ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

TVS Motor ಕಂಪನಿಯು ತನ್ನ ಜನಪ್ರಿಯ 2021ರ Apache RR 310 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ TVS Apache RR 310 ಬೈಕ್ ಹೊಸ ನವೀಕರರಣಗಳೊಂದಿಗೆ ಭಾರತೀಯ ಮಾರುಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

TVS Motor ಕಂಪನಿಯು ಈ ಹೊಸ Apache RR 310 ಬೈಕನ್ನು ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಯೋಜಿಸಿತ್ತು. ಆದರೆ ಎರಡನೇ ಕರೋನಾ ಅಲೆಯ ಆತಂಕದಿಂದ ವಿಳಂಬವಾಯಿತು. ಇದೀಗ TVS Motor ಕಂಪನಿಯು ಆಗಸ್ಟ್ 30 ರಂದು ಚೆನ್ನೈನ ಮದ್ರಾಸ್ ಮೋಟಾರ್ ರೇಸ್ ಟ್ರ್ಯಾಕ್ (MMRT) ನಲ್ಲಿ ಹೊಸ ಮಾದರಿಯ ಬಿಡುಗಡೆಗೊಳಿಸಲಿದೆ ಎಂದು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದೆ. 2021ರ TVS Apache RR 310 ಬೈಕ್ ಕೆಲವು ಬದಲಾವಣೆಗಳನ್ನು ಪಡೆಯುವ ಸಾಧ್ಯತೆಯಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

ಈ ಬೈಕಿನ ಒಟ್ಟಾರೆ ಸವಾರಿ ಗುಣಮಟ್ಟವನ್ನು ಸುಧಾರಿಸುತ್ತದೆ. ಆದರೆ ಹೊಸ ಬೈಕಿನ ನವೀಕರಣಗಳ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಿಲ್ಲ.ಇನ್ನು ಕಂಪನಿಯು ಕಳೆದ ಬಾರಿ ಬಿಡುಗಡೆಗೊಳಿಸಿದ ಟೀಸರ್ ಚಿತ್ರದಲ್ಲಿ ವಿನ್ಯಾಸಗೊಳಿಸಲಾದ ರೀತಿಯ ಹೆಡ್‌ಲ್ಯಾಂಪ್‌ನೊಂದಿಗೆ ಬರಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

ಇನ್ನು ಈ ಬೈಕಿನಲ್ಲಿ ಕೆಲವು ಹೊಸ ಫೀಚರ್ ಗಳನ್ನು ಮತ್ತು ಹೊಸ ಬಣ್ಣಗಳ ಆಯ್ಕೆಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿದೆ. ಈ Apache RR 310 ಬೈಕಿನಲ್ಲಿ ಅದೇ 312 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್‌ ಅನ್ನು ಹೊಂದಿರುತ್ತದೆ. ಈ ಎಂಜಿನ್ 33.5 ಬಿಹೆಚ್‍ಪಿ ಪವರ್ ಮತ್ತು 27.3 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

TVS Apache RR 310 ಬೈಕಿನಲ್ಲಿ ಟಿವಿಎಸ್ ಸ್ಮಾರ್ಟ್ ತಂತ್ರಜ್ಞಾನ, ಥ್ರೊಟಲ್-ಬೈ-ವೈರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಫೀಚರ್ ಗಳನ್ನು ಹೊಂದಿರಲಿದೆ. ಈ TVS Apache RR 310 ಬೈಕಿನಲ್ಲಿ 5-ಇಂಚಿನ ಟಿಎಫ್‌ಟಿ ಕಲರ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಕೂಡ ಒಳಗೊಂಡಿದೆ. ಈ ಬೈಕಿನಲ್ಲಿ ಮೈಕೆಲಿನ್ ರೋಡ್5 ಟಯರುಗಳನ್ನು ಹೊಂದಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

ಈ ಬೈಕಿನಲ್ಲಿ ರೈನ್, ಅರ್ಬನ್, ಸ್ಪೋರ್ಟ್ ಮತ್ತು ಟ್ರ್ಯಾಕ್ ಎಂಬ ನಾಲ್ಕು ರೈಡಿಂಗ್ ಮೋಡ್ ಗಳನ್ನು ಒಳಗೊಂಡಿಡೆ. ಈ ಬೈಕ್ 2.93 ಸೆಕೆಂಡುಗಳಲ್ಲಿ 60 ಕಿ.ಮೀ ವೇಗವನ್ನು ಪಡೆದುಕೊಳುತ್ತದೆ. ಇನ್ನು 0 ದಿಂದ 100 ಕಿ.ಮೀ ವೇಗವನ್ನು ಪಡೆಯಲು ಈ ಬೈಕ್ 7.17 ಸೆಕೆಂಡುಗಳನ್ನು ತೆಗೆದುಕೊಳ್ಳುತ್ತದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

