ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್‌ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಬಾರತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು 350ಸಿಸಿಯಿಂದ 650ಸಿಸಿ ವರೆಗಿನ ಬೈಕ್‌ಗಳನ್ನು ಬಿಡುಗಡೆಗೊಳಿಸಲಿದೆ. ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಹೊಸ ಬೈಕ್‌ಗಳ ಪರಿಚಯಿಸುವ ಮೂಲಕ ಮಾರಾಟದ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಬೈಕ್‌ಗಳ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

2021ರ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350

2021ರ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಹೊಸ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಹೊಸ ಕ್ಲಾಸಿಕ್ 350 ವೃತ್ತಾಕಾರದ ಹೆಡ್‌ಲ್ಯಾಂಪ್, ಫ್ಲ್ಯಾಟ್ ಫ್ಯೂಯಲ್ ಟ್ಯಾಂಕ್, ದುಂಡಗಿನ ಆಕಾರದ ಹಿಂಭಾಗದ ರೇರ್ ಮೀರರ್ಸ್, ಸಿಂಗಲ್ ಸೀಟ್ ಮತ್ತು ಅಪ್‌ಸ್ವೆಪ್ಟ್ ಕ್ರೋಮ್-ಲೇಪಿತ ಎಕ್ಸಾಸ್ಟ್ ಸೇರಿದಂತೆ ಮೂಲ ರೆಟ್ರೊ ವಿನ್ಯಾಸ ಅಂಶಗಳನ್ನು ಉಳಿಸಿಕೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಹೊಸ ಮಾದರಿ ಸಿಂಗಲ್ ಮತ್ತು ಡ್ಯುಯಲ್ ಸೀಟ್ ಆಯ್ಕೆಗಳೊಂದಿಗೆ ಲಭ್ಯವಿರುತ್ತದೆ. ಫುಟ್ ಪೆಗ್‌ಗಳನ್ನು ಮಧ್ಯದಲ್ಲಿ ಅಳವಡಿಸಲಾಗಿದೆ ಮತ್ತು ಹ್ಯಾಂಡಲ್‌ಬಾರ್‌ಗಳು ಮೊದಲಿಗಿಂತ ಚಿಕ್ಕದಾಗಿರುತ್ತವೆ. ಈ ಬೈಕ್ ಈಗ ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ, ಈ ಹೊಸ ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಈಗ ಅನಲಾಗ್ ಸ್ಪೀಡೋಮೀಟರ್ ಕೆಳಗೆ ಸಣ್ಣ ಡಿಜಿಟಲ್ ಡಿಸ್ ಪ್ಲೇಯನ್ನು ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಈ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಪ್ಲಾಟ್‌ಫಾರ್ಮ್ ಮತ್ತು ಎಂಜಿನ್ ಸೆಟಪ್‌ನಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗುತ್ತದೆ. ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕನ್ನು ಹೊಸ ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ನಲ್ಲಿ ತಯಾರಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಈ ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ ಅಸ್ತಿತ್ವದಲ್ಲಿರುವ ಪ್ಲಾಟ್‌ಫಾರ್ಮ್‌ಗಿಂತ ಹಗುರವಾಗಿರುತ್ತದೆ, ಇನ್ನು 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ ಹೊಸ 349ಸಿಸಿ, ಸುಧಾರಿತ ಎಸ್‌ಒಹೆಚ್‌ಸಿ ಕಾನ್ಫಿಗರೇಶನ್‌ನೊಂದಿಗೆ ಸಿಂಗಲ್ ಸಿಲಿಂಡರ್ ಫ್ಯೂಯಲ್ ಇಂಜೆಕ್ಟ್ ಎಂಜಿನ್ ಅನ್ನು ಹೊಂದಿರುತ್ತದೆ. ಈ 349ಸಿಸಿ ಎಂಜಿನ್ 20.2 ಬಿಹೆಚ್‌ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ರಾಯಲ್ ಎನ್‍ಫೀಲ್ಡ್ ಸ್ಕ್ರಾಮ್ 411

