ಆರ್ 15 ಬೈಕಿನ ಎಂಜಿನ್‌ನೊಂದಿಗೆ ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಯಮಹಾ ಮ್ಯಾಕ್ಸಿ ಸ್ಕೂಟರ್

ಯಮಹಾ ಕಂಪನಿಯು ತನ್ನ ಪ್ರಮುಖ ಎನ್‍‍ಮ್ಯಾಕ್ಸ್ 155 ಸ್ಕೂಟರ್ ಅನ್ನು ಹೊಸ ಬಣ್ಣ ಆಯ್ಕೆಯಲ್ಲಿ ಇಂಡೋನೇಷ್ಯಾದಲ್ಲಿ ಪರಿಚಯಿಸಿದೆ. ಈ ಮ್ಯಾಕ್ಸಿ-ಸ್ಕೂಟರ್ ಹೊಸ ಪ್ರೆಸ್ಟೀಜ್ ಸಿಲ್ವರ್ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಯಮಹಾ ಮ್ಯಾಕ್ಸಿ ಸ್ಕೂಟರ್

ಹೊಸ ಯಮಹಾ ಎನ್‍‍ಮ್ಯಾಕ್ಸ್ 155 ಮ್ಯಾಕ್ಸಿ ಸ್ಕೂಟರ್ ಮ್ಯಾಟ್ ಸಿಲ್ವರ್, ಗ್ಲೋಸ್ ಬ್ಲ್ಯಾಕ್ ಬಣ್ಣದ ಫಿನಿಶಿಂಗ್ ಬಾಡಿವರ್ಕ್ ಜೊತೆಗೆ ಬ್ರಷ್ಡ್ ಗೋಲ್ಡ್ ಬಣ್ಣದ ಫಿನಿಶಿಂಗ್ ಅಲಾಯ್ ವ್ಹೀಲ್‌ಗಳನ್ನು ಪಡೆಯುತ್ತದೆ, ಈ ಹೊಸ ಹೊಸ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯು ಮ್ಯಾಕ್ಸಿ-ಸ್ಕೂಟರ್ ಅನ್ನು ಇನ್ನಷ್ಟು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ. ಮ್ಯಾಕ್ಸಿ ಸ್ಕೂಟರ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಯಮಹಾ ಮ್ಯಾಕ್ಸಿ ಸ್ಕೂಟರ್

ಹೊಸ ಯಮಹಾ ಎನ್‍‍ಮ್ಯಾಕ್ಸ್ 155 ಮ್ಯಾಕ್ಸಿ ಸ್ಕೂಟರ್ ಸ್ಟ್ಯಾಂಡರ್ಡ್, ಕನೆಕ್ಟೆಡ್ ಮತ್ತು ಎಬಿಎಎಸ್ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಕನೆಕ್ಟೆಡ್ ರೂಪಾಂತರದಲ್ಲಿ ಮಾತ್ರ ಪ್ರೆಸ್ಟೀಜ್ ಸಿಲ್ವರ್ ಬಣ್ಣವನ್ನು ಹೊಂದಿರುತ್ತದೆ ಎಂಬುದನ್ನು ಗಮನಿಸಬೇಕು.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಯಮಹಾ ಮ್ಯಾಕ್ಸಿ ಸ್ಕೂಟರ್

ಇದಲ್ಲದೆ ಯಮಹಾ ಎನ್‍‍ಮ್ಯಾಕ್ಸ್ 155 ಮ್ಯಾಕ್ಸಿ ಸ್ಕೂಟರ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಈ ಸ್ಕೂಟರ್ ಅನ್ನು ಯುರೋಪಿಯನ್ ಮಾರುಕಟ್ಟೆಗಳಿಗೆ ಪ್ರತ್ಯೇಕವಾಗಿ ಅಭಿವೃದ್ಧಿಪಡಿಸಲಾಗಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಯಮಹಾ ಮ್ಯಾಕ್ಸಿ ಸ್ಕೂಟರ್