ಬೈಕಿನ ಫೀಚರ್ ಗಳನ್ನು ಇದರ ಹಿಂದಿನ ಮಾದರಿಗೆ ಹೋಲಿಸಿದರೆ, ಕೆಲವು ಹೊಸ ಫೀಚರ್ ಗಳನ್ನು ನೀಡಬಹುದು. ಈ ಬೈಕಿನಲ್ಲಿ ಆರ್‌ಟಿ-ಸ್ಲಿಪ್ಪರ್ ಕ್ಲಚ್, ಬೈ-ಎಲ್ಇಡಿ ಟ್ವಿನ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆರ್‌ಟಿ-ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಹೊಂದಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

2021ರ TVS Apache RR 310 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಯುಎಸ್ಡಿ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿರುತ್ತದೆ. ಈ ಸಸ್ಪೆಂಕ್ಷನ್ ಸೆಟಪ್ ಬದಲಾವಣೆ ಗಳಾಗುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

ಇನ್ನು ಸುರಕ್ಷತೆಯಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಹೊಸ Apache RR 310 ಬೈಕಿನ ಮುಂಭಾಗದ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಹೊಂದಿರುತ್ತದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗುತ್ತದೆ

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

TVS ಕಂಪನಿಯು ತನ್ನ ಬಿಎಸ್6 Ntorq 125 ಸ್ಕೂಟರನ್ನು ನೇಪಾಳದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಟಿವಿಎಸ್ Ntorq 125 ಸ್ಕೂಟರ್ ಐದು ರೂಪಾಂತರಗಳಲ್ಲಿ ಬಿಡುಗಡಯಾಗಿದೆ. ನೇಪಾಳದಲ್ಲಿ ಹೊಸ TVS Ntorq 125 ಸ್ಕೂಟರ್ ಡ್ರಮ್, ಡಿಸ್ಕ್, ರೇಸ್ ಎಡಿಷನ್, ರೇಸ್ ಎಡಿಷನ್ ಬಿಎಸ್6 ಎಫ್‌ಐ ಮತ್ತು ಸೂಪರ್‌ಸ್ಕ್ವಾಡ್ ಎಡಿಷನ್ ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿರುತ್ತದೆ. Ntorq 125 ಸ್ಕೂಟರ್ ಕನೆಕ್ಟಿವಿಟಿ ಫೀಚರ್ಸ್ ಗಳನ್ನು ಮತ್ತು ಥೋರ್ಟಿ ಎಕ್ಸಾಸ್ಟ್ ನೋಟ್ ನಿಂದ ಸ್ಕೂಟರ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆಯಿತು.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

TVS Ntorq 125 ಸ್ಕೂಟರ್ ಮಾರಾಟವನ್ನು ದಕ್ಷಿಣ ಏಷ್ಯಾ, ಲ್ಯಾಟಿನ್ ಅಮೆರಿಕ. ಮಧ್ಯಪ್ರಾಚ್ಯ ಮತ್ತು ಏಷ್ಯಾದ ಮಾರುಕಟ್ಟೆಗಳು ಸೇರಿದಂತೆ ಹಲವು ದೇಶಗಳಿಗೆ ವಿಸ್ತರಿಸಲಾಗಿದೆ. ಈ ಬಿಎಸ್6 TVS Ntorq 125 ಸ್ಕೂಟರ್ ರೇಸ್-ಟ್ಯೂನ್ಡ್ ಮತ್ತು ಫ್ಯೂಯಲ್ ಇಂಜೆಕ್ಟಡ್ 124.8 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 7,000 ಆರ್‌ಪಿಎಂನಲ್ಲಿ 9.1 ಬಿಹೆಚ್‌ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 10.5 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ TVS Apache RR 310 ಬೈಕ್

2021ರ TVS Apache RR 310 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ ಬಳಿಕ ಕೆಟಿಎಂ ಆರ್‍‍ಸಿ 390, ಯಮಹಾ ಆರ್3 ಮತ್ತು ಕವಾಸಕಿ ನಿಂಜಾ 400 ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ. ಒಟ್ಟಿನಲ್ಲಿ ಹೊಸ ಬದಲಾವಣೆಗಳೊಂದಿಗೆ 2021ರ TVS Apache RR 310 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಪ್ರವೇಶಿಸಲಿದೆ.

Most Read Articles

Kannada
English summary
Updated 2021 tvs apache rr310 to be launch on august 30 in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X