ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ವಿಶ್ವಾದ್ಯಂತ ದಿನೇ ದಿನೇ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಪರಿಸರ ಸ್ನೇಹಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ನಾರ್ವೆ ಸೇರಿದಂತೆ ಯುರೋಪಿನ ಹಲವು ದೇಶಗಳಲ್ಲಿ 2030ರ ವೇಳೆಗೆ ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಭಾರತದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಫೇಮ್ 2ನಂತಹ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡಲಾಗುತ್ತಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಇನ್ನು ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ವಾಹನ ತಯಾರಕ ಕಂಪನಿಗಳು ಮಾತ್ರವಲ್ಲದೇ ಸೆಲ್ ಫೋನ್ ತಯಾರಕ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸಲು ಮುಂದಾಗಿವೆ.ಇತ್ತೀಚಿಗಷ್ಟೇ ಲೆನೊವೊ ಕಂಪನಿಯು ತನ್ನ ಸ್ಕೂಟರ್ ಮಾದರಿಯ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಿತ್ತು.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಈ ಹಿಂದೆ ಆಪಲ್, ಫಾಕ್ಸ್‌ಕಾನ್ ಹಾಗೂ ಹುವೈ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿರುವ ಬಗ್ಗೆ ವರದಿಯಾಗಿತ್ತು. ಈಗ ಜನಪ್ರಿಯ ಮೊಬೈಲ್ ಫೋನ್ ತಯಾರಕ ಕಂಪನಿಯಾದ ಕ್ಸಿಯೋಮಿ ಕೂಡ ಎಲೆಕ್ಟ್ರಿಕ್ ವಾಹನ ಉತ್ಪಾದನೆಗೆ ಮುಂದಾಗಿರುವ ಬಗ್ಗೆ ವರದಿಯಾಗಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಕೆಲವು ದಿನಗಳಿಂದ ಸಣ್ಣ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುತ್ತಿರುವ ಕಂಪನಿಯು ಈಗ ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿರುವ ಬಗ್ಗೆ ವರದಿಯಾಗಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ಕ್ಸಿಯೋಮಿ ಕಂಪನಿಯು ಗ್ರೇಟ್ ವಾಲ್ ಮೋಟಾರ್ ಕಂಪನಿಯ ವಾಹನ ಉತ್ಪಾದನಾ ಘಟಕವನ್ನು ಬಳಸಲಿದೆ. ಕಂಪನಿಯು ತನ್ನದೇ ಆದ ಬ್ರಾಂಡ್ ಹೆಸರಿನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಈ ಘಟಕದಲ್ಲಿ ಉತ್ಪಾದಿಸಲು ನಿರ್ಧರಿಸಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಕ್ಸಿಯೋಮಿ ವಿಶ್ವದ ಅತಿದೊಡ್ಡ ಸೆಲ್ ಫೋನ್ ತಯಾರಕ ಕಂಪನಿಗಳಲ್ಲಿ ಒಂದಾಗಿದೆ. ಕಂಪನಿಯು ಸೆಲ್ ಫೋನ್'ಗಳ ರೀತಿಯಲ್ಲಿಯೇ ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನವನ್ನು ಉತ್ಪಾದಿಸಲು ಮುಂದಾಗಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಈ ಸುದ್ದಿಯು ಕಂಪನಿಯ ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಕಂಪನಿಯು ಹೈ ಎಂಡ್ ಹ್ಯಾಂಡ್‌ಸೆಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತದೆ. ಕಂಪನಿಯು ತನ್ನ ಎಲೆಕ್ಟ್ರಿಕ್ ವಾಹನಗಳನ್ನು ಸಹ ಕಡಿಮೆ ಬೆಲೆಗೆ ಮಾರಾಟ ಮಾಡುವ ನಿರೀಕ್ಷೆಗಳಿವೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಈ ಕಾರಣಕ್ಕೆ ಕ್ಸಿಯೋಮಿಯ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಾರ್ಯಾಚರಣೆಗಳು ಜನರ ಗಮನ ಸೆಳೆಯುತ್ತಿವೆ. ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ವಾಹನವನ್ನು 2023ರಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ತನ್ನ ಎಲೆಕ್ಟ್ರಿಕ್ ವಾಹನದಲ್ಲಿ ವಿವಿಧ ವಿಶೇಷ ತಂತ್ರಜ್ಞಾನ ಸೌಲಭ್ಯಗಳನ್ನು ನೀಡುವುದಾಗಿ ಕಂಪನಿ ತಿಳಿಸಿದೆ. ಕ್ಸಿಯೋಮಿ ಕಂಪನಿಯು ಬೃಹತ್ ವಾಹನ ಉತ್ಪಾದನೆಯನ್ನು ಆರಂಭಿಸಲಿರುವ ಕಾರಣಕ್ಕೆ ಗ್ರೇಟ್ ವಾಲ್ ಮೋಟಾರ್ಸ್‌ನ ವಾಹನ ಉತ್ಪಾದನಾ ಘಟಕವನ್ನು ತನ್ನ ವಾಹನಗಳ ಉತ್ಪಾದನೆಗಾಗಿ ಬಳಸಲಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಕ್ಸಿಯೋಮಿ ಕಂಪನಿಯ ಪ್ರವೇಶವು ಭಾರೀ ಪರಿಣಾಮವನ್ನು ಬೀರಲಿದೆ ಎಂದು ನಿರೀಕ್ಷಿಸಲಾಗಿದೆ. ಕಂಪನಿಯ ಸೆಲ್ ಫೋನ್'ಗಳು ಮೊಬೈಲ್ ಮಾರುಕಟ್ಟೆಯಲ್ಲಿ ತಮ್ಮದೇ ಆದ ಪ್ರಾಬಲ್ಯವನ್ನು ಸಾಧಿಸಿವೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾದ ಖ್ಯಾತ ಮೊಬೈಲ್ ತಯಾರಕ ಕಂಪನಿ

ಕಡಿಮೆ ವೆಚ್ಚದ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವ ಮೂಲಕ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿಯೂ ಇದೇ ರೀತಿಯ ಪ್ರಾಬಲ್ಯವನ್ನು ಹೊಂದುವ ಸಾಧ್ಯತೆಗಳಿವೆ. ಕ್ಸಿಯೋಮಿ ಕಂಪನಿಯು ಸೆಲ್ ಫೋನ್ ಮಾತ್ರವಲ್ಲದೆ ಸ್ಮಾರ್ಟ್ ವಾಚ್, ಏರ್ ಪ್ಯೂರಿಫೈಯರ್, ಎಲ್ಇಡಿ ಟಿವಿ, ಪ್ರೊಜೆಕ್ಟರ್, ವ್ಯಾಕ್ಯೂಮ್ ಕ್ಲೀನರ್, ಬ್ಲೂಟೂತ್ ಸ್ಪೀಕರ್, ಇಂಟರ್'ನೆಟ್ ರೌಟರ್, ಇಯರ್ ಫೋನ್, ಇಯರ್ ಬಡ್, ಎಲ್ಇಡಿ ಲೈಟ್ ಬಲ್ಬ್ ಸೇರಿದಂತೆ ಹಲವಾರು ಉತ್ಪನ್ನಗಳನ್ನು ಮಾರಾಟ ಮಾಡುತ್ತದೆ.

Most Read Articles

Kannada
English summary
Xiaomi to launch electric vehicles by 2023. Read in Kannada.
Story first published: Monday, March 29, 2021, 9:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X