ರಾಯಲ್ ಎನ್‍ಫೀಲ್ಡ್ ತನ್ನ ಹಿಮಾಲಯನ್ ಅಡ್ವೆಂಚರ್ ಬೈಕಿನ ಹೊಸ ವೆರಿಯೆಂಟ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಬೈಕನ್ನು ರಾಯಲ್ ಎನ್‍ಫೀಲ್ಡ್ ಸ್ಕ್ರಾಮ್ 411 ಎಂದು ಕರೆಯಬಹುದು ಎಂದು ಹೇಳಲಾಗುತ್ತಿದೆ. ಹಿಮಾಲಯನ್ ಬೈಕಿನ ಆನ್-ರೋಡ್-ರೋಡ್ ಆಧಾರಿತ ಹೊಸ ವೆರಿಯೆಂಟ್ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಹಿಮಾಲಯನ್ ಬೈಕಿನ ಹೊಸ ವೆರಿಯೆಂಟ್ ಸ್ಪಾಟ್ ಟೆಸ್ಟ್ ಅನ್ನು ನಡೆಸುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಸ್ಪೈ ಚಿತ್ರದಲ್ಲಿ ಸಣ್ಣ ಮುಂಭಾಗದ ವ್ಹೀಲ್, ಮುಂಭಾಗದ ಜೆರ್ರಿ-ಕ್ಯಾನ್ ಹೋಲ್ಡರ್ ಫ್ರೇಮ್ ಕಾಣುವುದಿಲ್ಲ, ಫೋರ್ಕ್ ಗೇಟರ್ಸ್, ಎತ್ತರದ ವಿಂಡ್‌ಸ್ಕ್ರೀನ್ ಮತ್ತು ಮುಂಭಾಗದ ಮಡ್‌ಗಾರ್ಡ್ ಅನ್ನು ಒಳಗೊಂಡಿದೆ. ಇನ್ನು ಮುಂಭಾಗದ ಫ್ರೇಮ್ ಬದಲಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಈ ಬದಲಾವಣೆಗಳ ಹೊರತಾಗಿ, ಹೊಸ ಹಿಮಾಲಯದ ಬೈಕಿನ ಅಡ್ವೆಂಚರ್ ಆವೃತ್ತಿಯಿಂದ ತನ್ನ ಮೆಕ್ಯಾನಿಕಲ್ ಮತ್ತು ಇತರ ಟ್ರಿಮ್‌ಗಳನ್ನು ಎರವಲು ಪಡೆಯುತ್ತದೆ. ಇನ್ನು ಆನ್-ರೋಡ್ ಆಧಾರಿತ ಮಾದರಿಯಲ್ಲಿ ಎಕ್ಸಾಸ್ಟ್ ಮತ್ತು ಎತ್ತರ ಹ್ಯಾಂಡಲ್‌ಬಾರ್‌ನೊಂದಿಗೆ ನೇರವಾಗಿ ಕುಳಿತುಕೊಳ್ಳುವಂತಹ ಸೀಟ್ ಪೋಷಿಸನ್ ಅನ್ನು ಹೊಂದಿದೆ. ಉಳಿದಂತೆ ಹಿಮಾಲಯದ ಬೈಕಿನ ಹೊಸ ವೆರಿಯೆಂಟ್ ಬಗ್ಗೆ ಇತರ ಮಾಹಿತಿಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ರಾಯಲ್ ಎನ್‌ಫೀಲ್ಡ್ ಹಂಟರ್ 350

