ಲಾಕ್‌ಡೌನ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ವಾರಂಟಿ ವಿಸ್ತರಿಸಿದ ಯಮಹಾ

ಕೋವಿಡ್‌ ಹೆಚ್ಚಳದಿಂದಾಗಿ ವಿವಿಧ ರಾಜ್ಯಗಳಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದು, ಲಾಕ್‌ಡೌನ್ ಅವಧಿಯಲ್ಲಿ ಕೊನೆಗೊಳ್ಳಲಿರುವ ವಾಹನಗಳ ವಾರಂಟಿ ಅವಧಿಯನ್ನು ಬಹುತೇಕ ವಾಹನಗಳ ಕಂಪನಿಗಳು ವಿಸ್ತರಣೆ ಮಾಡಿ ಅಧಿಕೃತ ಮಾಹಿತಿ ಹಂಚಿಕೊಂಡಿವೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ವಾರಂಟಿ ವಿಸ್ತರಿಸಿದ ಯಮಹಾ

ಲಾಕ್‌ಡೌನ್ ಅವಧಿಯಲ್ಲೇ ಕೊನೆಗೊಂಡಿರುವ ವಿವಿಧ ದ್ವಿಚಕ್ರಗಳ ವಾಹನಗಳ ವಾರಂಟಿ ಅವಧಿಯ ಕುರಿತಾಗಿ ಸ್ಪಷ್ಟನೆ ನೀಡಿರುವ ಯಮಹಾ ಕಂಪನಿಯು ವಾರಂಟಿ ಅವಧಿಯನ್ನು ಮುಂದಿನ ಒಂದು ತಿಂಗಳ ಕಾಲ ವಿಸ್ತರಣೆ ಮಾಡಿದ್ದು, ವಾರಂಟಿ ಜೊತೆ ಉಚಿತ ಸೇವಾ ಆಫರ್‌ಗಳನ್ನು, ಪಾವತಿಸಲಾದ ಸೇವೆಗಳನ್ನು ಮುಂದಿನ ಒಂದು ತಿಂಗಳಿನಲ್ಲಿ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಹೇಳಿಕೊಂಡಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ವಾರಂಟಿ ವಿಸ್ತರಿಸಿದ ಯಮಹಾ

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳಬೇಕಿರುವ ಹೊಸ ವಾಹನ ವಾರಂಟಿ ಅವಧಿಯನ್ನು ಜೂನ್ 30ರ ತನಕ ಮುಂದೂಡಲಾಗಿದ್ದು, ಲಾಕ್‌ಡೌನ್ ಸಂದರ್ಭದಲ್ಲೇ ಮುಕ್ತಾಯಗೊಳ್ಳಲಿದ್ದ ವಾರಂಟಿ ಸೇವೆಗಳನ್ನು ಪಡೆದುಕೊಳ್ಳುವುದು ಹೇಗೆ ಎಂಬ ಗೊಂದಲದಲ್ಲಿದ್ದ ಗ್ರಾಹಕರಿಗೆ ಯಮಹಾ ಕಂಪನಿಯು ಸಿಹಿಸುದ್ದಿ ನೀಡಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ವಾರಂಟಿ ವಿಸ್ತರಿಸಿದ ಯಮಹಾ

ವಾರಂಟಿ ಅವಧಿ ವಿಸ್ತರಣೆಯಾಗಿರುವುದರಿಂದ ವಾರಂಟಿ ಪ್ಯಾಕೇಜ್‌ನಲ್ಲಿರುವ ವಿವಿಧ ಸೇವೆಗಳನ್ನು ಪರಿಸ್ಥಿತಿ ತುಸು ಸುಧಾರಣೆಗೊಂಡ ನಂತರ ಪಡೆದುಕೊಳ್ಳಬಹುದಾಗಿದ್ದು, ವಾರಂಟಿ ಅವಧಿಯನ್ನು ವಿಸ್ತರಿಸಿರುವುದು ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ವಾರಂಟಿ ವಿಸ್ತರಿಸಿದ ಯಮಹಾ

