ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಯಮಹಾ ತನ್ನ ಹೊಸ 2021ರ ಕ್ವಾರ್ಟರ್ ಲೀಟರ್ ಫೇರ್ ಬೈಕ್ ಆದ ವೈಝಡ್ಎಫ್-ಆರ್25 ಅನ್ನು ಮಲೇಷ್ಯಾ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. 2021ರ ಯಮಹಾ ವೈಝಡ್ಎಫ್-ಆರ್25 ಬೈಕ್ ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್

2021ರ ಯಮಹಾ ವೈಝಡ್ಎಫ್-ಆರ್25 ಬೈಕನ್ನು ಅದರ ಹಿಂದಿನ ಮಾದರಿಗೆ ಹೋಲಿಸಿದ ಹೊಸ ಬಣ್ಣದ ಆಯ್ಜೆಯನ್ನು ಹೊರತುಪಡಿಸಿ ಉಳಿದ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಈ ಯಮಹಾ ವೈಝಡ್ಎಫ್-ಆರ್25 ಬೈಕ್ ಹೊಸ ಸಯಾನ್ ಮೆಟಾಲಿಕ್ ಎಂಬ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ. ಇನ್ನು ಈ ಬೈಕಿನ ಬಾಡಿ ಪ್ಯಾನೆಲ್‌ಗಳಲ್ಲಿನ ಸ್ಟಿಕ್ಕರ್‌ಗಳಿಗೆ ಹೋಲಿಕೆಯಾಗುವಂತೆ ಅಲಾಯ್ ವ್ಹೀಲ್ ಗಳಿಗೂ ಅರೇಂಜ್ ಬಣ್ಣವನ್ನು ನೀಡಿದ್ದಾರೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್

ಈ ಯಮಹಾ ವೈಝಡ್ಎಫ್-ಆರ್25 ಬೈಕಿನಲ್ಲಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಇನ್ನು ಈ ವೈಝಡ್ಎಫ್-ಆರ್25 ಬೈಕಿನಲ್ಲಿ ಅದೇ ಟ್ವಿನ್-ಪಾಡ್ ಎಲ್ಇಡಿ ಹೆಡ್ ಲೈಟ್ ಸೆಟಪ್ ಅನ್ನು ಹೊಂದಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್

ಇನ್ನು ಈ 2021ರ ಯಮಹಾ ವೈಝಡ್ಎಫ್-ಆರ್25 ಬೈಕಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಫೇರಿಂಗ್ ಮೌಂಟೆಡ್ ರಿಯರ್-ವ್ಯೂ ಮಿರರ್ಸ್, ಮಸ್ಕಲರ್ ಫ್ಯೂಯಲ್ ಟ್ಯಾಂಕ್ ಮತ್ತು ಸ್ಪ್ಲಿಟ್-ಸ್ಟೈಲ್ ಸೀಟುಗಳನ್ನು ಹೊಂದಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್

ಇದರೊಂದಿಗೆ ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳು ಮತ್ತು ಎಲ್ಇಡಿ ಟೈಲ್‌ಲೈಟ್. ಹಾರ್ಡ್‌ವೇರ್ ಸೆಟಪ್ ಅನ್ನು ಒಳಗೊಂಡಿದೆ. ಇನ್ನು ಉಳಿದಂತೆ ಹಿಂದಿನ ಮಾದರಿಯಲ್ಲಿದ್ದ ಎಲ್ಲಾ ಫೀಚರ್ ಗಳನ್ನು ಇದರಲ್ಲಿಯು ನೋಡಬಹುದಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್

2021ರ ಯಮಹಾ ವೈಝಡ್ಎಫ್-ಆರ್25 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್

ಇನ್ನು 2021ರ ಯಮಹಾ ವೈಝಡ್ಎಫ್-ಆರ್25 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ನೋಡುವುದಾದರೆ, ಎರಡು ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಎಬಿಎಸ್ ಅನ್ನು ಕೂಡ ನೀಡಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್

ಬೈಕಿನ ಹೃದಯ ಭಾಗ ಎಂದೇ ಹೇಳುವ ಎಂಜಿನ್ ಬಗ್ಗೆ ಹೇಳುವುದಾದರೆ, 2021ರ ಯಮಹಾ ವೈಝಡ್ಎಫ್-ಆರ್25 ಬೈಕಿನಲ್ಲಿ 249ಸಿಸಿ ಪ್ಯಾರಲೆಲ್ ಟ್ವಿನ್ ಲಿಕ್ವಿಡ್-ಕೋಲ್ಡ್‍ ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್

ಈ ಎಂಜಿನ್ 12,000 ಆರ್‌ಪಿಎಂನಲ್ಲಿ 35 ಬಿಹೆಚ್‌ಪಿ ಪವರ್ ಮತ್ತು 10,000 ಆರ್‌ಪಿಎಂನಲ್ಲಿ 22.6 ಎನ್ಎಂ ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಶೀಘ್ರದಲ್ಲೇ ಯಮಹಾ ಕಂಪನಿಯು ಮಲೇಷ್ಯಾದಲ್ಲಿ ವೈಝಡ್ಎಫ್-ಆರ್25 ಬೈಕಿನ ಬೆಲೆಯನ್ನು ಘೋಷಿಸುತ್ತಾರೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

Most Read Articles

Kannada
Read more on ಯಮಹಾ yamaha
English summary
2021 Yamaha YZF-R25 Announced For Malaysia. Read In Kannada.
Story first published: Tuesday, January 26, 2021, 13:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X