ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಜನಪ್ರಿಯ ದ್ವಿಚಕ್ರ ವಾಹನ ತಯಾರ ಕಂಪನಿಯಾದ ಯಮಹಾ ತನ್ನ 2021ರ ಎಕ್ಸ್‌ಎಸ್‌ಆರ್ 155 ರೆಟ್ರೊ-ಲುಕಿಂಗ್ ಬೈಕ್ ಅನ್ನು ಇಂಡೋನೇಷ್ಯಾದಲ್ಲಿ ಹೊಸ ಬಣ್ಣದ ಆಯ್ಕೆಯಲ್ಲಿ ಪರಿಚಯಿಸಿದೆ. ಈ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್ ಬ್ರ್ಯಾಂಡ್‌ನ ಜನಪ್ರಿಯ ಬೈಕ್‌ಗಳಲ್ಲಿ ಒಂದಾಗಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್ ಮ್ಯಾಟ್ ಗ್ರೀನ್ ಬಾಡಿ ಬಣ್ಣ ಮತ್ತು ರಿಬ್ಬಡ್ ಸಿಂಗಲ್-ಪೀಸ್ ಸೀಟ್ ಕಂದು ಬಣ್ಣದ ಫಿನಿಶಿಂಗ್ ನೊಂದಿಗೆ ವಿಂಟೇಜ್ ವೈಬ್ ಅನ್ನು ಹೊಂದಿದೆ. ಇದಲ್ಲದೆ ಫ್ಯೂಯಲ್ ಟ್ಯಾಂಕ್ ಸ್ಪೋರ್ಟಿ ಗ್ರಾಫಿಕ್ಸ್ ನೊಂದಿಗೆ ಬರುತ್ತದೆ ಮತ್ತು ಸೈಡ್ ಪ್ಯಾನಲ್ ಗಳನ್ನು ಬ್ರಷ್ಡ್ ಮೆಟಲ್ ಫಿನಿಶಿಂಗ್ ಹೊಂದಿದೆ. ಕಾಸ್ಮೆಟಿಕ್ ಅಪ್‌ಡೇಟ್‌ಗಳ ಹೊರತಾಗಿ ಯಮಹಾ ಎಕ್ಸ್‌ಎಸ್‌ಆರ್ 155 ಬೈಕಿನಲ್ಲಿ ಬೇರೆ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿತ್ತು. ಆದರೆ ಯಾವುದೇ ಅಧಿಕೃತ ಮಾಹಿತಿಯನ್ನು ಯಮಹಾ ಕಂಪನಿ ಬಹಿರಂಗಪಡಿಸಿಲ್ಲ. ಯಮಹಾ ಕಂಪನಿಯು ತನ್ನ ಎಕ್ಸ್‌ಎಸ್‌ಆರ್ ಸರಣಿಯನ್ನು ವಿಸ್ತರಿಸುತ್ತಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಇತ್ತೀಚೆಗೆ ಯಮಹಾ ಕಂಪನಿಯು ಎಂಟ್ರಿ ಲೆವೆಲ್ ಎಕ್ಸ್‌ಎಸ್‌ಆರ್ 125 ಬೈಕನ್ನು ಯುರೋಪಿನಲ್ಲಿ ಇತ್ತೀಚೆಗೆ ಪರಿಚಯಿಸಿದೆ. ಇನ್ನು ಎಕ್ಸ್‌ಎಸ್‌ಆರ್ 155 ಮಾದರಿಯು ಕಂಪನಿಯ 'ಸ್ಪೋರ್ಟ್ ಹೆರಿಟೇಜ್' ಸರಣಿಯಲ್ಲಿ ವಿಶ್ವದಾದ್ಯಂತ ಮಾರಾಟವಾಗುವ ಅತ್ಯಂತ ಚಿಕ್ಕ ಬೈಕು ಆಗಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಈ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್ ಕ್ಲಾಸಿಕ್-ರೆಟ್ರೊ ವಿನ್ಯಾಸ ಮತ್ತು ಮಾರ್ಡನ್ ಲುಕ್ ಅನ್ನು ಹೊಂದಿದೆ. ಈ ಬೈಕ್ ದುಂಡಗಿನ ಆಕಾರದ ಹೆಡ್‌ಲೈಟ್ ಮತ್ತು ವಿಭಿನ್ನ ಶೈಲಿಯ ಇಂಧನ ಟ್ಯಾಂಕ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ವೃತ್ತಾಕಾರದ ಟೈಲ್-ಲೈಟ್, ಸಿಂಗಲ್-ಪಾಡ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮತ್ತು ಸಿಂಗಲ್-ಪೀಸ್ ರಿಬ್ಬಡ್ ಸೀಟ್ ಅನ್ನು ಪಿಲಿಯನ್ ಗ್ರ್ಯಾಬ್ ಬೆಲ್ಟ್ ನೊಂದಿಗೆ ಮಧ್ಯದಲ್ಲಿ ಇರಿಸಲಾಗಿದೆ. ಇದು ಬೈಕಿನ ರೆಟ್ರೊ ಲುಕ್ ಅನ್ನು ಇನ್ನಷ್ಟು ಹೆಚ್ಚಿಸುತ್ತದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಈ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕಿನಲ್ಲಿನ ಸಿಂಗಲ್-ಪಾಡ್ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸವಾರರಿಗೆ ಹೆಚ್ಚಿನ ಮಾಹಿತಿಯನ್ನು ನೀಡುತ್ತದೆ. ಇದರಲ್ಲಿ ಡಿಜಿಟಲ್ ಟ್ರಿಪ್ ಮೀಟರ್, ಫ್ಯೂಯಲ್ ಗೇಜ್, ಸ್ಪೀಡೋಮೀಟರ್, ಒಡಿಒ ಜೊತೆ ಗೇರ್ ಇಂಡಿಕೇಟರ್ ಮತ್ತು ಟ್ರಿಪ್ ಇಂಡಿಕೇಟರ್ ಮಾಹಿತಿಯು ಒಳಗೊಂಡಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಈ ಯಮಹಾ ಎಕ್ಸ್‌ಎಸ್‌ಆರ್ 155 ಬೈಕಿನಲ್ಲಿ ಎಂಟಿ -15 ಮತ್ತು ಆರ್ 15ವಿ 3.0 ನಲ್ಲಿ ಅಳವಡಿಸಿರುವಂತಹ ಅದೇ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಬೈಕಿನಲ್ಲಿ ವಿವಿಎ ತಂತ್ರಜ್ಞಾನದೊಂದಿಗೆ ಲಿಕ್ವಿಡ್-ಕೂಲ್ಡ್ ಸಿಂಗಲ್ ಸಿಲಿಂಡರ್ 155 ಸಿಸಿ ಎಂಜಿನ್ ಅನ್ನು ಹೊಂದಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಈ ಎಂಜಿನ್ 18.9 ಬಿಹೆಚ್‍ಪಿ ಪವರ್ ಮತ್ತು 14.7 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ ಅಸಿಸ್ಟ್ ಕ್ಲಚ್‌ನೊಂದಿಗೆ ಜೋಡಿಸಲಾಗಿದೆ. ಯಮಹಾ ಎಕ್ಸ್‌ಎಸ್‌ಆರ್ 155 ಸ್ಟೀಲ್-ಡೆಲ್ಟಾಬಾಕ್ಸ್ ಫ್ರೇಮ್ ಅನ್ನು ಹೊಂದಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಈ ಬೈಕಿನಲ್ಲಿ ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ (ಯುಎಸ್‌ಡಿ) ಅಪ್‌ಸೈಡ್-ಡೌನ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಅನ್ನು ಅಳವಡಿಸಲಾಗಿದೆ. ಇನ್ನು ಈ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ 150 ಸಿಸಿ ಸರಣಿಯಲ್ಲಿರುವ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Friday, May 14, 2021, 9:58 [IST]
English summary
2021 Yamaha XSR 155 Gets New Colour Scheme. Read In Kannada.
Read more on ಯಮಹಾ yamaha
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+