ಹೊಸ ಯಮಹಾ ಎನ್‍‍ಮ್ಯಾಕ್ಸ್ 155 ಮ್ಯಾಕ್ಸಿ ಸ್ಕೂಟರ್ 155ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದೇ ಎಂಜಿನ್ ಯಮಹಾ ವೈಜೆಡ್-ಆರ್ 15 ವಿ3 ಬೈಕಿನಲ್ಲಿ ನೀಡಲಾಗಿದೆ, ಆದರೆ ಮ್ಯಾಕ್ಸಿ-ಸ್ಕೂಟರ್‌ನ ತಕ್ಕಂತೆ ಎಂಜಿನ್ ಅನ್ನು ಟ್ಯೂನ್ ಮಾಡಲಾಗಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಯಮಹಾ ಮ್ಯಾಕ್ಸಿ ಸ್ಕೂಟರ್

ಈ ಎಂಜಿನ್ 8,000 ಆರ್‌ಪಿಎಂನಲ್ಲಿ 15.2 ಬಿಹೆಚ್‌ಪಿ ಪವರ್ ಮತ್ತು 6,500 ಆರ್‌ಪಿಎಂನಲ್ಲಿ 13.9 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಸಿವಿಟಿ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಯಮಹಾ ಮ್ಯಾಕ್ಸಿ ಸ್ಕೂಟರ್

ಇನ್ನು ಡ್ಯುಯಲ್-ಚಾನೆಲ್ ಎಬಿಎಸ್, ಟ್ರ್ಯಾಕ್ಷನ್ ಕಂಟ್ರೋಲ್, ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಂ, ಹೆಡ್‌ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್‌ಗಾಗಿ ಎಲ್‌ಇಡಿ ಲೈಟಿಂಗ್ ಅನ್ನು ನೀಡಿಲಾಗಿದೆ. ಇನ್ನು ಸ್ಕೂಟರ್‌ನೊಂದಿಗೆ ನೀಡಲಾಗುವ ಇತರ ವೈಶಿಷ್ಟ್ಯಗಳು ಒಳಗೊಂಡಿವೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಯಮಹಾ ಮ್ಯಾಕ್ಸಿ ಸ್ಕೂಟರ್

ಯಮಹಾ ಎನ್‍‍ಮ್ಯಾಕ್ಸ್ 155 ಮ್ಯಾಕ್ಸಿ ಸ್ಕೂಟರ್ ಟಿಎಫ್‌ಟಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟ್ರ್ಯಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ಎಲೆಕ್ಟ್ರಿಕ್ ಪವರ್ ಸಾಕೆಟ್ ಕೂಡ ಸಿಗುತ್ತದೆ. ಎನ್‌ಮ್ಯಾಕ್ಸ್ 155 ಸ್ಕೂಟರ್ ಸಿಸಿಯು ತಂತ್ರಜ್ಞಾನವನ್ನು ಹೊಂದಿದ್ದು, ಇದನ್ನು ಬ್ಲೂಟೂತ್ ಮೂಲಕ ಸ್ಮಾರ್ಟ್‌ಫೋನ್ ಮೂಲಕ ಯಮಹಾದ ವೈ-ಕನೆಕ್ಟ್ ಅಪ್ಲಿಕೇಶನ್‌ಗೆ ಕನೆಕ್ಟ್ ಮಾಡಬಹುದು.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಯಮಹಾ ಮ್ಯಾಕ್ಸಿ ಸ್ಕೂಟರ್

ಯಮಹಾ ಎನ್‍‍ಮ್ಯಾಕ್ಸ್ 155 ಮ್ಯಾಕ್ಸಿ ಸ್ಕೂಟರ್ ಸಸ್ಪಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ ಸ್ವಿಂಗಾರ್ಮ್ ಸೆಟಪ್ ಅನ್ನು ಹೊಂದಿದೆ. ಈ ಮ್ಯಾಕ್ಸಿ ಸ್ಕೂಟರ್ 131 ಕೆ.ಜಿ ತೂಕವನ್ನು ಹೊಂದಿದೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ಪ್ರೀಮಿಯಂ ಎನ್‍‍ಮ್ಯಾಕ್ಸ್ 155 ಮ್ಯಾಕ್ಸಿ ಸ್ಕೂಟರ್ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ.

Most Read Articles

Kannada
Read more on ಯಮಹಾ yamaha
English summary
2021 Yamaha NMax 155 Maxi Scooter Gets New ‘Prestige Silver’ Colour. Read In Kannada.
Story first published: Saturday, March 6, 2021, 15:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X