ಎಎಸ್‌ಸಿ) ಯೊಂದಿಗೆ ಬರುತ್ತದೆ. ಎರಡನೆಯದು ಲೋಡ್ ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಕೂಡ ಒಳಗೊಂಡಿರುತ್ತದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಇನ್ನು ಬಿಎಂಡಬ್ಲ್ಯು ಮೊಟೊರಾಡ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಬಿಎಂಡಬ್ಲ್ಯು ಜಿ 310 ಜಿಎಸ್ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ, ಇದೀಗ ಬಿಎಂಡಬ್ಲ್ಯು ಕಂಪನಿಯು ಭಾರತದಲ್ಲಿ ಈ ಹೊಸ ಜಿ 310 ಜಿಎಸ್ ಬೈಕಿನ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದೆ. ಈ 2022ರ ಜಿ 310 ಜಿಎಸ್ ಬೈಕ್ ಟ್ರಿಪಲ್ ಬ್ಲಾಕ್. ಎಂಬ ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ, ಇತ್ತೀಚೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ 2022ರ ಜಿ 310 ಜಿಎಸ್ ಬೈಕ್ ಟ್ರಿಪಲ್ ಬ್ಲ್ಯಾಕ್ ಎಂಬ ಹೊಸ ಬಣ್ಣವನ್ನು ಪಡೆದುಕೊಂಡಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಈ ಬೈಕಿನಲ್ಲಿ ಹೊಸ ಬಣ್ಣದ ಆಯ್ಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಭಾರತದಲ್ಲಿ ಬಿಡುಗಡೆಯಾಗಲಿರುವ 2022ರ ಜಿ 310 ಜಿಎಸ್ ಬೈಕ್ ಕೂಡ ಹೊಸ ಬಣ್ಣದ ಆಯ್ಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲ. ಈ ಜಿ 310 ಜಿಎಸ್ ಬಿಎಂಡಬ್ಲ್ಯು ಮೋಟರ್‌ರಾಡ್‌ನ ಸಣ್ಣ ವಿಭಾಗದಲ್ಲಿ ಸಾಕಷ್ಟು ಜನಪ್ರಿಯ ಕೊಡುಗೆಯಾಗಿದೆ. ಈ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನಲ್ಲಿ ಹೊಸ ಹೆಡ್‌ಲೈಟ್ ಹೊಂದಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ BMW C 400 GT ಮ್ಯಾಕ್ಸಿ-ಸ್ಕೂಟರ್

ಭಾರತದಲ್ಲಿ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,6 ಲಕ್ಷಕ್ಕೆ ಬಿಡುಗಡೆಗೊಳಿಸಬಹುದು ಎಂದು ಅಂದಾಜಿಸಲಾಗಿದೆ. ಮುಂಬರುವ ದಿನಗಳಲ್ಲಿ ಬಿಎಂಡಬ್ಲ್ಯು ಮ್ಯಾಕ್ಸಿ ಸ್ಕೂಟರ್ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಲಿದೆ, ಅಲ್ಲದೇ ಈ ಹೊಸ ಬಿಎಂಡಬ್ಲ್ಯು ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಬಹುದು ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Wednesday, September 22, 2021, 12:33 [IST]
English summary
Upcoming new bmw c 400 gt maxi scooter new teaser video released details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+