ರಾಯಲ್ ಎನ್‍ಫೀಲ್ಡ್ ತನ್ನ ಹೊಸ ಹಂಟರ್ 350 ಎಂಬ ಹೆಸರಿನ ರೋಡ್‌ಸ್ಟರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಬ್ರ್ಯಾಂಡ್‌ನ 350ಸಿಸಿ ವಿಭಾಗದಲ್ಲಿ ಇರಿಸಲಾಗುತ್ತದೆ.ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕನ್ನು ಬ್ರ್ಯಾಂಡ್‌ನ ಹೊಸ ಜೆ-ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಈ ಬೈಕಿನ ವೃತಕಾರದ ಹೆಡ್‌ಲ್ಯಾಂಪ್, ಟೈಲ್‌ಲ್ಯಾಂಪ್ ಮತ್ತು ಟರ್ನ್ ಸಿಗ್ನಲ್ ಇಂಡಿಗೇಟರ್ ಗಳನ್ನು ಒಳಗೊಂಡಿವೆ. ಇದರ ವೃತ್ತಾಕಾರದ ಹೆಡ್‌ಲ್ಯಾಂಪ್ ಕ್ಲಸ್ಟರ್ ಸಂಯೋಜಿತ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸ್ಕಲಪಡಡ್ ಫ್ಯೂಯಲ್ ಟ್ಯಾಂಕ್, ಮೆತ್ತನೆಯ ಸ್ಪ್ಲಿಟ್-ಸೀಟುಗಳು, ವಿಶಾಲವಾದ ಹ್ಯಾಂಡಲ್‌ಬಾರ್, ಅಪ್-ಸ್ವಿಪ್ಟ್ ಎಕ್ಸಾಸ್ಟ್ ಮತ್ತು ಸೈಡ್ ಕವರ್‌ಗಳನ್ನು ಮಿಟಿಯೊರ್ 350 ಬೈಕಿನಲ್ಲಿರುವಂತೆ ಇದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಇನ್ನು ಈ ಬೈಕಿನಲ್ಲಿ ಸಣ್ಣ-ಸಿಂಗಲ್-ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಕೂಡ ಗಮನಿಸಬಹುದು. ಇನ್ನು ಈ ಹೊಸ ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರಲಿದೆ. ಇನ್ನು ಈ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನಲ್ಲಿ ಮಿಟಿಯೊರ್ 350 ಮಾದರಿಯಲ್ಲಿರುವ ಅದೇ ಎಂಜಿನ್ ಅನ್ನು ಅಳವಡಿಸಬಹುದು, ಇದು ಹೊಸ ಎಸ್‌ಒಹೆಚ್‌ಸಿ 349ಸಿಸಿ ಸಿಂಗಲ್ ಸಿಲಿಂಡರ್ ಏರ್-ಆಯಿಲ್ ಕೂಲ್ಡ್ ಎಸ್‌ಒಹೆಚ್‌ಸಿ ಎಂಜಿನ್ ಆಗಿರುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ರಾಯಲ್ ಎನ್‌ಫೀಲ್ಡ್ 650ಸಿಸಿ ಬೈಕ್‍ಗಳು

ರಾಯಲ್ ಎನ್‌ಫೀಲ್ಡ್ ಎರಡು 650ಸಿಸಿ ಬೈಕ್‍ಗಳನ್ನು ಪರೀಕ್ಷಿಸುತ್ತಿದೆ. ಅವುಗಳಲ್ಲಿ ಒಂದು ಕಡಿಮೆ ಸ್ಲಂಗ್ ಕ್ರೂಸರ್ ಮತ್ತು ಇನ್ನೊಂದು ಹೆಚ್ಚು ಸಾಂಪ್ರದಾಯಿಕ ಶೈಲಿಯ ಬೈಕ್ ಆಗಿರುತ್ತದೆ. ಈ ಎರಡು ಬೈಕ್‍ಗಳಲ್ಲಿ 650 ಸಿಸಿ ಕ್ರೂಸರ್‌ಗೆ ಮಿಟಿಯೊರ್ ಎಂದು ಮತ್ತು ಇನ್ನೊಂದನ್ನು ಕ್ಲಾಸಿಕ್ 650 ಎಂದು ಹೆಸರಿಡಬಹುದು ಎಂದು ಈ ಹಿಂದೆ ವರದಿಗಳಾಗಿತ್ತು.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಈ ಎರಡು ಬೈಕ್‍ಗಳಲ್ಲಿ ಕಾಂಟಿನೆಂಟಲ್ ಜಿಟಿ 650 ಮತ್ತು ಇಂಟರ್‌ಸೆಪ್ಟರ್ 650 ಬೈಕ್‍ಗಳಲ್ಲಿರುವ ಒಂದೇ 648 ಸಿಸಿ, ಏರ್/ಆಯಿಲ್-ಕೂಲ್ಡ್, ಪ್ಯಾರೆಲಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 47.65 ಬಿಹೆಚ್‌ಪಿ ಪವರ್ ಮತ್ತು 52 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿರುತ್ತದೆ. ಇದರಲ್ಲಿ ರಾಯಲ್ ಎನ್‍ಫೀಲ್ಡ್ 650ಸಿಸಿ ಕ್ರೂಸರ್ ಬೈಕ್ 2018ರ ಇಐಸಿಎಂಎ ನಲ್ಲಿ ಪ್ರದರ್ಶಿಸಲಾದ ಕೆಎಕ್ಸ್ ಬಾಬರ್ ಕಾನ್ಸೆಪ್ಟ್‌ಗೆ ಹೋಲುತ್ತದೆ. ಇದರ ಬಗ್ಗೆ ಇತರ ಮಾಹಿತಿಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ,

Most Read Articles

Kannada
English summary
Upcoming new royal enfield bikes in india details
Story first published: Saturday, August 7, 2021, 10:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X