ಆಕರ್ಷಕ ವಿನ್ಯಾಸದಲ್ಲಿ ಬಿಡುಗಡೆಗೊಂಡ 2021ರ ಯಮಹಾ ಬೋಲ್ಡ್ ಬೈಕ್
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಯಮಹಾ ಬೋಲ್ಟ್ ಬೈಕನ್ನು ನವೀಕರಿಸಿ ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಬಾಬರ್ ಶೈಲಿಯ 2021ರ ಯಮಹಾ ಬೋಲ್ಡ್ ಬೈಕ್ ನೂತನ ವಿನ್ಯಾಸ ಮತ್ತು ಕೆಲವು ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿದೆ.

ಈ ಹೊಸ ಯಮಹಾ ಬೋಲ್ಟ್ ಬೈಕ್ ಒಂದೇ ರೂಪಾಂತರದಲ್ಲಿ ಬಿಡುಗಡೆಯಾಗಿದೆ. ಈ ಬೈಕಿನಲ್ಲಿ ಸಿಲ್ವರ್ ಬಣ್ಣದಿಂದ ಕೂಡಿದ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿದೆ. ಈ ಬೈಕಿನ ಮುಂಭಾಗದಲ್ಲಿ 19 ಇಂಚಿನ ವ್ಹೀಲ್ ಮತ್ತು ಹಿಂಭಾಗ 16-ಇಂಚಿನ ವ್ಹೀಲ್ ನೊಂದಿಗೆ ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿವೆ. ಈ ಬೈಕಿನ ಮುಂಭಾಗದಲ್ಲಿ ಆಕರ್ಷಕವಾದ ವೃತಕಾರದ ಹೆಡ್‌ಲೈಟ್ ಅನ್ನು ಹೊಂದಿದೆ.

ಈ ಹೊಸ ಬೈಕಿನಲ್ಲಿ ಕಾಂಪ್ಯಾಕ್ಟ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳಡಿಸಲಾಗಿದೆ. ಈ ಕ್ಲಸ್ಟರ್ ವೇಗ, ಓಡೂಮೀಟರ್, ನ್ಯಾವಿಗೇಷನ್, ಫ್ಯೂಯಲ್ ಗೇಜ್ ಮತ್ತು ಇತರ ಮಾಹಿತಿಗಳನ್ನು ಪ್ರದರ್ಶಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇನ್ನು ಯಮಹಾ ಬೋಲ್ಟ್ ಬೈಕಿನಲ್ಲಿ ಸ್ಪ್ಲಿಟ್-ಸ್ಟೈಲ್ ಸೀಟ್, ರೌಂಡ್ ಟೈಲ್‌ಲೈಟ್ ಮತ್ತು ಎಕ್ಸಾಸ್ಟ್ ಕ್ಯಾನಿಸ್ಟರ್‌ಗೆ ಡ್ಯುಯಲ್-ಟೋನ್ ಫಿನಿಶ್ ಹೊಂದಿದೆ. ಇನ್ನು ಈ ಬೈಕಿನಲ್ಲಿ 13-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ.

ಇನ್ನು ಈ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಗ್ಯಾಸ್-ಚಾರ್ಜ್ಡ್ ಟ್ವಿನ್ ಸಡ್ ಸ್ಪಿರ್ಗ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಸುರಕ್ಷತಾ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರಲ್ಲಿ ಮುಂಭಾಗದಲ್ಲಿ ಸಿಂಗಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿಯು ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ.

ಹೊಸ ಯಮಹಾ ಬೋಲ್ಟ್ ಬೈಕಿನಲ್ಲಿ 941 ಸಿಸಿ, ವಿ-ಟ್ವಿನ್, ಎಸ್‌ಒಹೆಚ್‌ಸಿ ಸೆಟಪ್ ಹೊಂದಿರುವ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ನೊಂದಿಗೆ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಕೂಡ ಒಳಗೊಂಡಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಈ ಎಂಜಿನ್ 5,500 ಆರ್‌ಪಿಎಂನಲ್ಲಿ 53.2 ಬಿಹೆಚ್‌ಪಿ ಮತ್ತು 3,000 ಆರ್‌ಪಿಎಂನಲ್ಲಿ 80 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

2021ರ ಯಮಹಾ ಬೋಲ್ಟ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವುದರ ಬಗ್ಗೆ ಯಾವುದೇ ಮಾಹಿತಿಗಳು ಬಹಿರಂಗವಾಗಿಲ್ಲ. ಅಲ್ಲದೇ ಈ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ. ಆದರೆ ಇತರ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಬಹುದು.


Click it and Unblock the Notifications