ಇನ್ನು ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮ ಕೈಗೊಂಡು ಉತ್ಪಾದನೆಯನ್ನು ಕೈಗೊಳ್ಳಲಾಗುತ್ತಿದೆ. ಆದರೆ ಉದ್ಯೋಗಿಗಳ ಆರೋಗ್ಯದ ದೃಷ್ಠಿಯಿಂದ ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉತ್ಪಾದನೆ ಕೈಗೊಳ್ಳುತ್ತಿದ್ದರೆ ಇನ್ನು ಕೆಲವು ವಾಹನ ಕಂಪನಿಗಳು ವಾಹನ ಉತ್ಪಾದನೆಯನ್ನು ಸಂಪೂರ್ಣವಾಗಿ ಬಂದ್ ಮಾಡಿವೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ವಾರಂಟಿ ವಿಸ್ತರಿಸಿದ ಯಮಹಾ

ಯಮಹಾ ಇಂಡಿಯಾ ಕಂಪನಿಯು ಕೂಡಾ ಕೋವಿಡ್ ಪರಿಣಾಮ ಈ ತಿಂಗಳು 15ರಿಂದ 15 ದಿನಗಳ ಕಾಲ ಉತ್ಪಾದನೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿಕೊಂಡಿದ್ದು, ತಮಿಳುನಾಡಿನಲ್ಲಿರುವ ಕಾಂಚೀಪುರಂ ಘಟಕ ಮತ್ತು ರಾಜಸ್ಥಾನದಲ್ಲಿ ಸುರಜ್‌ಪುರ್ ಘಟಕವನ್ನು ಮುಂದಿನ ಆದೇಶದ ತನಕ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಲಾಕ್‌ಡೌನ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ವಾರಂಟಿ ವಿಸ್ತರಿಸಿದ ಯಮಹಾ

ವಾಹನ ಉತ್ಪಾದನೆಯನ್ನು ಸ್ಥಗಿತಗೊಳಿಸಿದರೂ ವಾಹನ ಖರೀದಿ ಪ್ರಕ್ರಿಯೆ ಎಂದಿನಂತೆ ಮುಂದುವರಿಯಲಿದ್ದು, ಪರಿಸ್ಥಿತಿಗೆ ಅನುಗುಣವಾಗಿ ವಾಹನ ವಿತರಣೆ ಪ್ರಕ್ರಿಯೆಯನ್ನು ಕೈಗೊಳ್ಳಲಿರುವ ಡೀಲರ್ಸ್ ಸಾಧ್ಯವಿರುವ ಕಡೆಗಳಲ್ಲಿ ಗ್ರಾಹಕರ ಸೇವೆಗಳನ್ನು ಹೊಸ ಸುರಕ್ಷಾ ಮಾರ್ಗಸೂಚಿಗಳೊಂದಿಗೆ ಸೇವೆ ಕೈಗೊಳ್ಳಲು ನಿರ್ಧರಿಸಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ವಾರಂಟಿ ವಿಸ್ತರಿಸಿದ ಯಮಹಾ

ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿದ್ದರೂ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನಕ್ಕೆ ಬಹಳಷ್ಟು ಅಡಚಣೆ ಎದುರಾಗುತ್ತಿದ್ದು, ವಾಹನಗಳ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಲಾಕ್‌ಡೌನ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ವಾರಂಟಿ ವಿಸ್ತರಿಸಿದ ಯಮಹಾ

ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಮಾಡಿದ ಹೊಸ ಪ್ರಯತ್ನವು ಇಂದು ಸಾಕಷ್ಟು ಪ್ರಯೋಜಕಾರಿಯಾಗಿದೆ.

Most Read Articles

Kannada
Read more on ಯಮಹಾ yamaha
English summary
Yamaha announced to extend bike service and warranty till 30th June. Read in Kannada.
Story first published: Friday, May 14, 2021, 1:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X